Actor Darshan: ಅಂಬರೀಶ್ ಮೊಮ್ಮಗನ ನಾಮಕರಣಕ್ಕೆ ಬಾರದ ನಟ ದರ್ಶನ್; ಕಾರಣ ಇಲ್ಲಿದೆ
ಅಬಂರೀಷ್, ನಟ ದರ್ಶನ್ ಅವಿನಾಭಾವ ಸಂಬಂಧ ಇತ್ತು. ಸ್ನೇಹಕ್ಕೂ ಮಿಗಿಲಾಗಿ ಅಪ್ಪ, ಮಗನಂತೆ ಯಾವಾಗಲೂ ಒಬ್ಬರನ್ನೊಬ್ಬರು ಬಿಟ್ಟು ಇರುತ್ತಿರಲಿಲ್ಲ. ಇನ್ನು ನಿನ್ನೆ ನಡೆದ ಅಂಬರೀಷ್ ಮೊಮ್ಮಗ ಅಂದ್ರೆ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಅವರ ಮಗನ ನಾಮಕರಣಕ್ಕೆ ದರ್ಶನ್ ಬದಲಾಗಿ ನಟ ಕಿಚ್ಚ ಸುದೀಪ್ ಬಂದಿದ್ದರು. ದರ್ಶನ್ ಬರದಿರಲು ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸುಮಲತಾ ಯಾವಾಗಲೂ ದರ್ಶನ್ ನನ್ನ ಮಗ ಹೇಳಿಕೊಳ್ಳುತ್ತಲೇ ಬಂದಿದ್ದಾರೆ. ಹೀಗಿದ್ದರೂ ಸಹ ದರ್ಶನ್ ಅವರ ಮೊಮ್ಮಗನ ನಾಮಕರಣಕ್ಕೆ ಬರಲಿಲ್ಲ. ಇದಕ್ಕೆ ಬಹುತೇಕ ಮಂದಿ ಸುಮಲತಾ ಹಾಗೂ ದರ್ಶನ್ ನಡುವೆ ಮನಸ್ತಾಪ ಆಗಿದೆ. ಆದ್ದರಿಂದ ದರ್ಶನ್ ಬಂದಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಆದ್ರೆ ಕಾರಣ ಇದಲ್ಲ, ಬೇರೆಯದ್ದೇ ಇದೆ.

ಅಭಿಷೇಕ್ ಅಂಬರೀಶ್ ಮತ್ತು ಅವಿವಾ ದಂಪತಿ ಮಗುವಿನ ನಾಮಕರಣ ಕಾರ್ಯಕ್ರಮ ನಿನ್ನೆ ನೆರವೇರಿದೆ. ತಮ್ಮ ಮಗುವಿಗೆ, ರಾಣಾ ಅಮರ್ ಅಂಬರೀಶ್ ಎಂದು ನಾಮಕರಣ ಮಾಡಿದ್ದಾರೆ. ಈ ಕಾರ್ಯಕ್ರಮವು ಖಾಸಗಿ ಹೋಟೆಲ್‌ವೊಂದರಲ್ಲಿ ನಡೆದಿದ್ದು, ಅಂಬರೀಶ್ ಕುಟುಂಬದ ಆಪ್ತರು, ಸಿನಿ ತಾರೆಯರು, ರಾಜಕೀಯ ಗಣ್ಯರು ಸಮಾರಂಭದಲ್ಲಿ ಭಾಗಿಯಾಗಿ ಶುಭ ಹಾರೈಸಿದರು.
ಇನ್ನೂ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ದಂಪತಿ ಮಗನ ನಾಮಕರಣ ಶಾಸ್ತ್ರಕ್ಕೆ ನಟ ದರ್ಶನ್ ಬರಬಹುದು ಎಂದು ತುಂಬಾ ಜನ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಅವರು ಬಲೇ ಇಲ್ಲ. ಇದರಿಂದ ಅಭಿಮಾನಿಗಳ ನಿರೀಕ್ಷೆ ಹುಸಿ ಆದಂತಾಗಿದೆ.
