ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೆಡಿಎಸ್ - ಕಾಂಗ್ರೆಸ್ ದೋಸ್ತಿ: 5 ವರ್ಷವೂ ಎಚ್ಡಿಕೆ ಸಿಎಂ!

|
Google Oneindia Kannada News

Recommended Video

ಜೆಡಿಎಸ್ - ಕಾಂಗ್ರೆಸ್ ದೋಸ್ತಿ: 5 ವರ್ಷವೂ ಎಚ್ಡಿಕೆ ಸಿಎಂ | Oneindia Kannada

ಬೆಂಗಳೂರು, ಮೇ 16: ರಾಜ್ಯದಲ್ಲಿ ನಿನ್ನೆ(ಮೇ 15) ಹೊರಬಿದ್ದ ಫಲಿತಾಂಶದ ನಂತರ ಅತಂತ್ರ ವಿಧಾನಸಭೆ ತಲೆನೋವು ಆರಂಭವಾಗಿದೆ. 222 ರಲ್ಲಿ ಬಿಜೆಪಿ 104 ಸ್ಥಾನ ಪಡೆದು ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತ ಪಡೆಯಲು ವಿಫಲವಾಗಿತ್ತು.

ಈ ಹಿನ್ನೆಲೆಯಲ್ಲಿ ಇದೀಗ 38 ಸ್ಥಾನ ಪಡೆದ ಜೆಡಿಎಸ್ ಗೆ 78 ಸ್ಥಾನ ಗೆದ್ದಿರುವ ಕಾಂಗ್ರೆಸ್ ಬೇಷರತ್ ಬೆಂಬಲ ನೀಡಲು ನಿರ್ಧರಿಸಿರುವ ಕಾರಣ ಕರ್ನಾಟಕದಲ್ಲಿ ಮತ್ತೆ ಕಿಚಡಿ ಸರ್ಕಾರ ಬಂದರೆ ಅಚ್ಚರಿಯಿಲ್ಲ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಜಾಣತನದ್ದೆ? ಮುಂದೇನಾಗಲಿದೆ?ಜೆಡಿಎಸ್-ಕಾಂಗ್ರೆಸ್ ಮೈತ್ರಿ ಜಾಣತನದ್ದೆ? ಮುಂದೇನಾಗಲಿದೆ?

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಆರಂಭವಾದರೆ ಐದು ವರ್ಷಗಳ ಕಾಲವೂ ಮುಖ್ಯಮಂತ್ರಿ ಸ್ಥಾನವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೇ ನೀಡಲು ಕಾಂಗ್ರೆಸ್ ಸಿದ್ಧವಿದೆ. ಹಾಗೆಯೇ ಉಪಮುಖ್ಯಮಂತ್ರಿ ಸ್ಥಾನವನ್ನು ಕಾಂಗ್ರೆಸ್ಸಿನ ದಲಿತ ಯಾವುದೇ ಶಾಸಕರಿಗೆ ನೀಡಲೂ ಜೆಡಿಎಸ್ ಸಿದ್ಧವಿದೆ.

Karnataka results: HD Kumaraswamy will be the CM of Karnataka for 5 years in coalition government

ಮೈತ್ರಿ ಸರ್ಕಾರಕ್ಕೆ ಸಂಬಂಧಿಸಿದಂತೆ ಇಂದು(ಮೇ 16) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಲಾಗುತ್ತಿದ್ದು, ಎಲ್ಲಾ ಕಾಂಗ್ರೆಸ್ ಶಾಸಕರೂ ಕಡ್ಡಾಯವಾಗಿ ಹಾಜರಿರುವಂತೆ ಕೇಳಲಾಗಿದೆ. ಸಂಖ್ಯಾಬಲ ನಮ್ಮದೇ ಹೆಚ್ಚಿದೆ, ಆದರೆ ಅತೀ ದೊಡ್ಡ ಪಕ್ಷ ಎಂಬ ಕಾರಣಕ್ಕೆ ರಾಜ್ಯಪಾಲರು ಬಿಜೆಗೇ ಸರ್ಕಾರ ರಚಿಸಲು ಅವಕಾಶ ಮಾಡಿಕೊಟ್ಟರೆ ನಾವು ಕಾನೂನು ಹೋರಾಟ ನಡೆಸುತ್ತೇವೆ ಎಂದು ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ರಾಜ್ಯಪಾಲ ವಜುಭಾಯಿ ವಾಲ ಮುಂದಿರುವ ನಾಲ್ಕು ಆಯ್ಕೆಗಳುರಾಜ್ಯಪಾಲ ವಜುಭಾಯಿ ವಾಲ ಮುಂದಿರುವ ನಾಲ್ಕು ಆಯ್ಕೆಗಳು

ಮೇ 12 ರಂದು ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ನಿನ್ನೆ ಪ್ರಕಟಗೊಂಡಿತ್ತು.

English summary
Karnataka Election Results 2018: If JDs and Congress coalition government comes into existence JDS state president HD Kumaraswamy will be the chief minister of Karnataka for 5 years, Congress's one of the Dalit MLAs will become DyCM.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X