ಯಡಿಯೂರಪ್ಪ ಪ್ರಮಾಣವಚನಕ್ಕೆ ಶುಭಾಶಯಗಳ ಸುರಿಮಳೆ

ಬೆಂಗಳೂರು, ಮೇ 17: "ಕೋಟ್ಯಂತರ ಕನ್ನಡಿಗರು ಕಾತರದಿಂದ ಕಾಯುತ್ತಿದ್ದ ಕ್ಷಣ ಬರುತ್ತಿದೆ. ಬಿ ಎಸ್ ಯಡಿಯೂರಪ್ಪನವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸುವರ್ಣ ಕರ್ನಾಟಕ ರಚನೆಗೆ ಇದು ನಾಂದಿ" ಎಂದು ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ ಭಾವಿ ಬಿ ಎಸ್ ಯಡಿಯೂರಪ್ಪ ಅವರಿಗೆ ಶುಭ ಹಾರೈಸಿದೆ.

ಇಂದು 9 ಗಂಟೆಗೆ ಕರ್ನಾಟಕ ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಬಿ ಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಬಿಜೆಪಿ ಮುಖಂಡರಾದ ಶ್ರೀರಾಮುಲು, ಆರ್ ಅಶೋಕ್, ಗೋವಿಂದ ಕಾರಜೋಳ ಮತ್ತು ಕೆ ಎಸ್ ಈಶ್ವರಪ್ಪ ಅವರು ಸಹ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮೇ 15 ರಂದು ಹೊರಬಿದ್ದ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ 104 ಸ್ಥಾನ ಗೆದ್ದು ಸಿಂಗಲ್ ಲಾರ್ಜೆಸ್ಟ್ ಪಾರ್ಟಿಯಾಗಿ ಹೊರಹೊಮ್ಮಿತ್ತು. ಆದರೆ ಬಹುಮತ ಪಡೆದಿರಲಿಲ್ಲ. ಇತ್ತ 78 ಸ್ಥಾನ ಗೆದ್ದ ಕಾಂಗ್ರೆಸ್, 38 ಸ್ಥಾನ ಗೆದ್ದ ಜೆಡಿಎಸ್ ಗೆ ತನ್ನ ಬೆಂಬಲ ನೀಡಿ ಸರ್ಕಾರ ರಚಿಸಲು ಮನವಿ ಮಾಡಿತ್ತು. ಆಅದರೆ ರಾಜ್ಯಪಾಲರು ಬಿಜೆಪಿಯನ್ನು ಸರ್ಕಾರ ರಚನೆಗೆ ಆಹ್ವಾನಿಸಿದ್ದರಿಂದ ಇಂದು ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನಕ್ಕೆ ಸುಪ್ರೀಂ ಕೋರ್ಟ್ ಸಹ ಗ್ರೀನ್ ಸಿಗ್ನಲ್ ನೀಡಿದೆ. ತಮ್ಮ ನೆಚ್ಚಿನ ನಾಯಕ ಬಿ ಎಸ್ ವೈ ಪ್ರಮಾಣ ವಚನಕ್ಕೆ ಟ್ವಿಟ್ಟರ್ ನಲ್ಲಿ ಹಲವರು ಶುಭ ಹಾರೈಸಿದ್ದಾರೆ.

ಸುವರ್ಣ ಯುಗ ಬಂದಿದೆ

"ಕರ್ನಾಟಕದ ಸುವರ್ಣ ಘಳಿಗೆ ಬಂದಿದೆ. ಈ ಐತಿಹಾಸಿಕ ದಿನ ಕರ್ನಾಟಕದ ಮುಖ್ಯಮಂತ್ರಿಯಾಗಿ ಬಿ ಎಸ್ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕರ್ನಾಟಕದ ಜನರು ಬಿ ಎಸ್ ಯಡಿಯೂರಪ್ಪನವರ ಕೈಹಿಡಿದಿದ್ದಾರೆ. ಸರ್ವಾಧಿಕಾರಕ್ಕೆ ಅಂತ್ಯ ಸಿಕ್ಕಿದೆ. ಇನ್ನೇನಿದ್ದರೂ ಜನರ ಸರ್ಕಾರ" ಎಂದು ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಟ್ವೀಟ್ ಮಾಡಿದ್ದಾರೆ.

ಜನರ ಆಶೀರ್ವಾದ ಬಿ ಎಸ್ ವೈ ಮೇಲಿದೆ

ಟೀಂ ಎ ಮತ್ತು ಟೀಂ ಬಿ ಸೇರಿ ಜನಾದೇಶಕ್ಕೆ ಸೆಡ್ಡುಹೊಡೆದು ಸರ್ಕಾರ ರಚಿಸಿ, ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಹೊರಟಿದ್ದರು. ಆದರೆ ಕರ್ನಾಟಕ ಜನರ ಆಶೀರ್ವಾದದಿಂದ ಇಂದು ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ, ಬಿ ಎಸ್ ವೈ ಮುಖ್ಯಮಂತ್ರಿಯಾಗುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ ನಿತಿನ್ ಕುಮಾರ್ ಎ.

ಅವರೊಬ್ಬರೇ ಮುಖ್ಯಮಂತ್ರಿ ಹುದ್ದೆಗೆ ಸೂಕ್ತ

ನಾವು ಕರ್ನಅತಕದ ಜನರು ಬಿ ಎಸ್ ಯಡಿಯೂರಪ್ಪ ಅವರನ್ನು ಬೆಮಬಲಿಸುತ್ತೇವೆ. ಎಸ್ ಎಂ ಕೃಷ್ಣ ಅವರ ನಂತರ ಕರ್ನಾಟಕದ ಮುಖ್ಯಮಂತ್ರಿಯಾಗುವ ಅರ್ಹತೆ ಇರುವ ಏಕೈಕ ವ್ಯಕ್ತಿ ಎಂದರೆ ಬಿ ಎಸ್ ಯಡಿಯೂರಪ್ಪ ಎಂದು ಟ್ವೀಟ್ ಮಾಡಿದ್ದಾರೆ ಮೀನಾಕ್ಷಿ ಚೌಧರಿ.

ಕಾರ್ಯಕರ್ತರ ಕನಸು ನನಸಾಗುತ್ತಿದೆ

ಬಿಜೆಪಿ ಅಧಿಕಾರಕ್ಕೆ ಬರುವುದು ಬಿಜೆಪಿಗಾಗಿ ಹಗಲಿರುಳು ದುಡಿದ ಲಕ್ಷಾಂತರ ಕಾರ್ಯಕರ್ತರ ಕನಸು. ಬಿಜೆಪಿಯನ್ನು ಬೆಂಬಲಿಸಿದ ಕೋಟ್ಯಂತರ ಮತದಾರರ ಆಶೀರ್ವಾದದಿಂದ ಬಿಜೆಪಿ ಅಧಿಕಾರಕ್ಕೆ ಬರುತ್ತಿದೆ. ತಾನು ನೀಡಿದ ಭರವಸೆಯನ್ನು ಬಿಜೆಪಿ ಈಡೇರಿಸುತ್ತದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ ವಿನಯ್ ಮಿಶ್ರಾ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+