ಚುನಾವಣಾ ಕಣಕ್ಕೆ ಇಳಿದ ಉಪ್ಪಿ ತೊರೆದ KPJP ಪಕ್ಷದ ಅಭ್ಯರ್ಥಿಗಳು
ಅಂದುಕೊಂಡಂತೆ ಆಗಿದ್ದರೆ ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಕೆಪಿಜೆಪಿ (ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ) ಪಕ್ಷದಿಂದ ಈ ಬಾರಿಯ ಚುನಾವಣೆಗೆ ಸ್ಪರ್ಧಿ ಮಾಡಬೇಕಿತ್ತು. ಆದರೆ ಉಪ್ಪಿ ಲೆಕ್ಕಾಚಾರವೆಲ್ಲ ಉಲ್ಪಾ ಆಗಿ ಅವರೇ ಆ ಪಾರ್ಟಿಯಿಂದ ಹೊರ ಬಂದರು.
ಕರ್ನಾಟಕ ಚುನಾವಣೆಗೆ ಎಲ್ಲ ಪಕ್ಷಗಳು ಬಿಡುವಿಲ್ಲದೆ ಪ್ರಚಾರ ಮಾಡುತ್ತಿವೆ. ಹೀಗಿರುವಾಗ, ಕೆಪಿಜೆಪಿ ಪಕ್ಷ ಈ ಬಾರಿಯ ಚುನಾವಣೆಗೆ ಯಾವ ರೀತಿ ಸಿದ್ಧವಾಗಿದೆ ಎನ್ನುವ ಕುತೂಹಲ ಮೂಡಿದೆ. ಒಂದು ಕಡೆ ಉಪೇಂದ್ರ ಸಿನಿಮಾದ ಶೂಟಿಂಗ್ ಕೆಲಸಗಳಲ್ಲಿ ಬಿಜಿ ಇದ್ದಾರೆ. ಉಪೇಂದ್ರ ಹೊರ ಬಂದ ಮೇಲೆ ಕೆಪಿಜೆಪಿಯ ಸ್ಥಿತಿ ಹೇಗಿದೆ ಎನ್ನುವ ಪ್ರಶ್ನೆ ಇನ್ನೊಂದು ಕಡೆ ಇದೆ.
ಅಂದಹಾಗೆ, ಇದೀಗ ತಮ್ಮ ಚುನಾವಣೆಯ ತಯಾರಿಯ ಬಗ್ಗೆ ಸ್ವತಃ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಯ ಸಂಸ್ಥಾಪಕ ಅಧ್ಯಕ್ಷ ಮಹೇಶ್ ಗೌಡ 'ಫಿಲ್ಮಿಬೀಟ್ ಕನ್ನಡ'ದ ಜೊತೆಗೆ ಮಾತನಾಡಿದ್ದಾರೆ. ಮುಂದೆ ಓದಿ...

32 ಕ್ಷೇತ್ರದಿಂದ ಸ್ಪರ್ಧೆ
ಈ ಬಾರಿಯ ಕರ್ನಾಟಕ ಚುನಾವಣೆಯಲ್ಲಿ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ 32 ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದೆ. ಮೊದಲು 60 ಜನರಿಗೆ ಬಿ ಫಾರಂ ನೀಡಿದ್ದು, ಆಮೇಲೆ 45 ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಆಲೋಚನೆಯಲ್ಲಿ ಇದ್ದರಂತೆ. ಆದರೆ ಕೊನೆಗೆ 32 ಸ್ಪರ್ಧಿಗಳು ಫೈನಲ್ ಆದರಂತೆ.

13 ಜಿಲ್ಲೆಗಳಲ್ಲಿ ಸ್ಪರ್ಧೆ
ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ ಮುಖ್ಯವಾಗಿ ಬೆಂಗಳೂರನ್ನು ಗಮನ ಹರಿಸಿದೆ. 32 ಅಭ್ಯರ್ಥಿಗಳ ಪೈಕಿ ಬೆಂಗಳೂರಿನ 11 ಕ್ಷೇತ್ರದಲ್ಲಿ ಕೆಪಿಜೆಪಿ ಪಕ್ಷ ಸ್ಪರ್ಧೆ ಮಾಡಲಿದೆ. ಉಳಿದಂತೆ ಮುಖ್ಯವಾಗಿ ತುಮಕೂರುನಲ್ಲಿ 3 ಕ್ಷೇತ್ರ, ಮೈಸೂರು ಮತ್ತು ಮಂಡ್ಯದಲ್ಲಿ ತಲಾ 2 ಹಾಗೂ ದಾವಣಗೆರೆಯ 3 ಕ್ಷೇತ್ರದಿಂದ ಅಭ್ಯರ್ಥಿಗಳು ಚುನಾವಣಾ ಕಣಕ್ಕೆ ಇಳಿದಿದ್ದಾರೆ.

