• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

‌VVPAT ಹೇಗೆ ಕೆಲಸಮಾಡುತ್ತದೆ? ಮತದಾನಕ್ಕೂ ಮುನ್ನ ಒಂದಷ್ಟು ಮಾಹಿತಿ

|
   ಜೆಡಿಎಸ್ ಕಾಂಗ್ರೆಸ್ ಮೈತ್ರಿ ಬಗ್ಗೆ ಡಿ ಕೆ ಶಿವಕುಮಾರ್ ಹೇಳಿದ್ದೇನು? | Oneindia Kannada

   ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಮತದಾನ ಖಾತ್ರಿ ಪಡಿಸುವ ವಿವಿಪಿಎಟಿ(Voter Verifiable Paper Audit Trail) ಮತ ಯಂತ್ರವನ್ನು ಈಗಾಗಲೇ ಹಲವು ರಾಜ್ಯಗಳಲ್ಲಿ ಪ್ರಯೋಗಕ್ಕೆ ತರಲಾಗಿದೆ. ಇವಿಎಂ(Electronic Voting Machines) ಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಚುನಾವಣೆಗಳು ಪಾರದರ್ಶಕವಾಗಿರಬೇಕು ಎಂಬ ಕಾರಣಕ್ಕೆ ವಿವಿಪ್ಯಾಟ್ ಗಳನ್ನು ಪರಿಚಯಿಸಲಾಗಿದೆ.

   ಸಮೀಕ್ಷೆಯೊಂದರ ಪ್ರಕಾರ ರಾಜ್ಯದ ಶೇ. 72.4 ರಷ್ಟು ಜನರಿಗೆ ವಿವಿಪ್ಯಾಟ್ ಬಗ್ಗೆ ಎಳ್ಳಷ್ಟೂ ಗೊತ್ತಿಲ್ಲ! ಆದ್ದರಿಂದ ಈಗಾಗಲೇ ಹಲವೆಡೆ ವಿವಿಪ್ಯಾಟ್ ಮತ್ತು ಇವಿಎಂ ಬಳಕೆ, ಉಪಯೋಗದ ಕುರಿತು ಮಾಹಿತಿ ನೀಡುವ ಕುರಿತು ಹಲವು ಕಾರ್ಯಾಗಾರಗಳನ್ನು, ಪ್ರಾತ್ಯಕ್ಷಿಕೆಗಳನ್ನು ಚುನಾವಣಾ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾಗಿದೆ.

   ಮತದಾನವನ್ನು ಖಾತ್ರಿ ಪಡಿಸುವ ಈ ವಿವಿಪಿಎಟಿ ಯಂತ್ರ ಹೇಗೆ ಕಾರ್ಯ ನಿರ್ವಹಿಸುತ್ತದೆ? ಇದರ ಉಪಯೋಗವೇನು? ಮತದಾರ ಮತದಾನಕ್ಕೂ ಮುನ್ನ ತಿಳಿಯಬೇಕಾದ ಅಂಶಗಳೇನು? ಇತ್ಯಾದಿ ಮಾಹಿತಿ ಇಲ್ಲಿದೆ.

   ಮತದಾರರೇ, ಮತದಾನಕ್ಕೂ ಮುನ್ನ EVM, VVPAT ಬಗ್ಗೆ ತಿಳಿದುಕೊಳ್ಳಿ

   * ಮತದಾರ ಮತದಾನ ಮಾಡುವ ಸಂದರ್ಭದಲ್ಲಿ ತಾನು ಮತ ಚಲಾಯಿಸಬೇಕೆಂದಿರುವ ಚಿಹ್ನೆ ಮತ್ತು ಹೆಸರಿನ ಪಕ್ಕದಲ್ಲಿರುವ ನೀಲಿ ಬಣ್ಣ ಬಟನ್ ಒತ್ತಬೇಕು. ಆಗ ಕೆಂಪು ದೀಪ ಬೆಳಗುತ್ತದೆ.

   * ಈ ಇವಿಎಂ ಯಂತ್ರಕ್ಕೆ ವಿವಿಪ್ಯಾಟ್ ಯಂತ್ರವನ್ನು ಸಂಪರ್ಕಿಸಲಾಗಿರುತ್ತದೆ.

