ಪಬ್ಲಿಕ್ ಟಿವಿ ಸಮೀಕ್ಷೆ : ಬೆಂಗಳೂರು ನಗರ 'ಕೈ' ವಶಕ್ಕೆ!

ಬೆಂಗಳೂರು, ಮೇ 02 : ಪಬ್ಲಿಕ್ ಟಿವಿ ನಡೆಸಿದ ಕರ್ನಾಟಕ ವಿಧಾನಸಭೆ ಚುನಾವಣಾ ಪೂರ್ವ ಸಮೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಬೆಂಗಳೂರು ನಗರದಲ್ಲಿ ಕಾಂಗ್ರೆಸ್ 12 ಸ್ಥಾನಗಳಲ್ಲಿ ಜಯಗಳಿಸಲಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಬಗ್ಗೆ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಫಲಿತಾಂಶವನ್ನು ಪಬ್ಲಿಕ್ ಟಿವಿ ಬುಧವಾರ ರಾತ್ರಿ ಪ್ರಕಟಿಸಿದೆ. ಬೆಂಗಳೂರು ನಗರದ 28ಕ್ಷೇತ್ರಗಳ ಪೈಕಿ ಕಾಂಗ್ರೆಸ್ 12 ಸ್ಥಾನಗಳಲ್ಲಿ ಜಯಗಳಿಸಲಿದೆ.

ಏಪ್ರಿಲ್ 30ರಂದು ಪ್ರಕಟಗೊಂಡಿದ್ದ ಸಿ-ಫೋರ್ ಸಮೀಕ್ಷೆಯ ವರದಿಯಲ್ಲಿಯೂ ಬೆಂಗಳೂರು ನಗರದಲ್ಲಿ ಕಾಂಗ್ರೆಸ್ 17-19 ಸ್ಥಾನಗಳಲ್ಲಿ ಜಯಗಳಿಸಿದೆ ಎಂದು ಹೇಳಿತ್ತು. ಪಬ್ಲಿಕ್ ಟಿವಿಯ ಸಮೀಕ್ಷೆಯೂ ಕಾಂಗ್ರೆಸ್ ನಗರವನ್ನು ಕೈವಶ ಮಾಡಿಕೊಳ್ಳಲಿದೆ ಎಂದು ಹೇಳಿದೆ.

rahul gandhi

ಯಾರಿಗೆ ಎಷ್ಟು ಸ್ಥಾನ? : ಪಬ್ಲಿಕ್ ಟಿವಿ ಚುನಾವಣಾ ಪೂರ್ವ ಸಮೀಕ್ಷೆಯಂತೆ ಬೆಂಗಳೂರು ನಗರದಲ್ಲಿ ಯಾರಿಗೆ ಎಷ್ಟು ಸ್ಥಾನ ಸಿಗಲಿದೆ ನೋಡೋಣ. ನಗರದಲ್ಲಿ ಒಟ್ಟು 28 ವಿಧಾನಸಭಾ ಕ್ಷೇತ್ರಗಳಿವೆ.

ಕಾಂಗ್ರೆಸ್ - 12

ಬಿಜೆಪಿ - 10

ಜೆಡಿಎಸ್ - 01

ಸಮಬಲದ ಹೋರಾಟ - 05

ನಗರದ 5 ಕ್ಷೇತ್ರಗಳಲ್ಲಿ ಸಮಬಲದ ಹೋರಾಟ ನಡೆಯಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. ಮೇ 12ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, 15ರಂದು ಫಲಿತಾಂಶ ಪ್ರಕಟವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+