ಡಾಕ್ಟರ್, ಇಂಜಿನಿಯರ್, ಲಾಯರ್ ಸಹ ಇದ್ದಾರೆ
ಕೆಪಿಜೆಪಿ ಪಕ್ಷದ ಅಭ್ಯರ್ಥಿಗಳಲ್ಲಿ ಡಾಕ್ಟರ್, ಇಂಜಿನಿಯರ್, ಲಾಯರ್, ಅಧ್ಯಾಪಕರು ಸಹ ಇದ್ದಾರಂತೆ. ತಮ್ಮ ತಮ್ಮ ಕ್ಷೇತ್ರದ ಬಗ್ಗೆ ಎಲ್ಲ ವಿಷಯವನ್ನು ತಿಳಿದುಕೊಂಡವರಿಗೆ ಟಿಕೆಟ್ ನೀಡಲಾಗಿದೆಯಂತೆ. ಪಕ್ಷದಲ್ಲಿ ಎಲ್ಲರ ಜೊತೆಗೆ ಮಾತುಕತೆ ನಡೆಸಿ ಸರಿ ಎನ್ನಿಸಿದವರಿಗೆ ಅವಕಾಶ ನೀಡಲಾಗಿದೆಯಂತೆ.

ಪ್ರಚಾರ ಚೆನ್ನಾಗಿ ನಡೆಯುತ್ತಿದೆ
ಕೆಪಿಜೆಪಿ ಪಕ್ಷದ ಚುನಾವಣಾ ಪ್ರಚಾರ ಜೋರಾಗಿ ನಡೆಯುತ್ತಿದೆ ಎಂದು ಮಹೇಶ್ ಗೌಡ ತಿಳಿಸಿದ್ದಾರೆ. ಈಗಾಗಲೇ ಅನೇಕ ವಿಧಾನಸಭೆ ಕ್ಷೇತ್ರಗಳಿಗೆ ಹೋಗಿದ್ದು, ಇಂದು ಹುಬ್ಬಳ್ಳಿ ಮತ್ತು ದಾವಣಗೆರೆಯಲ್ಲಿ ಕಾರ್ಯಕ್ರಮ ಮಾಡಲಾಗುವುದಂತೆ. ನಾಳೆ ರಾಣೆಬೆನ್ನೂರಿನಲ್ಲಿ ಪ್ರಚಾರ ಕೆಲಸ ನಡೆಯಲಿದೆ.

ಉಪೇಂದ್ರ ಬಿಟ್ಟ ಮೇಲೆ ಯಾವುದು ಪರಿಣಾಮ ಆಗಿಲ್ಲ
''ಉಪೇಂದ್ರ ಅವರು ನಮ್ಮ ಪಕ್ಷದಿಂದ ಹೊರ ಹೋಗಿರುವುದು ನಮ್ಮ ಪಾರ್ಟಿಗೆ ಯಾವುದೇ ಪರಿಣಾಮ ಬೀರಿಲ್ಲ. ಅವರು ಪಕ್ಷ ಬಿಟ್ಟ ಮೇಲೆ ಅದು ನಮಗೆ ಒಳ್ಳೆಯದು ಆಗಿಲ್ಲ, ಕೆಟ್ಟದ್ದು ಆಗಿಲ್ಲ. ಈ ಬಾರಿ ಕರ್ನಾಟಕದ ಜನ ಬದಲಾವಣೆ ಬಯಸಿದ್ದಾರೆ. ಪ್ರಾದೇಶಿಕ ಪಕ್ಷಗಳ ಬಗ್ಗೆ ಒಲವು ಇಟ್ಟಿದ್ದಾರೆ. ಅದು ನಮಗೆ ಸಂತೋಷ ತಂದಿದೆ. ಚುನಾವಣೆಯಲ್ಲಿ ನಮ್ಮ ಪ್ರಯತ್ನ ನಾವು ಮಾಡುತ್ತ ಇದ್ದೇವೆ.'' ಎಂದು ಮಾತು ಮುಗಿಸಿದರು ಕೆಪಿಜೆಪಿಯ ಸಂಸ್ಥಾಪಕ ಅಧ್ಯಕ್ಷ ಮಹೇಶ್ ಗೌಡ
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications