ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ

Recommended Video

      ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಯಡಿಯೂರಪ್ಪ | Oneindia Kannada

      ಬೆಂಗಳೂರು, ಮೇ 17 : ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರು ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಗುರುವಾರ ಬೆಳಗ್ಗೆ 9 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಿದರು. 2018ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಪಡೆದು ಜಯಗಳಿಸಿತ್ತು.

      ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ 75 ವರ್ಷದ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಪ್ರಮಾಣ ವಚನ ಬೋಧಿಸಿದರು.

      ಬಿಳಿಯ ಸಫಾರಿ ಸೂಟು ಧರಿಸಿದ್ದ ಬಿ.ಎಸ್.ಯಡಿಯೂರಪ್ಪ ಅವರು, ಹಸಿರು ಶಾಲು ಹೊದ್ದಿದ್ದಾರೆ. ದೇವರು ಮತ್ತು ರೈತರ ಹೆಸರಿನಲ್ಲಿ ಯಡಿಯೂರಪ್ಪ ಅವರು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

      Karnataka elections 2018 : BS Yeddyurappa take oath as Chief Minister of Karnataka

      ರಾಜಭವನದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮಾತ್ರ ಪ್ರಮಾಣ ವಚನ ಸ್ವೀಕರಿಸಿದರು. ಯಾವುದೇ ಸಚಿವರು ಯಡಿಯೂರಪ್ಪ ಅವರ ಜೊತೆ ಪ್ರಮಾಣ ವಚನ ಸ್ವೀಕಾರ ಮಾಡಲಿಲ್ಲ.

      ಕರ್ನಾಟಕದ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಗೂ ಮೊದಲು ಬಿ.ಎಸ್.ಯಡಿಯೂರಪ್ಪ ಅರನ್ನು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಣೆ ಮಾಡಿತ್ತು. ಚುನಾವಣೆಯಲ್ಲಿ 104 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+