ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ
Recommended Video

ಬೆಂಗಳೂರು, ಮೇ 23: ಕರ್ನಾಟಕ ರಾಜ್ಯದ 25 ನೇ ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿ ಇಂದು(ಮೇ 23) ವಿಧಾನಸೌಧದ ಎದುರಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಉಪಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷರಾಗಿದ್ದ ಜಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಮಾಣವಚನಕ್ಕೂ ಮುನ್ನ ಹಲವು ದೇವಾಲಯಗಳಿಗೆ ಭೇಟಿ ನೀದ್ದ ಕುಮಾರಸ್ವಾಮಿ ಇಂದು ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. 2006 ರ ಫೆಬ್ರವರಿಯಿಂದ 2007ರ ಅಕ್ಟೋಬರ್ ವರೆಗೆ ಕುಮಾರಸ್ವಾಮಿಯವರು ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದರು. ಕೇಂದ್ರದ ಹಲವು ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಮೇ 15 ರಂದು ಹೊರಬಿದ್ದ ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಅತಂತ್ರ ವಿಧಾನಸಭೆ ತಲೆದೂರಿದ್ದರಿಂದ 104 ಸ್ಥಾನ ಗೆದ್ದು ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಬಿಜೆಪಿ ಸರ್ಕಾರ ರಚಿಸಲು ವಿಫಲವಾಗಿತ್ತು.

In Pics: ಪದಗ್ರಹಣಕ್ಕೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಕುಮಾರಸ್ವಾಮಿ
ಈ ಸಂದರ್ಭದಲ್ಲಿ 78 ಸ್ಥಾನ ಗೆದ್ದ ಕಾಂಗ್ರೆಸ್, ಮತ್ತು 2 ಸ್ಥಾನ ಗೆದ್ದ ಪಕ್ಷೇತರರು 38 ಸ್ಥಾನ ಗೆದ್ದ ಜೆಡಿಎಸ್ ಪಕ್ಷಕ್ಕೆ ಸರ್ಕಾರ ರಚಿಸಲು ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದರಿಂದ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ.












Click it and Unblock the Notifications