BREAKING: ನಟ ದರ್ಶನ್‌ಗೆ ಮತ್ತೆ ಶಾಕ್ ನೀಡಿದ ಕೋರ್ಟ್-ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Darshan Thoogudeepa: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮತ್ತೆ ಮುಂದೂಡಿಕೆ ಮಾಡಿದೆ. ಇಂದು (ಸೆಪ್ಟೆಂಬರ್ 30) ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸೆಷನ್ ಕೋರ್ಟ್‌ನಲ್ಲಿ ದರ್ಶನ್ ಪರ ವಕೀಲರು ವಾದ ಮಂಡನೆ ಮಾಡಲು ಅವಕಾಶ ಬೇಕು ಎಂದು ನ್ಯಾಯಾಧೀಶರಿಗೆ ಮನವಿ ಮಾಡಿದ್ದು, ಈ ಹಿನ್ನೆಲೆ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಅಕ್ಟೋಬರ್ 4ಕ್ಕೆ ಮುಂದೂಡಿದೆ. ಇದರಿಂದ ದರ್ಶನ್‌ಗೆ ಮತ್ತೆ ಬಳ್ಳಾರಿ ಜೈಲೇ ಗತಿ ಎನ್ನುವಂತಾಗಿದೆ.

ಈಗಾಗಲೇ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ವಿಚಾರಣೆಯನ್ನು ಮುಕ್ಯಾಯಗೊಳಿಸಿ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ಇನ್ನು ಇದೀಗ ದರ್ಶನ್ ಜೈಲಿನಲ್ಲೇ 100 ದಿನ ಕಳೆದಿದ್ದಾರೆ.
ತನಿಖೆ ಮುಗಿದ ಹಿನ್ನೆಲೆ ಜಾಮೀನು ನೀಡಬೇಕು ಎಂದು ನ್ಯಾಯಾಲಯಕ್ಕೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಕೆ ಮಾಡಿದ್ದರು. ಆದರೆ ಈಗಾಗಲೇ ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು, ಆಕ್ಷೇಪಣೆ ಸಲ್ಲಿಸಿ ಜಾಮೀನು ನೀಡದಂತೆ ಮನವಿ ಮಾಡಿದ್ದಾರೆ. ಈ ಹಿನ್ನೆಲೆ ಕೋರ್ಟ್ ಅರ್ಜಿ ವಿಚಾರಣೆಯನ್ನು ಮತ್ತೆ ಮುಂದೂಡಿದೆ.
ಇನ್ನು ಬಳ್ಳಾರಿ ಜೈಲಿಗೆ ಪತ್ನಿ ವಿಜಯಲಕ್ಷ್ಮಿ ಆಗಮಿಸಿದ ವೇಳೆ ದರ್ಶನ್ ಜಾಮೀನು ಮುಂದೂಡಿಕೆ ಬಗ್ಗೆ ಬೇಸರಗೊಂಡಿದ್ದಾರೆ. ಅಲ್ಲದೆ ಇದೇ ವೇಳೆ ವಕೀಲರನ್ನು ಭೇಟಿಯಾಗಿ ಜಾಮೀನಿನ ಬಗ್ಗೆ ಮಾತನಾಡುವಂತೆ ಪತ್ನಿ ವಿಜಯಲಕ್ಷ್ಮಿಗೆ ಹೇಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ದರ್ಶನ್ ಜೈಲು ಸೇರಿದಾಗಿನಿಂದಲೂ ವಿಜಯಲಕ್ಷ್ಮಿ ಟೆಂಪಲ್ ರನ್ ಮುಂದುವರೆಸಿದ್ದಾರೆ. ಮತ್ತೊಂದೆಡೆ ಅಭಿಮಾನಿಗಳು ಕೂಡ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ಮಾಡಿಸುವ ಮೂಲಕ ತಮ್ಮ ನೆಚ್ಚಿನ ನಟ ಬೇಗ ಬಿಡುಗಡೆಯಾಗುವಂತೆ ಬೇಡಿಕೊಳ್ಳುತ್ತಿದ್ದಾರೆ.












Click it and Unblock the Notifications