70th Filmfare Awards: ಶ್ರೀಮುರಳಿ ಅತ್ಯುತ್ತಮ ನಟ, ಕನ್ನಡ ಚಿತ್ರರಂಗದ ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ
ದಕ್ಷಿಣ ಭಾರತದ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿ ಸಮಾರಂಭಗಳಲ್ಲಿ ಒಂದಾದ 70ನೇ ಫಿಲ್ಮ್ಫೇರ್ ಅವಾರ್ಡ್ಸ್ ಸೌತ್ (Filmfare Awards South) ಭರ್ಜರಿಯಾಗಿ ಕೇರಳದ ಕೊಚ್ಚಿಯಲ್ಲಿ ನಡೆಯಿತು. 2024ರಲ್ಲಿ ಬಿಡುಗಡೆಯಾದ ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಚಿತ್ರಗಳಿಗೆ ಈ ಬಾರಿಯ ಪ್ರಶಸ್ತಿಗಳು ಪ್ರಕಟಗೊಂಡಿವೆ. ಕನ್ನಡ ಚಿತ್ರರಂಗದ ಹಲವರು ಪ್ರಶಸ್ತಿಗೆ ಭಾಜನರಾಗಿದ್ದು, ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ.
'ಶಾಖಾಹಾರಿ'ಗೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ
2024ನೇ ಸಾಲಿನ ಕನ್ನಡ ವಿಭಾಗದಲ್ಲಿ "ಶಾಖಾಹಾರಿ" ಚಿತ್ರಕ್ಕೆ ಅತ್ಯುತ್ತಮ ಸಿನಿಮಾ ಫಿಲ್ಮ್ಫೇರ್ ಸೌತ್ ಪ್ರಶಸ್ತಿ ಲಭಿಸಿದೆ. ವಿಭಿನ್ನ ಕಥಾಹಂದರ ಮತ್ತು ನಿರೂಪಣೆಯ ಮೂಲಕ ಈ ಚಿತ್ರ ಪ್ರೇಕ್ಷಕರ ಹಾಗೂ ವಿಮರ್ಶಕರ ಮೆಚ್ಚುಗೆ ಪಡೆದಿತ್ತು.

"ಬಘೀರ" ಸಿನಿಮಾದಲ್ಲಿನ ನಟನೆಗಾಗಿ ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. "ಕೋಳಿ ಎಸ್ರು" ಚಿತ್ರದ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ.
ಇತರ ಪ್ರಮುಖ ಪ್ರಶಸ್ತಿಗಳು
* ಅತ್ಯುತ್ತಮ ನಿರ್ದೇಶಕ: ಪೃಥ್ವಿ ಕೊಣನೂರು
* ಅತ್ಯುತ್ತಮ ಚಿತ್ರ (ವಿಮರ್ಶಕರು): ಬ್ಲಿಂಕ್
* ಅತ್ಯುತ್ತಮ ನಟ (ಕ್ರಿಟಿಕ್ಸ್): ಗೌರಿಶಂಕರ್-ಕೆರೆಬೇಟೆ
* ಅತ್ಯುತ್ತಮ ನಟಿ (ಕ್ರಿಟಿಕ್ಸ್): ಅಂಕಿತಾ ಅಮರ್-ಇಬ್ಬನಿ ತಬ್ಬಿದ ಇಳೆಯಲಿ
* ಅತ್ಯುತ್ತಮ ಪೋಷಕ ನಟ: ಗೋಪಾಲಕೃಷ್ಣ ದೇಶಪಾಂಡೆ (ಬ್ಲಿಂಕ್)
* ಅತ್ಯುತ್ತಮ ಪೋಷಕ ನಟಿ: ಪ್ರಿಯಾ ಶತಮರ್ಷನ್ (ಭೀಮಾ)
* ಅತ್ಯುತ್ತಮ ಸಂಗೀತ ನಿರ್ದೇಶಕ: ಅರ್ಜುನ್ ಜನ್ಯ (ಕೃಷ್ಣಂ ಪ್ರಣಯ ಸಖಿ)

* ಅತ್ಯುತ್ತಮ ಗಾಯಕ: ಜಸ್ಕರನ್ ಸಿಂಗ್-'ದ್ವಾಪರ' ಹಾಡು
* ಅತ್ಯುತ್ತಮ ಗಾಯಕಿ: ಶ್ರುತಿ ಪ್ರಹ್ಲಾದ್-'ಹಿತ್ತಲಕ ಕರಿಬೇಡ ಮಾವ' (ಕರಟಕ ದಮನಕ)
* ಅತ್ಯುತ್ತಮ ಗೀತರಚನೆ: ವಿ.ನಾಗೇಂದ್ರ ಪ್ರಸಾದ್ (ದ್ವಾಪರ ಹಾಡು)
* ಅತ್ಯುತ್ತಮ ಡೆಬ್ಯು ನಟ: ಸಮರ್ಜಿತ್ ಲಂಕೇಶ್ (ಗೌರಿ)
ದಕ್ಷಿಣ ಭಾರತದ ಅತ್ಯಂತ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿ ಸಮಾರಂಭಗಳಲ್ಲಿ ಒಂದಾದ 70ನೇ ಫಿಲ್ಮ್ಫೇರ್ ಅವಾರ್ಡ್ಸ್ ಸೌತ್ ಅದ್ಧೂರಿಯಾಗಿ ಶನಿವಾರ ಫೆಬ್ರವರಿ 21ರಂದು ಕೇರಳದ ಕೊಚ್ಚಿಯಲ್ಲಿರುವ ಅಡ್ಲಕ್ಸ್ ಇಂಟರ್ನ್ಯಾಶನಲ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯಿತು. ಸಂಜೆ ವೇಳೆ ತಾರೆಯರ ಕಂಗೊಳಿಸುವ ರೆಡ್ ಕಾರ್ಪೆಟ್ ಕಾರ್ಯಕ್ರಮದೊಂದಿಗೆ ಸಮಾರಂಭ ಆರಂಭವಾಯಿತು. ಬಳಿಕ ಮುಖ್ಯ ವೇದಿಕೆಯಲ್ಲಿ ಮನಮೋಹಕ ನೃತ್ಯ ಪ್ರದರ್ಶನಗಳು, ವಿಶೇಷ ಸಂಗೀತ ಕಾರ್ಯಕ್ರಮಗಳು ಮತ್ತು ಹೃದಯಸ್ಪರ್ಶಿ ಕ್ಷಣಗಳ ನಡುವೆ ಪ್ರಶಸ್ತಿಗಳ ವಿತರಣೆ ನಡೆಯಿತು.
ಮಲಯಾಳಂ, ತಮಿಳು, ತೆಲುಗು ಮತ್ತು ಕನ್ನಡ ಚಿತ್ರರಂಗಗಳ ಸಾಧಕರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ದಕ್ಷಿಣ ಭಾರತ ಚಿತ್ರರಂಗದ ತಾರೆಗಳು, ನಿರ್ದೇಶಕರು, ಸಂಗೀತ ನಿರ್ದೇಶಕರು ಹಾಗೂ ತಾಂತ್ರಿಕ ತಂಡಗಳ ಉಪಸ್ಥಿತಿಯಿಂದ ಈ ಸಮಾರಂಭ ಮತ್ತಷ್ಟು ಕಂಗೊಳಿಸಿ ಸಿನಿಪ್ರಿಯರಿಗೆ ಇದು ಮರೆಯಲಾಗದ ಸಂಭ್ರಮದ ರಾತ್ರಿಯಾಯಿತು.
-
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ












Click it and Unblock the Notifications