Darshan: ನಿಂದನೆ, ಬೆದರಿಕೆ, ಮೂಲ ಸೌಕರ್ಯ ಇಲ್ಲ: ದರ್ಶನ್ ಪರ ವಕೀಲರ ವಾದ ಆಲಿಸಿದ ಸುಪ್ರೀಂ ಕೋರ್ಟ್‌ ಹೇಳಿದ್ದೇನು

Actor Darshan: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ಜೈಲು ಸೇರಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಸೋಮವಾರ (ಮೇ 4) ಸುಪ್ರೀಂ ಕೋರ್ಟ್​​ನಲ್ಲಿ ನಡೆದಿದೆ. ಹಾಗಾದ್ರೆ ಏನೆಲ್ಲಾ ಆಯ್ತು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್‌ ಅವರು ಸುಪ್ರೀಂ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. "ಸಹ ಕೈದಿಗಳು ನನ್ನನ್ನು ನಿಂದನೆ ಮಾಡುವುದಲ್ಲದೆ, ಬೆದರಿಕೆಗಳನ್ನು ಹಾಕುತ್ತಿದ್ದಾರೆ. ಮೂಲಭೂತ ಸೌಕರ್ಯಗಳಾದ ಸರಿಯಾದ ಆಹಾರ, ಬಟ್ಟೆ ಮತ್ತು ಹಾಸಿಗೆ ಪಡೆಯಲು ತಾರತಮ್ಯ ಮಾಡಲಾಗುತ್ತಿದೆ," ಎಂದು ಜಾಮೀನು ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದರು.

Actor Darshan Bail Hearing Supreme Court Seeks Report from Karnataka Government in Renukaswamy Case

ದರ್ಶನ್ ಪರ ವಕೀಲರ ವಾದ ಏನು?

ಮಧ್ಯಂತರ ಜಾಮೀನು ಕೋರಿ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಜೆ.ಬಿ ಪರ್ದಿವಾಲಾ ಮತ್ತು ವಿಜಯ್‌ ಬಿಷ್ಣೋಯ್‌ ಅವರ ವಿಭಾಗೀಯ ಪೀಠವು ನಡೆಸಿತು. ಪ್ರಕರಣದ ಎ2 ಆರೋಪಿ ಆಗಿರುವ ನಟ ದರ್ಶನ್ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ವಾದ ಮಂಡಿಸಿದರು. "ದರ್ಶನ್​ ಅವರಿಗೆ ಫೈವ್ ಸ್ಟಾರ್ ಟ್ರೀಟ್‌ಮೆಂಟ್‌ ಕೊಡಬೇಡಿ ಎಂದಿದ್ದೀರಿ. ಆದರೆ ಜೈಲು ಅಧಿಕಾರಿಗಳು ಮೂಲಭೂತ ಸವಲತ್ತನ್ನು ಸಹ ಕೊಡುತ್ತಿಲ್ಲ," ಎಂದು ವಾದ ಮಂಡನೆ ಮಾಡಿದ್ದಾರೆ.

"ಸಾಮಾನ್ಯ ಆರೋಪಿಗೆ ಸಿಗುವ ಸೌಲಭ್ಯವೂ ದರ್ಶನ್‌ಗೆ ಸಿಗುತ್ತಿಲ್ಲ. ದರ್ಶನ್‌ ಅವರನ್ನು ಕ್ವಾರಂಟೈನ್‌ ಸೆಲ್‌ನಲ್ಲಿ ಇರಿಸಲಾಗಿದೆ. ಅಲ್ಲಿ ಬೆಳಕಿಲ್ಲ, ಊಟವನ್ನೂ ತರಿಸಿಕೊಳ್ಳಲಾಗುತ್ತಿಲ್ಲ. ಈ ಸಂಬಂಧ ವಿಚಾರಣಾ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲಾಗಿತ್ತು. ಆ ನ್ಯಾಯಾಲಯವು ಸುಪ್ರೀಂ ಕೋರ್ಟ್‌ ಆದೇಶದಿಂದ ನಿಮಗೆ ಸೌಲಭ್ಯ ಕೊಡಲಾಗುತ್ತಿಲ್ಲ ಎನ್ನುತ್ತಿದೆ," ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರಕ್ಕೆ ಸುಪ್ರೀಂ ನೋಟಿಸ್

ದರ್ಶನ್‌ ಪರ ವಕೀಲರ ವಾದ ಆಲಿಸಿದ ಬಳಿಕ ಸುಪ್ರೀಂ ಕೋರ್ಟ್‌ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದ್ದು, 57ನೇ ಸಿಸಿಎಚ್ ಕೋರ್ಟ್​ನಿಂದ ವರದಿ ಕೇಳಿದೆ. "ದರ್ಶನ್ ಪ್ರಕರಣದಲ್ಲಿ ಈವರೆಗೂ ಎಷ್ಟು ಸಾಕ್ಷಿಗಳ ವಿಚಾರಣೆ ನಡೆದಿದೆ? ಎಷ್ಟು ಸಾಕ್ಷಿಗಳ ವಿಚಾರಣೆ ಬಾಕಿಯಿದೆ? ಸಾಕ್ಷ್ಯ ವಿಚಾರಣೆ ಮುಗಿಯಲು ಇನ್ನೂ ಎಷ್ಟು ಸಮಯ ಬೇಕು? ಜೈಲಿನಲ್ಲಿ ದರ್ಶನ್​ಗೆ ಮೂಲ ಸೌಕರ್ಯ ಒದಗಿಸಲಾಗಿದೆಯೇ ಅಥವಾ ಇಲ್ಲವೇ?," ಎಂದು ನೋಟಿಸ್‌ನಲ್ಲಿ ಸುಪ್ರೀಂ ಪ್ರಶ್ನೆ ಕೇಳಿದೆ.

"ವಿಚಾರಣಾ ಕೈದಿ ಅರ್ಹವಾಗಿ ಪಡೆಯಬಹುದಾದ ಮೂಲ ಸೌಲಭ್ಯವನ್ನು ದರ್ಶನ್‌ಗೆ ನೀಡಲಾಗುತ್ತಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ರಾಜ್ಯ ಸರ್ಕಾರ ವರದಿ ಸಲ್ಲಿಸಬೇಕು. ಒಂದು ವಾರದಲ್ಲಿ ಈ ವರದಿಯನ್ನು ಸಲ್ಲಿಸಬೇಕು," ಎಂದು ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ.‌ ನ್ಯಾಯಮೂರ್ತಿಗಳಾದ ಪರ್ದಿವಾಲಾ ಮತ್ತು ವಿಜಯ್ ಬಿಷ್ಣೋಯಿ ಅವರ ಪೀಠದಲ್ಲಿ ವಿಚಾರಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+