Abishek Ambareesh: ತಂದೆಯಾಗುತ್ತಿರುವ ಅಭಿಷೇಕ್ ಅಂಬರೀಶ್; ಹೊಸ ಅತಿಥಿ ಸ್ವಾಗತಕ್ಕೆ ಕುಟುಂಬದಿಂದ ಸಿದ್ಧತೆ
ರೆಬೆಲ್ ಸ್ಟಾರ್ ಅಂಬರೀಶ್ ಮನೆಯಲ್ಲಿ ಹೊಸ ಅತಿಥಿ ಸ್ವಾಗತಕ್ಕೆ ಕುಟುಂಬ ಸಜ್ಜಾಗಿದೆ. ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ರೆಬೆಲ್ ಸ್ಟಾರ್ ಅಭಿಮಾನಿಗಳಿಗೆ ಅಭಿಷೇಕ್ ಅಂಬರೀಶ್ ಗುಡ್ ನ್ಯೂಸ್ ಕೊಟ್ಟಿದ್ದು, ರೆಬೆಲ್ ಸ್ಟಾರ್ ಮತ್ತೆ ಹುಟ್ಟಿ ಬರಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.
ಕಳೆದ ವರ್ಷ ಜೂನ್ 5ರಂದು ಈ ಜೋಡಿ ಅದ್ದೂರಿಯಾಗಿ ವಿವಾಹವಾಗಿದ್ದರು. ಮದುವೆಯಾದ ಒಂದು ವರ್ಷದಲ್ಲೇ ಮನೆಗೆ ಹೊಸ ಅತಿಥಿಯನ್ನು ಸ್ವಾಗತಿಸಲು ದಂಪತಿ ಸಜ್ಜಾಗಿದ್ದಾರೆ. ನಾಲ್ಕು ವರ್ಷಗಳ ಕಾಲ ಪ್ರೀತಿಸಿದ್ದ ಈ ಜೋಡಿ ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದರು.

ಇದೇ ವಾರ ಅವಿವ ಬಿದ್ದಪ್ಪ ಅವರ ಸೀಮಂತ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂಬರೀಶ್ ಅವರ ನಿವಾಸದಲ್ಲೇ ಅದ್ದೂರಿಯಾಗಿ ಸೀಮಂತ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗಿದೆ.
ಅಭಿಷೇಕ್ ಅಂಬರೀಶ್ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದರೆ, ಅವಿವ ಬಿದ್ದಪ್ಪ ಫ್ಯಾಷನ್ ಲೋಕದಲ್ಲಿ ಕೆಲಸ ಮಾಡುತ್ತಿದ್ದಾರೆ. ತಮ್ಮದೇ ಸ್ವಿಮ್ ಸೂಟ್ ಬ್ರಾಂಡ್ ಅನ್ನು ಬಿಡುಗಡೆ ಮಾಡಿದ್ದಾರೆ. ಸದ್ಯ ಅಭಿಷೇಕ್ ಅಂಬರೀಶ್ ಎಲ್ಲಾ ಕೆಲಸಗಳಿಂದ ಬ್ರೇಕ್ ತೆಗೆದುಕೊಂಡಿದ್ದು ಪತ್ನಿಯ ಜೊತೆ ಸಮಯ ಕಳೆಯುತ್ತಿದ್ದಾರೆ.
ಅಭಿಮಾನಿಗಳ ಸಂಭ್ರಮ
ಮಂಡ್ಯದ ಗಂಡು, ರೆಬೆಲ್ ಸ್ಟಾರ್ ಅಂಬರೀಶ್ ಎಂದರೆ ಅಭಿಮಾನಿಗಳು ಎಂದಿಗೂ ಮರೆಯಲಾಗದು. ಅಂಬರೀಶ್ ಈಗಿಲ್ಲವಾದರೂ, ಅವರನ್ನು ಅಭಿಮಾನಿಗಳು ಮಾತ್ರ ಮರೆತಿಲ್ಲ. ಅಭಿಷೇಕ್ ಅಂಬರೀಶ್ ಅವರಲ್ಲೇ ರೆಬೆಲ್ ಸ್ಟಾರ್ ಅವರನ್ನು ಕಾಣುತ್ತಿದ್ದರು. ಈಗ ಅಭಿಷೇಕ್ ತಂದೆಯಾಗುತ್ತಿದ್ದು, ಅಂಬರೀಶ್ ಮತ್ತೆ ಹುಟ್ಟಿ ಬರಲಿ ಎಂದು ಆಶಿಸುತ್ತಿದ್ದಾರೆ.











Click it and Unblock the Notifications