Ramya Divya Spandana: 3,4 ಸೋಷಿಯಲ್ ಮೀಡಿಯಾ ಅಕೌಂಟ್ ಇರ್ಲಿ: ದರ್ಶನ್ ಅಭಿಮಾನಿಗಳಿಂದ ರಮ್ಯಾ ವಿಡಿಯೋ ವೈರಲ್!
ರಾಜ್ಯದಲ್ಲಿ ನಟಿ ರಮ್ಯಾ ಹಾಗೂ ನಟ ದರ್ಶನ್ ಅಭಿಮಾನಿಗಳ ನಡುವೆ ಸೋಷಿಯಲ್ ಮೀಡಿಯಾ ವಾರ್ ನಡೆದಿದೆ. ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಅವರು ಫೂಲ್ ಆಕ್ಟೀವ್ ಆಗಿದ್ದು. ದರ್ಶನ್ ಅಭಿಮಾನಿಗಳ ನಡೆಯನ್ನು ಖಂಡಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ರಮ್ಯಾ ಅವರು ಆಗ್ರಹಿಸಿದ್ದಾರೆ.
ದಿಟ್ಟವಾಗಿ ನಿಲುವು ತೆಗೆದುಕೊಂಡಿರುವುದಕ್ಕೆ ಹಲವರು ಬೆಂಬಲ ಸೂಚಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ನಡೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆಯಾದರೂ ಇದೇ ಸಂದರ್ಭದಲ್ಲಿ ನಟಿ ರಮ್ಯಾ ಅವರು ನಕಲಿ ಸೋಷಿಯಲ್ ಮೀಡಿಯಾ ಖಾತೆ ಅಥವಾ ಎರಡು ಮೂರು ಸೋಷಿಯಲ್ ಮೀಡಿಯಾ ಅಕೌಂಟ್ ಕ್ರಿಯೇಟ್ ಮಾಡಿ ಎಂದು ಹೇಳಿದ್ದರು ಎನ್ನಲಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ದರ್ಶನ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ರಮ್ಯಾ ಅವರು ಹೇಳಿದ್ದರು ಎನ್ನಲಾದ ಹಳೆಯ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ರಮ್ಯಾ ಅವರು ಈ ರೀತಿ ಹೇಳಿ ಇದೀಗ ದರ್ಶನ್ ಅವರ ಅಭಿಮಾನಿಗಳಿಗೆ ನೈತಿಕತೆಯ ಪಾಠ ಮಾಡುವುದರಲ್ಲಿ ಯಾವ ಅರ್ಥವಿದೆ. ಇವರೇ ಸುಳ್ಳು ಅಕೌಂಟ್ ಕ್ರಿಯೇಟ್ ಮಾಡುವಂತೆ ಹೇಳುತ್ತಿದ್ದು ಇದೀಗ ಅವರು ಬೇರೆ ಅವರಿಗೆ ಪಾಠ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ.
ರಮ್ಯಾ - ದರ್ಶನ್ ಅವರ ಅಭಿಮಾನಿಗಳ ನಡುವೆ ಕಳೆದ ಎರಡು ವರ್ಷಗಳಿಂದಲೂ ವಿವಿಧ ಕಾರಣಗಳಿಗೆ ಕ್ಲಾಶ್ ಆಗುತ್ತಲ್ಲೇ ಇದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಜೈಲು ಸೇರಿದ್ದ ಸಂದರ್ಭದಲ್ಲಿಯೇ ಈ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ರಮ್ಯಾ ಅವರು ಆಗ್ರಹಿಸಿದ್ದರು. ರಮ್ಯಾ ಅವರು ಆ ಸಂದರ್ಭದಲ್ಲಿ ಹಂಚಿಕೊಂಡಿದ್ದ ಅಥವಾ ರೀ ಪೋಸ್ಟ್ ಮಾಡಿದ್ದ ಟ್ವೀಟ್‌ವೊಂದು ಭಾರೀ ಚರ್ಚೆಗೆ ಕಾರಣವಾಗಿತ್ತು. ಆಗ ರಮ್ಯಾ ಅವರ ಮೇಲೆ ದರ್ಶನ್ ಅಭಿಮಾನಿಗಳು ಭಾರೀ ಆಕ್ರೋಶ ಹೊರ ಹಾಕಿದ್ದರು.
ಇದೀಗ ಅವರು ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ಟೀಮ್ ನಿಭಾಯಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಮಾತನಾಡಿದ್ದರು ಎನ್ನಲಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದು ದರ್ಶನ್ ಅವರ ಅಭಿಮಾನಿಗಳು ಹಂಚಿಕೊಳ್ಳುತ್ತಿದ್ದು. ರಮ್ಯಾ ಅವರಿಗೆ ಪ್ರಶ್ನೆ ಮಾಡುತ್ತಿದ್ದಾರೆ. ರಮ್ಯಾ ಅವರು ದರ್ಶನ್ ಅವರ ಅಭಿಮಾನಿಗಳ ಕಮೆಂಟ್ ಸ್ಕ್ರೀನ್ ಶಾಟ್ ಹಂಚಿಕೊಳ್ಳುತ್ತಿರುವ ಸಂದರ್ಭದಲ್ಲಿಯೇ ಈ ವಿಡಿಯೋ ಸಹ ವೈರಲ್ ಆಗುತ್ತಿದೆ.
ರಮ್ಯಾ ವೈರಲ್ ವಿಡಿಯೋದಲ್ಲಿ ಏನಿದೆ: ಇನ್ನು ನಟಿ ರಮ್ಯಾ ಅವರು ಮಾತನಾಡಿದ್ದಾರೆ ಎನ್ನಲಾಗಿರುವ ವಿಡಿಯೋದಲ್ಲಿ ಇವೊತ್ತು ನೀವು ಮೂರು ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ. ಒಂದು ನಿಮ್ಮ ಹೆಸರಿನಲ್ಲಿ ಮತ್ತೊಂದು ನಿಮ್ಮ ಕುಟುಂಬದವರು ಇಲ್ಲವೇ ಪರಿಚಿತರ ಹೆಸರಿನಲ್ಲಿ ಈ ರೀತಿ ಮೂರು ಸೋಷಿಯಲ್ ಮೀಡಿಯಾ ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳಿ ಎಂದಿದ್ದಾರೆ.
And this lady is speaking for the justice & injustice of others life🤡 @divyaspandana
— nUtHaN (@nuthannnnnn) July 27, 2025
pic.twitter.com/HGtEPKockP
ಫೇಕ್ ಅಕೌಂಟ್ ಕ್ರಿಯೇಟ್ ಬಗ್ಗೆಯೂ ಮಾತನಾಡಿದ್ದಾರೆ. ಒಬ್ಬ ವ್ಯಕ್ತಿ ಎರಡು ಅಥವಾ ಮೂರು ಅಕೌಂಟ್ ಕ್ರಿಯೇಟ್ ಮಾಡಿಕೊಳ್ಳುವುದರಲ್ಲಿ ತಪ್ಪೇನು ಇಲ್ಲ ಎಂದು ಅವರು ಹೇಳಿದ್ದಾರೆ. ಈ ವಿಡಿಯೋ ಬಗ್ಗೆ ರಿಪಬ್ಲಿಕ್ ಟಿವಿಯಲ್ಲಿ ವರದಿಯಾಗಿದ್ದು. ಆ ನಿರ್ದಿಷ್ಟ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.












Click it and Unblock the Notifications