ಶಿವಾಜಿನಗರ ಫೇಸ್ಬುಕ್ ಸಮೀಕ್ಷೆ: ಮತ್ತೆ ಕಟ್ಟಾ ನಾಯ್ಡುಗೆ ಜಯ
ಬೆಂಗಳೂರು, ಮೇ 02: ಬೆಂಗಳೂರಿನ ಪ್ರತಿಷ್ಠಿತ ಕಣಗಳ ಪೈಕಿ ಶಿವಾಜಿನಗರದ ಕದನ ಕುತೂಹಲ ಕೆರಳಿಸಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಓದುಗರ ಅಭಿಪ್ರಾಯ ಸಂಗ್ರಹದಂತೆ ಅಚ್ಚರಿಯ ಫಲಿತಾಂಶ ಹೊರ ಬಂದಿದೆ.
ಒನ್ಇಂಡಿಯಾ ತನ್ನ ಫೇಸ್ ಬುಕ್ ಪುಟದಲ್ಲಿ ಫೇಸ್ಬುಕ್ ಲೈವ್ ಪೋಲ್ ನಡೆಸುತ್ತಿದೆ. ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಕ್ಕಾಗಿ ನಡೆಸಿದ ಸಮೀಕ್ಷೆ ಫಲಿತಾಂಶ ಇಲ್ಲಿದೆ. ಈ ಕ್ಷೇತ್ರದ 'ಹಳೆ ಹುಲಿ' ಬಿಜೆಪಿಯ ಅಭ್ಯರ್ಥಿ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಕಾಂಗ್ರೆಸ್ಸಿನ ಅಭ್ಯರ್ಥಿ, ಹಾಲಿ ಶಾಸಕ ರೋಷನ್ ಬೇಗ್ ವಿರುದ್ಧ ಜಯಭೇರಿ ಬಾರಿಸಲಿದ್ದಾರೆ ಎಂದು ಓದುಗರು ತಮ್ಮ ಅಭಿಮತ ನೀಡಿದ್ದಾರೆ.

ಫೇಸ್ಬುಕ್ ಲೈವ್ ಮತದಾನ:
ಇದರಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚು ಆಯ್ಕೆಗಳನ್ನು ನೀಡಲಾಗಿರುತ್ತದೆ. ಉದಾಹರಣೆಗೆ ಚಾಮುಂಡೇಶ್ವರಿ ಕ್ಷೇತ್ರದ ಲೈವ್ ಪೋಲ್ ನಲ್ಲಿ ಮೂವರು ಪ್ರಮುಖ ಅಭ್ಯರ್ಥಿಗಳಿಗೂ ಪ್ರತ್ಯೇಕ ಚಿಹ್ನೆ(ಎಮೋಜಿ) ಬಳಸಲಾಗಿದೆ. ವೀಕ್ಷಕರು ತಮ್ಮ ಆಯ್ಕೆಯ ಅಭ್ಯರ್ಥಿಗೆ ಸರಿ ಹೊಂದುವ ಎಮೋಜಿಯನ್ನು ಒತ್ತುವ ಮೂಲಕ ತಮ್ಮ ಅಭಿಪ್ರಾಯ ತಿಳಿಸಬಹುದು.
ಫಲಿತಾಂಶ: ಸುಮಾರು ಒಂದು ಅಥವಾ ಎರಡು ಗಂಟೆ ಅವಧಿಯ ಚುಟುಕು ಸಮೀಕ್ಷೆ ಇದಾಗಿತ್ತು. ಈ ವೇಳೆಯಲ್ಲಿ 17 ಸಾವಿರಕ್ಕೂ ಅಧಿಕ ಮಂದಿ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದು, ಸಾವಿರಕ್ಕೂ ಅಧಿಕ ಮಂದಿ ಪ್ರತಿಕ್ರಿಯಿಸಿದ್ದಾರೆ. ಗಮನಿಸಿ ಅಭ್ಯರ್ಥಿಗಳಿಗೆ ನೀಡಿರುವ ಎಮೋಜಿಗಳನ್ನು ಒತ್ತಿದರೆ ಮಾತ್ರ ನಿಮ್ಮ ಮತ ಲೆಕ್ಕಕ್ಕೆ ಸಿಗಲಿದೆ.
ಬಿಜೆಪಿ ಅಭ್ಯರ್ಥಿ ಕಟ್ಟಾ ಸುಬ್ರಮಣ್ಯ ನಾಯ್ಡು ಅವರಿಗೆ 546 ಮತಗಳು ಲಭಿಸಿದ್ದರೆ, ಕಾಂಗ್ರೆಸ್ಸಿನ ರೋಷನ್ ಬೇಗ್ ಅವರಿಗೆ ಅವರಿಗೆ 172ಮತಗಳು ಸಿಕ್ಕಿವೆ.












Click it and Unblock the Notifications