ಒನ್ಇಂಡಿಯಾ ಫೇಸ್ಬುಕ್ ಸಮೀಕ್ಷೆ: ಬಾದಾಮಿಯಲ್ಲೂ ಸಿದ್ದರಾಮಯ್ಯಗೆ ಸೋಲು
ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಓದುಗರ ಅಭಿಪ್ರಾಯ ಸಂಗ್ರಹ ಮಾಡುವ ಉದ್ದೇಶದಿಂದ ಒನ್ಇಂಡಿಯಾ ತನ್ನ ಫೇಸ್ ಬುಕ್ ಪುಟದಲ್ಲಿ ಫೇಸ್ಬುಕ್ ಲೈವ್ ಪೋಲ್ ನಡೆಸುತ್ತಿದೆ. ಪ್ರತಿಷ್ಠಿತ ಬಾದಾಮಿ ವಿಧಾನಸಭಾ ಕ್ಷೇತ್ರಕ್ಕಾಗಿ ನಡೆಸಿದ ಸಮೀಕ್ಷೆ ಫಲಿತಾಂಶ ಇಲ್ಲಿದೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತ ಕ್ಷೇತ್ರದಲ್ಲಿ ಬಿಜೆಪಿಯಿಂದ ಮಾಜಿ ಸಚಿವ ಬಿ ಶ್ರೀರಾಮುಲು ಅವರು ಸ್ಪರ್ಧಿಸಿದ್ದರೆ, ಕಾಂಗ್ರೆಸ್ಸಿನಿಂದ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್ ನಿಂದ ಹಣುಮಂತ ಮಾವಿನಮರದ್ ಕಣದಲ್ಲಿದ್ದಾರೆ.
ಜೆಡಿಎಸ್ ಪಕ್ಷದಿಂದ ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಹಣಮಂತ ಮಾವಿನಮರದ ಅವರು ಅಭ್ಯರ್ಥಿ. ಇವರು ಕೂಡ ಲಿಂಗಾಯತ ಮುಖಂಡರು. ಬಳ್ಳಾರಿ ಸಂಸದ ಬಿ. ಶ್ರೀರಾಮುಲು ಅವರನ್ನು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಎಸ್ಟಿ ಮೀಸಲು ಕ್ಷೇತ್ರದಲ್ಲೂ ಸ್ಪರ್ಧಿ. ಸಿದ್ದರಾಮಯ್ಯ ಅವರು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲೂ ಸ್ಪರ್ಧಿ.

ಫೇಸ್ಬುಕ್ ಲೈವ್ ಮತದಾನ:
ಇದರಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ಆಯ್ಕೆಗಳನ್ನು ನೀಡಲಾಗಿರುತ್ತದೆ. ಉದಾಹರಣೆಗೆ ಚಾಮುಂಡೇಶ್ವರಿ ಕ್ಷೇತ್ರದ ಲೈವ್ ಪೋಲ್ ನಲ್ಲಿ ಮೂವರು ಪ್ರಮುಖ ಅಭ್ಯರ್ಥಿಗಳಿಗೂ ಪ್ರತ್ಯೇಕ ಚಿಹ್ನೆ(ಎಮೋಜಿ) ಬಳಸಲಾಗಿದೆ. ವೀಕ್ಷಕರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಸರಿ ಹೊಂದುವ ಎಮೋಜಿಯನ್ನು ಒತ್ತುವ ಮೂಲಕ ತಮ್ಮ ಅಭಿಪ್ರಾಯ ತಿಳಿಸಬಹುದು.
ಫಲಿತಾಂಶ: ಸುಮಾರು ಮೂರು ಗಂಟೆ ಅವಧಿಯ ಚುಟುಕು ಸಮೀಕ್ಷೆ ಇದಾಗಿತ್ತು. ಈ ವೇಳೆಯಲ್ಲಿ 507ಕ್ಕೂ ಅಧಿಕ ಬಾರಿ ಶೇರ್ ಆಗಿದ್ದು, 2 ಲಕ್ಷಕ್ಕೂ ಅಧಿಕ ಮಂದಿ ಸಮೀಕ್ಷೆ ತಲುಪಿದ್ದು, 11ಸಾವಿರಕ್ಕೂ ಅಧಿಕ ಮಂದಿ ಪ್ರತಿಕ್ರಿಯಿಸಿದ್ದಾರೆ. ಗಮನಿಸಿ ಅಭ್ಯರ್ಥಿಗಳಿಗೆ ನೀಡಿರುವ ಎಮೋಜಿಗಳನ್ನು ಒತ್ತಿದರೆ ಮಾತ್ರ ನಿಮ್ಮ ಮತ ಲೆಕ್ಕಕ್ಕೆ ಸಿಗಲಿದೆ.
ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ಅವರಿಗೆ 5502 ಮತಗಳು ಲಭಿಸಿದ್ದರೆ, ಕಾಂಗ್ರೆಸ್ಸಿನ ಸಿದ್ದರಾಮಯ್ಯ ಅವರಿಗೆ 2562 ಮತಗಳು ಸಿಕ್ಕಿವೆ. ಇನ್ನು ಜೆಡಿಎಸ್ ಹನಮಂತ ಮಾವಿನಮರದ ಅವರಿಗೆ 1407 ಮತಗಳು ಬಂದಿದೆ.












Click it and Unblock the Notifications