   * ವಿವಿಪ್ಯಾಟ್ ಯಂತ್ರದ ಪರದೆಯಲ್ಲಿ ಮತದಾರನು ತಾನು ಮತ ಚಲಾಯಿಸಿರುವ ಚಿಹ್ನೆ ಮತ್ತು ಹೆಸರಿನ ವಿವರವುಳ್ಳ ಚೀಟಿಯನ್ನು 7 ಕ್ಷಣಗಳ ಕಾಲ ಡಿಸ್ಪ್ಲೇ ಸೆಕ್ಷನ್ ನಲ್ಲಿ ವೀಕ್ಷಿಸಬಹುದು.

   * ತದನಂತರ ಆ ಚೀಟಿಯು ಡ್ರಾಪ್ ಬಾಕ್ಸ್ ಒಳಗೆ ತುಂಡಾಗಿ ಬೀಳುತ್ತದೆ (ಈ ಚೀಟಿಯನ್ನು ಮತದಾರ ಪಡೆಯುವಂತಿಲ್ಲ).

   * ಈ ಮೂಲಕ ಮತದಾರ, ತಾನು ಆರಿಸಬೇಕೆಂದಿರುವ ವ್ಯಕ್ತಿ / ಪಕ್ಷಕ್ಕೆ ಮತ ಚಲಾವಣೆಯಾಗಿರುವುದನ್ನು ಖಾತ್ರಿಪಡಿಸಿಕೊಳ್ಳಬಹುದಾಗಿದೆ.

   * ಬ್ಯಾಲೆಟ್ ಚೀಟಿ ಕಾಣಿಸದಿದ್ದರೆ ಹಾಗೂ ಬೀಪ್ ಶಬ್ದ ಕೇಳಿಸದಿದ್ದರೆ ಮತದಾರನು ಮತಗಟ್ಟೆಯ ಅಧ್ಯಕ್ಷಾಧಿಕಾರಿಯನ್ನು ಸಂಪರ್ಕಿಸಬಹುದು.

   * ಇವಿಎಂ ಯಂತ್ರಗಳು ಅತ್ಯಂತ ಸುರಕ್ಷಿತವಾಗಿವೆ. ಈ ಯಂತ್ರದಲ್ಲಿ ಮೈಕ್ರೋ ಕಂಟ್ರೋಲರ್ ಚಿಪ್ ಅಳವಡಿಸಲಾಗಿದ್ದು, ಇವಿಎಂ ನ್ನು ಒಮ್ಮೆ ಮಾತ್ರ ಪ್ರೊಗ್ರಾಂ ಮಾಡಲು ಸಾಧ್ಯ.

   * ಚಿಪ್ಪಿನಲ್ಲಿರುವ ಸಾಫ್ಟ್‍ವೇರ್ ಕೋಡ್ ರೀಡ್ ಅಥವಾ ರೀರೈಟ್ ಮಾಡಲು ಸಾಧ್ಯವಿಲ್ಲ.

   * ಈ ತಂತ್ರಾಂಶವನ್ನು ಸರ್ಕಾರದ ಅಂಗಸಂಸ್ಥೆಯಾದ ಬಿಇಎಲ್ ಮತ್ತು ಇಸಿಐಇಲ್ ವತಿಯಿಂದ ಅಭಿವೃದ್ಧಿಪಡಿಸಲಾಗಿದೆ.

   * ಇವಿಎಂ ಯಂತ್ರಗಳನ್ನು ಅಂತರ್ಜಾಲ ಅಥವಾ ಇನ್ಯಾವುದೇ ನೆಟ್‍ವರ್ಕ್ ಸಂಪರ್ಕದಿಂದ ನಿಯಂತ್ರಿಸಲು ಸಾಧ್ಯವಿಲ್ಲ.

   * ಯಂತ್ರದಲ್ಲಿ ಯಾವುದೇ ಆಪರೇಟಿಂಗ್ ಸಿಸ್ಟಮ್ ಬಳಕೆ ಮಾಡದಿರುವುದರಿಂದ ವೈರಸ್ ದಾಳಿ ಉಂಟಾಗುವ ಭಯವೂ ಇಲ್ಲ.

   ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

   English summary
   Karnataka assembly electons 2018: Election commission has introduced Voter Verifiable Paper Audit Trail(VVPAT) machines in karnataka for assembly elections. Here are some informetion which explains how does VVPAT work.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more