ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫಿರೋಜ್‌ ಸೇಠ್‌ ಸೋತ ಬೆನ್ನಲ್ಲೆ ಬೆಳಗಾವಿಯಲ್ಲಿ ಲಘು ಹಿಂಸಾಚಾರ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಮೇ 15: ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಫಿರೋಜ್ ಸೇಠ್‌ ಸೋತ ಕೂಡಲೇ ಕ್ಷೇತ್ರದಲ್ಲಿ ಹಿಂಸಾಚಾರ ಪ್ರಾರಂಭವಾಗಿದ್ದು ಎರಡು ಕೋಮುಗಳ ನಡುವೆ ಹೊಡೆದಾಟ ನಡೆದದ್ದು ಕಲ್ಲು ತೂರಾಟ ಕೂಡ ನಡೆದಿದೆ.

ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿಯ ಅನಿಲ ಬೆನಕೆ ಗೆದ್ದರು, ಗೆದ್ದ ಅಭ್ಯರ್ಥಿಯ ಮೆರವಣಿಗೆ ಮಾಡುವ ವೇಳೆ ಹಿಂದೂ ಮತ್ತು ಮುಸ್ಲಿಂ ನಡುವೆ ಸಣ್ಣದಾಗಿ ಆರಂಭವಾದ ಜಗಳ ಆ ನಂತರ ಹೆಚ್ಚಾಯಿತು. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಿಸಿದರಾದರೂ ಫಲಪ್ರದವಾಗಲಿಲ್ಲ.

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿ

ಉದ್ವಿಘ್ನ ಕಾರ್ಯಕರ್ತರು ಪೊಲೀಸರ ವಾಹನಗಳಿಗೆ ಕಲ್ಲು ತೂರಾಟ ನಡೆಸಿದರು ಅಲ್ಲದೆ ವಾಹನಗಳಿಗೆ ಬೆಂಕಿ ಹಚ್ಚಿ ದಾಂಧಲೆ ಎಬ್ಬಿಸಿದರು. ಈಗ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಠಿಯಾಗಿದೆ.

riots in Belgavi north by congress Firoz sait followers

ಘಟನೆ ಸಂಬಂಧ ಪೋಲಿಸರು ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಇಬ್ಬರು ಡಿಸಿಪಿ ಗಳನ್ನು ನಿಯೋಜಿಸಲಾಗಿದ್ದು, ಸ್ಥಳದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಅಲ್ಲದೆ ಸ್ಥಳದಲ್ಲಿ 144 ಸೆಕ್ಷನ್‌ ಅನ್ನು ಬೆಳಗಾವಿ ಕಮಿಷನರ್ ಎಂ ಚಂದ್ರಶೇಖರ್ ಜಾರಿ ಮಾಡಿದ್ದಾರೆ.

English summary
Congress candidate FIraz sait followers started riots in Belgavi north as he loose to BJP's Anil Benake. one man arrested by police and Belgavi commissioner imposed 144 section in the area.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X