ಅಭಿಷೇಕ್ ಅಂಬರೀಷ್ ಅವರು ನಾಮಕರಣ ಶಾಸ್ತ್ರಕ್ಕೆ ಕುಟುಂಬಸ್ಥರು ಹಾಗೂ ಆತ್ಮೀಯರಿಗಷ್ಟೇ ಆಹ್ವಾನ ನೀಡಿದ್ದರು. ಆದ್ದರಿಂದ ಅಭಿಷೇಕ್ ಅಂಬರೀಷ್ ಅವರ ಮಗನ ನಾಮಕರಣಕ್ಕೆ ನಟ ದರ್ಶನ್ ಬರಬಹುದು ಎಂದು ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದರು.
ಆದರೆ ನಟ ದರ್ಶನ್ ಕುಟುಂಬಸ್ಥರು ಯಾರೋಬ್ಬರು ಅಭಿಷೇಕ್ ಅಂಬರೀಷ್ ಮಗನ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿ ಆಗಿಲ್ಲ. ಇದು ಸಾಕಷ್ಟು ಅಭಿಮಾನಿಗಳಿಗೆ ಬೇಸರ ಉಂಟು ಮಾಡಿದೆ ಎಂದು ಹೇಳಬಹುದು. ಇತ್ತೀಚೆಗಷ್ಟೆ ಸಾಮಾಜಿಕ ಜಾಲತಾಣದಲ್ಲಿ ಸುಮಲತಾ ಅಂಬರೀಷ್, ಅಭಿಷೇಕ್, ಅವಿವಾ ಎಲ್ಲರನ್ನೂ ನಟ ದರ್ಶನ್ ಅನ್‌ಫಾಲೋ ಮಾಡಿ ಅಚ್ಚರಿ ಮೂಡಿಸಿದ್ದರಯ.
ಇನ್ನು ಈ ಸುದ್ದಿ ದೊಡ್ಡ ಮಟ್ಟದಲ್ಲಿ ವೈರಲ್ ಆಗಿತ್ತು. ಇದೀಗ ಭಿಷೇಕ್ ಅಂಬರೀಷ್ ಅವರು ನಾಮಕರಣ ಶಾಸ್ತ್ರಕ್ಕೆ ಬರದೇ ಇದ್ದಿದ್ದೂ ಮತ್ತೊಂದು ಅನುಮಾನಕ್ಕೆ ಕಾರಣವಾಗಿತ್ತು. ಆದರೆ, ಇದೀಗ ನಟ ದರ್ಶನ್ ಅವರು ದಿ ಡೆವಿಲ್ ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಆದ್ದರಿಂದ ಅಭಿಷೇಕ್ ಹಾಗೂ ಅವಿವಾ ದಂಪತಿ ಮಗನ ನಾಮಕರಣಕ್ಕೆ ಬಂದಿರಲಿಲ್ಲ ಎಂದು ತಿಳಿದುಬಂದಿದೆ.
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಿಡುಗಡೆಯಾದ ಬಳಿಕ ಇತ್ತೀಚೆಗಷ್ಟೇ ನಟ ದರ್ಶನ್ ಸಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಅಲ್ಲದೆ, ಇನ್ಸ್ಟಾಗ್ರಾಂನಲ್ಲಿ ತನ್ನ ಕುಟುಂಬದ ಸದಸ್ಯರು ಸೇರಿದಂತೆ ಅಭಿಷೇಕ್ ಅಂಬರೀಶ್ ಕುಟುಂಬದ ಸದಸ್ಯರನ್ನು ಅಲ್‌ಫಾಲೋ ಮಾಡಿದ್ದರು. ಇದು ಅಚ್ಚರಿಗೂ ಕಾರಣವಾಗಿತ್ತು. ಆದ್ರೆ ಇದೀಗ ಅವರು ಅರ್ಧಕ್ಕೆ ನಿಂತಿದ್ದ ಡೆವಿಲ್ ಶೂಟಿಂಗ್ ಚಿತ್ತೀಕರಣದಲ್ಲಿ ಕಾರ್ಯನಿರತರಾಗಿದ್ದಾರೆ ಎನ್ನಲಾಗುತ್ತಿದೆ. ದರ್ಶನ್‌ಗೆ ಬೆನ್ನು ನೋವು ಹಿನ್ನೆಲೆ ಸಾಹಸದ ದೃಶ್ಯಗಳ ಶೂಟಿಂಗ್ ಬಿಟ್ಟು, ಬರೀ ಮಾತಿನ ಶೂಟಿಂಗ್ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್‌ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications