ನಟ ದರ್ಶನ್ ಎ3, ಪತ್ನಿ ವಿಜಯಲಕ್ಷ್ಮಿ ಎ1 ಆರೋಪಿಯಂತೆ: ಯಾವ ಪ್ರಕರಣದಲ್ಲಿ ಗೊತ್ತಾ?-ಮಾಹಿತಿ, ವಿವರ
ಬೆಂಗಳೂರು, ಜೂನ್, 19: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಲೇ ಇದ್ದು, ಈ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಆಗಿದ್ದರೆ, ಎ2 ಆರೋಪಿ ನಟ ದರ್ಶನ್ ಆಗಿದ್ದಾನೆ. ಇನ್ನು ಇದೀಗ ನಟ ದಶರ್ನ್ ಜೊತೆಗೆ ಪತ್ನಿ ವಿಜಯಲಕ್ಷ್ಮಿಗೂ ಸಂಕಟ ಎದುರಾದಂತಾಗಿದೆ. ಹಾಗಾದರೆ ಮಾಹಿತಿ ಇಲ್ಲಿದೆ ತಿಳಿಯಿರಿ.
ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸುದ್ದಿ ಬರೀ ರಾಜ್ಯ ಅಲ್ಲದೆ, ದೇಶದೆಲ್ಲೆಡೆ ವ್ಯಾಪಿಸಿಬಿಟ್ಟಿದೆ. ಅಲ್ಲದೆ, ನಟ ದರ್ಶನ್ ಇಂತಹ ನೀಚ ಕೃತ್ಯ ಮಾಡಿದ್ದಾನೆಯಾ ಎನ್ನುವ ಆಶ್ಚರ್ಯದ ಮಾತುಗಳು ಕೂಡ ಕೇಳಿಬರುತ್ತಿವೆ. ಇದೆಲ್ಲದರ ನಡುವೆ ಇದೀಗ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಮತ್ತೊಂದು ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ.

ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ನಟ ದರ್ಶನ್‌ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ಜೊತೆ ಪತ್ನಿ ವಿಜಯಲಕ್ಷ್ಮಿಗೂ ಈ ಸಂಕಟ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್ ಎ2 ಆರೋಪಿಯಾದರೆ, ಇನ್ನು ಪವಿತ್ರಾ ಗೌಡ ಎ1 ಆರೋಪಿ ಆಗಿದ್ದಾರೆ. ಆದರೆ, ಮತ್ತೊಂದು ಪ್ರಕರಣದಲ್ಲಿ ಮೂಲಗಳ ಪ್ರಕಾರ ದರ್ಶನ್ ಪತ್ನಿ ವಿಜಯಲಕ್ಷ್ಮಿ ಎ1 ಆರೋಪಿಯಾಗಿದ್ದು, ದರ್ಶನ್ ಎ3 ಆರೋಪಿಯಾಗಿದ್ದಾರೆ.
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾದ ಬಳಿಕ ದರ್ಶನ್‌ಗೆ ಸಂಬಂಧಿಸಿದ ಒಂದೊಂದೇ ಪ್ರಕರಣಗಳು ಬಟಾ ಬಯಲಾಗುತ್ತಿವೆ. ದರ್ಶನ್ ಅವರು ಮೈಸೂರಿನ ಬಳಿಯಿರುವ ತಮ್ಮ ತೋಟದ ಮನೆಯಲ್ಲಿ ಕಾನೂನುಬಾಹಿರವಾಗಿ ವಿಶಿಷ್ಟ ಜಾತಿಯ ಬಾರ್ ಹೆಡೆಡ್ ಗೂಸ್ ಬಾತುಕೋಳಿಯನ್ನು ಸಾಕಿದ್ದು, ಈ ಪಕ್ಷಿಯನ್ನು ವಶಕ್ಕೆ ಪಡದಿದ್ದ ಅರಣ್ಯ ಇಲಾಖೆ ಎಫ್‌ಐಆರ್ ದಾಖಲಿಸಿ, ದರ್ಶನ್ ಸೇರಿದಂತೆ ಸಂಬಂಧಪಟ್ಟವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು.
ಹೀಗೆ ಅನೇಕ ಬಾರಿ ನೋಟಿಸ್ ನೀಡಿದರೂ ಕೂಡ ದರ್ಶನ್ ವಿಚಾರಣೆಗೆ ಹಾಜರಾಗದಿದ್ದಕ್ಕೆ, ಇದೀಗ ದರ್ಶನ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಅರಣ್ಯ ಇಲಾಖೆ ನಿರ್ಧರಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಈ ಪ್ರಕರಣದಲ್ಲಿ ವಿಜಯಲಕ್ಷ್ಮಿ ಯಾಕೆ ಸಿಲುಕಿಕೊಂಡರು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮೈಸೂರಿನ ತಿ.ನರಸೀಪುರ ಬಳಿಯಿರುವ ಫಾರ್ಮ್ ಹೌಸ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೆಸರಿನಲ್ಲಿರುವ ಹಿನ್ನೆಲೆ ಅವರನ್ನು ಈ ಪ್ರಕರಣದಲ್ಲಿ ಎ1 ಆರೋಪಿಯನ್ನಾಗಿಸಲಾಗಿದೆ. ಅಲ್ಲದೆ, ಫಾರ್ಮ್‌ಹೌನ್‌ನ ಮ್ಯಾನೇಜರ್ ಆಗಿರುವ ನಾಗರಾಜ್ ಅವರನ್ನು ಎ2 ಆರೋಪಿ, ದರ್ಶನ್ ಅವರನ್ನು ಎ3 ಆರೋಪಿಯನ್ನಾಗಿ ಮಾಡಲಾಗಿದೆ.
ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಚುರುಕುಗೊಳ್ಳುತ್ತಿದ್ದಂತೆ ಅರಣ್ಯ ಇಲಾಖೆ ಸಹ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಚಾರ್ಜ್‌ಶೀಟ್ ಸಲ್ಲಿಕೆ ಮಾಡಲು ಮುಂದಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದ್ದು, ಇದರಿಂದ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ಒಟ್ಟಿನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಬೆನ್ನಲ್ಲೇ ನಟ ದರ್ಶನ್ ಅವರ ಮೇಲಿದ್ದ ಇನ್ನುಳಿದ ಪ್ರಕರಣಗಳು ಒಂದೊಂದೇ ರೀ ಓಪನ್ ಆಗುತ್ತಲಿದ್ದು, ಈ ಮೂಲಕ ದಿನದಿಂದ ದಿನಕ್ಕೆ ದರ್ಶನ್‌ಗೆ ಸಂಕಷ್ಟಗಳ ಸರಮಾಲೆಯೇ ಎದುರಾಗುತ್ತಿವೆ.












Click it and Unblock the Notifications