ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಬಿಜೆಪಿಯವರು ಸಚಿವ ಸ್ಥಾನದ ಆಮಿಷವೊಡ್ಡಿದರು'

|
Google Oneindia Kannada News

ಬೆಂಗಳೂರು, ಮೇ 16 : ಮಾಜಿ ಸಚಿವ, ಕುಷ್ಟಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರಿಗೆ ಬಿಜೆಪಿ ಸಚಿವ ಸ್ಥಾನದ ಆಮಿಷ ವೊಡ್ಡಿಗೆ. ಈ ಮೂಲಕ ಬಿಜೆಪಿ ಅಧಿಕೃತವಾಗಿ ಆಪರೇಷನ್ ಕಮಲಕ್ಕೆ 'ಕೈ' ಹಾಕಿದೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಜಾಣತನದ್ದೆ? ಮುಂದೇನಾಗಲಿದೆ?ಜೆಡಿಎಸ್-ಕಾಂಗ್ರೆಸ್ ಮೈತ್ರಿ ಜಾಣತನದ್ದೆ? ಮುಂದೇನಾಗಲಿದೆ?

ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರು ಈ ಕುರಿತು ಹೇಳಿಕೆ ನೀಡಿದ್ದು, 'ಬಿಜೆಪಿಯಿಂದ ಅಧಿಕೃತವಾಗಿ ನನಗೆ ಕರೆ ಬಂದಿತ್ತು. ಸಚಿವ ಸ್ಥಾನ ನೀಡುವುದಾಗಿ ನನಗೆ ಆಮಿಷ ವೊಡ್ಡಿದರು' ಎಂದು ಹೇಳಿದ್ದಾರೆ.

Karnataka elections result 2018 : Congress MLA claims BJP approached him

'ನಾನು ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಭಾಗವಾಗಿ ಇರುವೆ. ಎಚ್.ಡಿ.ಕುಮಾರಸ್ವಾಮಿ ಅವರೇ ನಮ್ಮ ಮುಖ್ಯಮಂತ್ರಿ' ಎಂದು ಅಮರೇಗೌಡ ಪಾಟೀಲ್ ಬಯ್ಯಾಪೂರ ಹೇಳಿದ್ದಾರೆ.

ಕಾಂಗ್ರೆಸ್‌ ಜೊತೆ ಮೈತ್ರಿಗೆ ಜೆಡಿಎಸ್‌ ಒಪ್ಪಿಗೆ,ಬಿಎಸ್‌ವೈ ಕನಸು ಭಗ್ನಕಾಂಗ್ರೆಸ್‌ ಜೊತೆ ಮೈತ್ರಿಗೆ ಜೆಡಿಎಸ್‌ ಒಪ್ಪಿಗೆ,ಬಿಎಸ್‌ವೈ ಕನಸು ಭಗ್ನ

ಯಾರನ್ನೂ ಸಂಪರ್ಕಿಸಿಲ್ಲ : ಮಾಜಿ ಸಚಿವ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಅವರು, 'ಬಿಜೆಪಿ ಯಾವ ಶಾಸಕರನ್ನೂ ಸಂಪರ್ಕಿಸಿಲ್ಲ. ಇನ್ನೂ ಎರಡು ಮೂರು ದಿನಗಳ ಕಾಲ ಇದೇ ರೀತಿಯ ರಾಜಕೀಯ ಬೆಳವಣಿಗೆಗಳು ನಡೆಯಲಿವೆ' ಎಂದು ಸ್ಪಷ್ಟಪಡಿಸಿದ್ದಾರೆ.

ಪರಮೇಶ್ವರ ಸೂಚನೆ : ಯಾವುದೇ ಕಾಂಗ್ರೆಸ್ ಶಾಸಕರು ಬಿಜೆಪಿ ಜೊತೆ ಹೋಗಬಾರದು. ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಬೆಳವಣಿಗೆಗಳ ಮೇಲೆ ಗಮನವಿಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ಸೂಚನೆ ನೀಡಿದ್ದಾರೆ.

ಶಾಸಕಾಂಗ ಸಭೆ : ಕೆಪಿಸಿಸಿ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಜೆಡಿಎಸ್‌ ಪಕ್ಷಕ್ಕೆ ಬೆಂಬಲ ನೀಡುವ ಕುರಿತು ಸಭೆಯಲ್ಲಿ ನಿರ್ಣಯವನ್ನು ಮಂಡಿಸಿ, ಎಲ್ಲಾ ಶಾಸಕರ ಒಪ್ಪಿಗೆ ಪಡೆದು ರಾಜ್ಯಪಾಲರಿಗೆ ಸಲ್ಲಿಸಲಾಗುತ್ತದೆ.

English summary
Karnataka Election Results 2018 Updates. Congress leader and Kushtagi MLA Amaregouda Linganagouda Patil Bayyapur has claimed that he was approached by the BJP and promised a ministry and he announced that, I'm going to stay here. HD Kumaraswamy is our Chief Minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X