ಬೆಂಗಳೂರಿನ ಗೌರಿ ಜೊತೆ ನಟ ಅಮಿರ್ ಖಾನ್ ಡೇಟಿಂಗ್: ಸಿದ್ದರಾಮಯ್ಯ ಭೇಟಿಯಾಗಿ ಹೇಳಿದ್ದೇನು?
Aamir Khan: ಬಾಲಿವುಡ್‌ನ ಖ್ಯಾತ ನಟ ಹಾಗೂ ನಿರ್ದೇಶಕ ಅಮಿರ್ ಖಾನ್ ಅವರು ನಮ್ಮ ಬೆಂಗಳೂರು ಮೂಲದ ಗೌರಿ ಸ್ಪ್ರಾಟ್ (Gauri Spratt) ಅವರನ್ನು ವಿವಾಹವಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಸಾರ್ವಜನಿಕವಾಗಿ ಗೌರಿ ಅವರೊಂದಿಗೆ ಅಮಿರ್ ಖಾನ್ ಕಾಣಿಸಿಕೊಳ್ಳುವ ಮೂಲಕ ವದಂತಿಗಳಿಗೆ ಬಲ ನೀಡುತ್ತಿದ್ದಾರೆ. ಸದ್ಯ ಬೆಂಗಳೂರಿನ ಅಳಿಯನಾಗಲು ಹೊರಟಿರುವ ಅಮಿರ್ ಖಾನ್ ಅವರನ್ನ ಕರ್ನಾಟಕದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ.
ಒಂದೆಡೆ ಕರ್ನಾಟಕದ ಗೌರಿ ಅವರೊಂದಿಗೆ ಮದುವೆ ವದಂತಿ ಇರುವಾಗಲೇ ಸಿಎಂ ಸಿದ್ದರಾಮಯ್ಯ ಅವರು ಬಾಲಿವುಡ್ ನಟ ಅಮಿರ್ ಖಾನ್ ಅವರು ಮುಖಾಮುಖಿ ಭೇಟಿಯಾಗಿದ್ದಾರೆ. ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳ ಭೇಟಿಗಾಗಿ ದೆಹಲಿಯ ರಾಷ್ಟ್ರಪತಿ ಭವನಕ್ಕೆ ತೆರಳಿದ್ದರು. ಈ ವೇಳೆ ಬಾಲಿವುಡ್‌ನ ಸಂವೇದನಾಶೀಲ ನಟ, ನಿರ್ದೇಶಕ ಅಮಿರ್ ಖಾನ್ ಅವರು ಆಕಸ್ಮಿಕವಾಗಿ ಎದುರಾದರು ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ತಮ್ಮ ಭೇಟಿಯ ಕುರಿತು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಿನಿಮಾ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುವ, ಧನಾತ್ಮಕ ಬದಲಾವಣೆಗೆ ತುಡಿಯುವ ಅವರೊಳಗಿನ ಸಮಾಜಮುಖಿ ವ್ಯಕ್ತಿತ್ವ ನಟನೆಯನ್ನು ಮೀರಿ ಜನರಿಗೆ ಅವರನ್ನು ಹೆಚ್ಚು ಆಪ್ತವಾಗಿಸಿದೆ. ಅವರ ಮುಂದಿನ ಚಿತ್ರಗಳಿಗೆ ಶುಭವಾಗಲಿ ಎಂದು ಹಾರೈಸಿ, ಆರೋಗ್ಯದ ಕಾಳಜಿ ವಹಿಸುವಂತೆ ಸಲಹೆ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಅಮಿರ್ ಖಾನ್ ತಮ್ಮ ಹೊಸ ಚಿತ್ರ ʼಸೀತಾರೆ ಜಮೀನ್ ಪರ್ʼ ಸಕ್ಸಸ್‌ನ ಖುಷಿಯಲ್ಲಿದ್ದಾರೆ. ಈ ಚಿತ್ರವನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಇದರ ಬೆನ್ನಲ್ಲೆ ಅಮಿರ್ ಖಾನ್ ಅವರು ಮುಂಬೈ ವಿಮಾನ ನಿಲ್ದಾಣದಲ್ಲಿ ತಮ್ಮ ಗೆಳತಿ ಗೌರಿ ಸ್ಪ್ರಾಟ್ ಜೊತೆ ಕಾಣಿಸಿಕೊಂಡಿದ್ದಾರೆ. ಇಬ್ಬರೂ ವಿಮಾನ ನಿಲ್ದಾಣದ ಮೂಲಕ ಒಟ್ಟಿಗೆ ನಡೆದುಕೊಂಡು ಹೋಗುತ್ತಿರುವ ಹಲವಾರು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.
ಗೌರಿ ಸ್ಪ್ರಾಟ್ ಅವರು ಸದ್ಯ ಮುಂಬೈನಲ್ಲಿದ್ದು, ಇದಕ್ಕೂ ಮುನ್ನ ಅವರು ಸಿಲಿಕಾನ್ ಸಿಟಿ ಬೆಂಗಳೂರಿನ ನಿವಾಸಿಯಾಗಿದ್ದರು. ಗೌರಿ ಅವರು ಭಾಗಶಃ ತಮಿಳು, ಐರಿಶ್ ಬಲ್ಲವರು. ಗೌರಿ ಅವರ ಕುಟುಂಬದ ಹಿನ್ನೆಲೆ ನೋಡುವುದಾದರೆ ಅವರ ಅಜ್ಜ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು. ಅವರ ತಾಯಿ ರೀಟಾ ಸ್ಪ್ರಾಟ್ ಈ ಹಿಂದೆ ಬೆಂಗಳೂರಿನಲ್ಲಿ ಸಲೂನ್ ನಡೆಸುತ್ತಿದ್ದರು. ತಮ್ಮ ತಾಯಿಯ ವೃತ್ತಿಯನ್ನೇ ಮುಂದುವರಿಸಿದ್ದ ಗೌರಿ ಅವರು ಈಗ ಮುಂಬೈನಲ್ಲಿ ಯಶಸ್ವಿ ಬಿಬ್ಲಂಟ್ ಸಲೂನ್ ನಡೆಸುತ್ತಿದ್ದಾರೆ. ಗೌರಿ ಅವರು ಬ್ಲೂ ಮೌಂಟೇನ್ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದರು. ನಂತರ ಲಂಡನ್‌ನ ಕಲಾ ವಿಶ್ವವಿದ್ಯಾಲಯದಲ್ಲಿ ಫ್ಯಾಷನ್ ಸ್ಟೈಲಿಂಗ್ ಮತ್ತು ಫೋಟೋಗ್ರಫಿಯಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಈಗ ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದಾರೆ.












Click it and Unblock the Notifications