ಪಬ್ಲಿಕ್ ಟಿವಿ ಚುನಾವಣಾ ಪೂರ್ವ ಸಮೀಕ್ಷೆ : ಯಾರಿಗೆ ಎಷ್ಟು ಸ್ಥಾನ?
ಬೆಂಗಳೂರು, ಮೇ 02 : ಕರ್ನಾಟಕ ವಿಧಾನಸಭೆ ಚುನಾವಣೆ ಬಗ್ಗೆ ಪಬ್ಲಿಕ್ ಟಿವಿ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಿದೆ. ಆಡಳಿತಾರೂಢ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದ್ದು, ಅತಂತ್ರ ವಿಧಾನಸಭೆ ರಚನೆಯಾಗಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಬಗ್ಗೆ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆಯ ಫಲಿತಾಂಶವನ್ನು ಪಬ್ಲಿಕ್ ಟಿವಿ ಬುಧವಾರ ರಾತ್ರಿ ಪ್ರಕಟಿಸಿದೆ. ಕಾಂಗ್ರೆಸ್ 95-100 ಸ್ಥಾನಗಳಲ್ಲಿ ಜಯಗಳಿಸಲಿದೆ. ಆದರೆ, ಪಕ್ಷ ಸ್ಪಷ್ಟ ಬಹುಮತವನ್ನು ಪಡೆಯುವಲ್ಲಿ ವಿಫಲವಾಗಲಿದೆ.
2018ರ ಕರ್ನಾಟಕ ವಿಧಾನಸಭೆ ಚುನಾವಣೆ ಬಗ್ಗೆ ಇದುವರೆಗೆ ಬಂದ ಎಲ್ಲಾ ಸಮೀಕ್ಷೆಗಳು ಅತಂತ್ರ ವಿಧಾನಸಭೆ ರಚನೆಯಾಗಲಿವೆ ಎಂದು ಹೇಳಿವೆ. ಚುನಾವಣೆಗೆ 10 ದಿನ ಇರುವಾಗ ಬಂದ ಈ ಸಮೀಕ್ಷೆಯ ಅತಂತ್ರ ವಿಧಾನಸಭೆ ರಚನೆಯಾಗಲಿದೆ ಎಂದು ಹೇಳಿದೆ.
ಮೇ 12ರಂದು ಕರ್ನಾಟಕ ವಿಧಾನಸಭೆ ಚುನಾವಣೆ 2018ಕ್ಕೆ ಮತದಾನ ನಡೆಯಲಿದೆ. ಮೇ 15ರಂದು ಫಲಿತಾಂಶ ಪ್ರಕಟವಾಗಲಿದೆ. ಇದು 'ಸೆಮಿ ಫೈನಲ್' ಫಲಿತಾಂಶ ಎಂದು ಪಬ್ಲಿಕ್ ಟಿವಿ ಹೇಳಿದ್ದು, ಇನ್ನೊಂದು ಫಲಿತಾಂಶ ಪ್ರಕಟವಾಗಲಿದೆ.

ಅತಿ ದೊಡ್ಡ ಪಕ್ಷ ಕಾಂಗ್ರೆಸ್
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ಪಬ್ಲಿಕ್ ಟಿವಿ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ.
ಕಾಂಗ್ರೆಸ್ 95-100 ಸ್ಥಾನಗಳಲ್ಲಿ ಜಯಗಳಿಸಲಿದೆ. ಆದರೆ, ಸ್ಪಷ್ಟ ಬಹುಮತಕ್ಕೆ ಬೇಕಾದ 113 ಸ್ಥಾನಗಳನ್ನು ಪಡೆಯುವಲ್ಲಿ ಪಕ್ಷ ವಿಫಲವಾಗಿದೆ.

ಬಿಜೆಪಿಗೆ ಎಷ್ಟು ಸೀಟುಗಳು?
ಕರ್ನಾಟಕ ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಬಿಜೆಪಿ ಮಿಷನ್ 150 ಎಂಬ ಗುರಿ ಹಾಕಿಕೊಂಡಿದೆ. 150 ಸ್ಥಾನಗಳಲ್ಲಿ ಜಯಗಳಿಸಿ ಸರ್ಕಾರ ರಚನೆ ಮಾಡುವ ಗುರಿ ಹೊಂದಿದೆ.
ಆದರೆ, ಪಬ್ಲಿಕ್ ಟಿವಿಯ ಚುನಾವಣಾ ಪೂರ್ವ ಸಮೀಕ್ಷೆ ಬಿಜೆಪಿ 80-85 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಹೇಳಿದೆ. ಇದುವರೆಗೆ ಬಂದ ಎಲ್ಲಾ ಸಮೀಕ್ಷೆಗಳು ಸಹ ಬಿಜೆಪಿಗೆ ಕಡಿಮೆ ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಹೇಳಿವೆ.

ಜೆಡಿಎಸ್ ಕಿಂಗ್ ಮೇಕರ್
ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಕಿಂಗ್ ಮೇಕರ್ ಆಗಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ.
ಸಮೀಕ್ಷೆ ವರದಿಯ ಪ್ರಕಾರ ಜೆಡಿಎಸ್ 40-45 ಸ್ಥಾನಗಳಲ್ಲಿ ಜಯಗಳಿಸಲಿದೆ. ಯಾವುದೇ ಪಕ್ಷಕ್ಕೆ ಬಹುಮತ ಬರದ ಕಾರಣ ಸರ್ಕಾರ ರಚನೆ ಮಾಡಲು ಪಕ್ಷದ ನೆರವು ಪಡೆಯುವುದು ಅನಿವಾರ್ಯವಾಗಲಿದೆ.

ಇತರರು ಎಷ್ಟು ಸೀಟು ಗೆಲ್ಲುವರು?
ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ 0-5 ಇತರೆ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ ಎಂದು ಪಬ್ಲಿಕ್ ಟಿವಿಯ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ.
ಯಾವ ಪಕ್ಷಕ್ಕೂ ಬಹುಮತ ಸಿಕ್ಕಿಲ್ಲ. ಆದ್ದರಿಂದ, ಸರ್ಕಾರ ರಚನೆ ಮಾಡುವಾಗ ಇತರೆ ಅಭ್ಯರ್ಥಿಗಳು ಸರ್ಕಾರ ರಚನೆಗೆ ಬೆಂಬಲ ನೀಡಬೇಕಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications