Actor Darshan Gun License: ನನಗೆ ಗನ್ ಬೇಕೇ ಬೇಕು, ಪರವಾನಗಿ ರದ್ದು ಮಾಡ್ಬೇಡಿ ಪ್ಲೀಸ್: ನಟ ದರ್ಶನ್ ಪೊಲೀಸರಿಗೆ ಮನವಿ
Actor Darshan Gun License: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಇತ್ತೀಚೆಗಷ್ಟೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಇದೀಗ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇದನ್ನು ಬಗೆಹರಿಸಿಕೊಳ್ಳಲು ಮುಂದಾಗಿದ್ದಾರೆ. ಹಾಗಾದರೆ ಆ ಸಮಸ್ಯೆ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಚಿತ್ರದುರ್ಗದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ನಟ ದರ್ಶನ್‌ಗೆ ಇದೀಗ ಗನ್ ಲೈಸನ್ಸ್ ರದ್ದಾಗುವ ಆತಂಕ ಎದುರಾಗಿದೆ. ನಟ ದರ್ಶನ್, ನನಗೆ ಗನ್ ಬೇಕು, ಪರವಾನಗಿ ರದ್ದು ಮಾಡಬೇಡಿ ಎಂದು ಪೊಲೀಸರಿಗೆ ಮನವಿ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ರದ್ದುಪಡಿಸುವಂತೆ ಪೊಲೀಸರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಇದರ ಬೆನ್ನಲ್ಲೇ ದರ್ಶನ್ ಬಳಿಯಿದ್ದ ಗನ್ ಪರವಾನಗಿ ರದ್ದು ಮಾಡಲು ಪೊಲೀಸರು ನಿರ್ಧರಿಸಿ ನಟ ದರ್ಶನ್‌ಗೆ ನೋಟಿಸ್ ನೀಡಿದ್ದರು. ಇದಕ್ಕೆ ಉತ್ತರ ನೀಡಿರುವ ನಟ ದರ್ಶನ್, ನಾನು ಸೆಲೆಬ್ರಿಟಿ, ಹೊರಗಡೆ ಹೋದಾಗ ಸುರಕ್ಷತೆಗೆ ಗನ್ ಬೇಕಾಗುತ್ತದೆ. ನನಗೆ ಗನ್ ಬೇಕು, ಪರವಾನಗಿ ರದ್ದು ಮಾಡಬೇಡಿ ಎಂದು ಪೊಲೀಸರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ನೀವು ಕೊಲೆ ಪ್ರಕರಣದ ಆರೋಪಿ ಆಗಿದ್ದೀರಿ, ಜಾಮೀನಿನ ಮೇಲೆ ಹೊರಗಿರುವ ಕಾರಣ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ. ಆದ್ದರಿಂದ ನಿಮ್ಮ ಲೈಸೆನ್ಸ್ ರದ್ದುಪಡಿಸಬೇಕಾಗಿದೆ ಎಂದು ಪೊಲೀಸರು ನೋಟಿಸ್ ನೀಡಿದ್ದರು. ಇದೀಗ ಇದಕ್ಕೆ ನಟ ದರ್ಶನ್ ಪತ್ರದ ನಮೂಲಕ ಪ್ರತಿಕ್ರಿಯಿಸಿ, ಗನ್ ಪರವಾನಗಿ ರದ್ದುಪಡಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎಂಬ ಕಾರಣಕ್ಕೆ ನಟ ದರ್ಶನ್ & ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆದೊಯ್ದು ಭೀಕರವಾಗಿ ಹಲ್ಲೆ ಮಾಡಿ ಹತ್ಯೆಗೈದಿದ್ದಾರೆ ಎಂದು ಪೊಲೀಸ್ ಮೂಲಗಳಲ್ಲಿ ಉಲ್ಲೇಖವಾಗಿತ್ತು. ಈ ಹಿನ್ನೆಲೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದರು.
ಇನ್ನು ನಟ ದರ್ಶನ್ ಅವರು ಕುಟುಂಬದ ಜೊತೆ ಸೇರಿ ಮೈಸೂರಿನ ಫಾರ್ಮ್ ಹೌಸ್‌ನಲ್ಲಿ ಸಂಕ್ರಾಂತಿ ಹಬ್ಬವನ್ನು ಅದ್ಧೂರಿಯಾಗಿ ಸಂಭ್ರಮಾಚರಣೆ ಮಾಡಿದ್ದಾರೆ. ಈ ಸಂಭ್ರಮಾಚರಣೆಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಫೋಟೋಗಳನ್ನಯ ಗಮನಿಸಿದ ಅಭಿಮಾನಿಗಳು ಸಹ ಕಾಮೆಂಟ್ ಬಾಕ್ಸ್‌ನಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.












Click it and Unblock the Notifications