ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ಅಭಿವೃದ್ಧಿಗೆ ವಿಶೇಷ ಯೋಜನೆ: ಮೋದಿ ಭರವಸೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 26: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬೆಂಗಳೂರು ನಗರ ಅಭಿವೃದ್ಧಿಗಾಗಿ ವಿಶೇಷ ಯೋಜನೆ ನೀಡುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ ಎಂದು ಮಾಜಿ ಡಿಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಆರ್ ಅಶೋಕ್ ತಿಳಿಸಿದ್ದಾರೆ.

ಈ ಕುರಿತು ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಚುನಾವಣಾ ಪೂರ್ವಬಾವಿ ಸಭೆ ಬಳಿಕ ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, ಪ್ರಧಾನಿ ಮೋದಿಯವರು ಗುರುವಾರ ಬೆಳಗ್ಗೆ ರಾಜ್ಯದ 224 ಬಿಜೆಪಿ ಅಭ್ಯರ್ಥಿಗಳ ಜತೆಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಂಭಾಷಣೆ ವೇಳೆ ಬೆಂಗಳೂರು ನಗರದ ಕುರಿತಂತೆ ಪ್ರಸ್ತಾಪಿಸಿ ಬೆಂಗಳೂರು ನಗರದ ಅಭಿವೃದ್ಧಿಗೆ ಗಮನ ನೀಡಲಿರುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಮೋದಿಯಿಂದ ಅಭ್ಯರ್ಥಿಗಳಿಗೆ ಕನ್ನಡ ಅಸ್ಮಿತೆ ಪಾಠ, ಎಷ್ಟು ಸರಿ?ಮೋದಿಯಿಂದ ಅಭ್ಯರ್ಥಿಗಳಿಗೆ ಕನ್ನಡ ಅಸ್ಮಿತೆ ಪಾಠ, ಎಷ್ಟು ಸರಿ?

ಬೆಂಗಳೂರಿನಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ, ಮೂಲಸೌಕರ್ಯಗಳ ಸಂಸ್ಯೆ ಹೀಗೆ ಹಲವು ವಿಷಯಗಳ ಕುರಿತು ಮೋದಿಯವರ ಗಮನ ಸೆಳೆದಿದ್ದು, ರಾಜ್ಯದಲ್ಲಿ ಬಿಜೆಪಿ ಅಧಿಕಾಕ್ಕೆ ಬಂದರೆ ಬೆಂಗಳೂರಿನ ಸರ್ವತೋಮುಕ ಅಭಿವೃದ್ಧಿಗೆ ಗಮನ ಹರಿಸಲಾಗುವುದು ಎಂದು ತಿಳಿಸಿರುವುದಾಗಿ ಹೇಳಿದ್ದಾರೆ.

PM Modi assures special plan for Bangalore development

ಮೇ 12 ರಂದು ರಾಜ್ಯದಲ್ಲಿ ನಡೆಯುವ ವಿಧಾನಸಭಾ ಚುನಾಚಣೆ ಹಿನ್ನೆಲೆಯಲ್ಲಿ ಮೇ 2ರಿಂದ ರಾಜ್ಯಕ್ಕೆ ಪ್ರವಾಸ ಕೈಗೊಳ್ಳಲಿರುವ ಮೋದಿಯವರು ಅದಕ್ಕೂ ಮುನ್ನ ಗುರುವಾರ ಬೆಳಗ್ಗೆ 9ರಿಂದ 10ಗಂಟೆಯವರೆಗೆ ಸುಮಾರು ಒಂದು ಗಂಟೆಗಳ ಕಾಲ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಜತೆಗೆ ಮೊಬೈಲ್ ಅಪ್ಲಿಕೇಷನ್ ಮೂಲಕ ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ವಿಧಾನಸಭೆ ಚುನಾವಣೆಯನ್ನು ಎದುರಿಸುವ ಬಗೆ ಹಾಗೂ ಅಭ್ಯರ್ಥಿಗಳು ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರದ ಕುರಿತು ಸಲಹೆ ನೀಡಿದ್ದಾರೆ. ಈ ವೇಳೆ ರಾಜ್ಯದ ಹಲವಾರು ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸುವ ವೇಳೆ ಇದೇ ವೇಳೆ ಬೆಂಗಳೂರು ಸಮಸ್ಯೆಗಳ ಕುರಿತು ಪ್ರಸ್ತಾಪಿಸಿದಾಗ ಈ ಭರವಸೆ ನೀಡಿದರು.

English summary
Former DCM and BJP leader R. Ashok has tweeted about assurance about Bangalore development given by prime minister Narendra Modi during tele conference with BJP candidates of the state on Thursday morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X