ಚುನಾವಣೆ ರಾಜಕೀಯದಿಂದ ಕಾಂಗ್ರೆಸ್ ನ ಡಾ.ಎ.ಬಿ.ಮಾಲಕ ರೆಡ್ಡಿ ನಿವೃತ್ತಿ
ಯಾದಗಿರಿ, ಜನವರಿ 27 : ನನಗೆ ಎಂಬತ್ತು ವರ್ಷ ಆಗಿದೆ. ಆದ್ದರಿಂದ ಚುನಾವಣೆ ರಾಜಕೀಯದಿಂದ ನಿವೃತ್ತಿ ಆಗಲು ನಿರ್ಧರಿಸಿದ್ದೇನೆ ಎಂದು ಕಾಂಗ್ರೆಸ್ ಶಾಸಕ ಡಾ.ಎ.ಬಿ.ಮಾಲಕ ರೆಡ್ಡಿ ಇಲ್ಲಿ ಶನಿವಾರ ತಿಳಿಸಿದರು. ಮುಂದಿನ ಚುನಾವಣೆಗೆ ನನ್ನ ಕುಟುಂಬದಿಂದ ಯಾಊ ಸ್ಪರ್ಧೆ ಮಾಡುವುದಿಲ್ಲ ಎಂದು ಕೂಡ ಅವರು ಹೇಳಿದ್ದಾರೆ.
ಯುವಕರಿಗೆ- ತರುಣರಿಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಚುನಾವಣೆ ರಾಜಕೀಯದಿಂದ ನಿವೃತ್ತಿ ಪಡೆಯಲು ತೀರ್ಮಾನಿಸಿದ್ದೇನೆ. ಆದರೆ ಕಾಂಗ್ರೆಸ್ ಪಕ್ಷದಲ್ಲೇ ಮುಂದುವರಿಯುತ್ತೇನೆ. ಚುನಾವಣೆ ರಾಜಕೀಯದಿಂದ ಮಾತ್ರ ನಿವೃತ್ತನಾಗಿ, ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದು ಅವರು ತಿಳಿಸಿದರು.

ಕ್ಷೇತ್ರದ ಜನರು, ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರು ಈ ಬಾರಿಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಆದರೆ ನಾನು ತೀರ್ಮಾನ ಮಾಡಿದ್ದು, ಚುನಾವಣೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಡಾ.ಎ.ಬಿ.ಮಾಲಕ ರೆಡ್ಡಿ ಮಾಹಿತಿ ನೀಡಿದರು.












Click it and Unblock the Notifications