ಸಚಿವ ಬಸವರಾಜ ರಾಯರಡ್ಡಿಗೆ ಸೋಲುಣಿಸಿದ ಬಿಜೆಪಿ

ಬೆಂಗಳೂರು, ಮೇ 15: ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಯಲಬುರ್ಗಾ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ.

ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಈ ಭಾಗದ ಪ್ರಭಾವಿ ರಾಜಕಾರಣಿಯೂ ಆಗಿದ್ದರು. ಬಸವರಾಜ ರಾಯರೆಡ್ಡಿ 1985, 1989, 1994, 2004 ಮತ್ತು 2013ರಲ್ಲಿ ಜಯ ಸಾಧಿಸಿದ್ದರು. ಮೊದಲ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಂದರ್ಭದಲ್ಲಿ ಅವರು ಜನತಾದಳ ಪಕ್ಷದಲ್ಲಿದ್ದರು.

2004ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಅವರು ಪುನಃ ವಿಧಾನಸಭೆ ಪ್ರವೇಶಿಸಿದ್ದರು. ನಂತರ 2008ರಲ್ಲಿ ಸೋಲು ಅನುಭವಿಸಿದ್ದರು. 2013ರ ಚುನಾವಣೆಯಲ್ಲಿ ಬಿಜೆಪಿಯ ಹಾಲಪ್ಪ ಬಸಪ್ಪ ಆಚಾರ್ ಅವರನ್ನು 16,900 ಮತಗಳಿಂದ ಸೋಲಿಸಿದ್ದರು. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನ ಪಡೆದಿದ್ದರು.

vKarnataka Election Results 2018 minister basavaraj rayaraddy lost to bjp candidate

ಈ ಬಾರಿ ಹಾಲಪ್ಪ ಬಸಪ್ಪ ಆಚಾರ್ ಅವರು ಸುಮಾರು 11 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+