ಬಾದಾಮಿ ಸೋಲಿಗೆ ಕಣ್ಣೀರು ಸುರಿಸಿದ ಶ್ರೀರಾಮುಲು

ಬಾಗಲಕೋಟೆ, ಮೇ 15: ಬಾದಾಮಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಲ್ಪ ಮತಗಳ ಅಂತರದಿಂದ ಸೋಲುಕಂಡ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಕಣ್ಣೀರು ಸುರಿಸಿ ತಮ್ಮ ನಿರಾಸೆ ವ್ಯಕ್ತಪಡಿಸಿದರು.

ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯದ ಜನರು ಹೆಚ್ಚಿದ್ದ ಕಾರಣ ಅವರನ್ನು ಬಿಜೆಪಿ ತನ್ನ ಅಬ್ಯರ್ಥಿ ಎಂದು ಘೋಷಿಸಿತ್ತು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಎದುರಿಸಲು ಶ್ರೀರಾಮುಲು ಸಮರ್ಥ ಅಭ್ಯರ್ಥಿ ಎಂಬ ಕಾರಣಕ್ಕೆ ಅವರನ್ನು ನಿಲ್ಲಿಸಲಾಗಿತ್ತು. ಆದರೆ ಅಲ್ಪ ಮತಗಳ ಅಂತರದಲ್ಲಿ ಅವರು ಸೋಲು ಕಂಡಿದ್ದಾರೆ.

ಒಟ್ಟು ಮತಗಳ ನಿಖರ ಸದ್ಯಕ್ಕೆ ಲಭ್ಯವಿಲ್ಲದಿದ್ದರೂ ಕೆಲವು ಮಾಹಿತಿಗಳ ಪ್ರಕಾರ ಸಿದ್ದರಾಮಯ್ಯ ಸುಮಾರು 1700 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಿಂದಲೂ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶ್ರೀರಾಮುಲು ಅವರು ಆ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ.

Karnataka election results: Sriramulu feels sad for his defeat

ಇತ್ತ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ ಟಿ ದೇವೇಗೌಡ ಅವರ ವಿರುದ್ದ ಸಿದ್ದರಾಮಯ್ಯ ಸುಮಾರು 30000 ಮತಗಳ ಅಂತರದಲ್ಲಿ ಹೀನಾಯ ಸೋಲುಕಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+