Darshan Thoogudeepa: ನಟ ದರ್ಶನ್ ಪಟ್ಟಣಗೆರೆ ಶೆಡ್‌ಗೆ ಹೋಗಿದ್ದು ಯಾವ ಕಾರಿನಲ್ಲಿ ಹಾಗೂ ಕರೆದುಕೊಂಡೊಯ್ದಿದ್ಯಾರು?
Darshan Thoogudeepa: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಗ್ಯಾಂಗ್ ವಿರುದ್ಧ ಪೊಲೀಸರು ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರೇಣುಕಾಸ್ವಾಮಿ ನರಳಾಟದ ಫೋಟೋಗಳು ವೈರಲ್ ಆಗಿವೆ. ಅಲ್ಲದೆ, ದರ್ಶನ್ ಯಾವ ಕಾರಿನಲ್ಲಿ ಶೆಡ್ ಹೋಗಿದ್ದು ಹಾಗೂ ಕರೆದುಕೊಂಡು ಹೋಗಿದ್ದು ಯಾರು ಎನ್ನುವ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ.
ಪವಿತ್ರಾಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿಯನ್ನು ನಟ ದರ್ಶನ್ & ಗ್ಯಾಂಗ್ ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆದೊಯ್ದು ಭೀಕರವಾಗಿ ಹತ್ಯೆ ಮಾಡಿದ್ದರು ಎನ್ನುವ ಮಾಹಿತಿಲಭ್ಯವಾಗಿತ್ತು. ಇನ್ನು ಇದೀಗ ಹತ್ಯೆಗೂ ಮುನ್ನ ಲಾರಿ ಮುಂದೆ ಕುಳಿತು ರೇಣುಕಾಸ್ವಾಮಿ ಕೈಮುಗಿದು ನನ್ನನ್ನು ಬಿಟ್ಟುಬಿಡಿ ಎಂದು ಪರಿಪರಿಯಾಗಿ ಬೇಡಿಕೊಂಡಿರುವ ಫೋಟೋಗಳು ಭಾರೀ ವೈರಲ್ ಆಗುತ್ತಿವೆ.

ಪಟ್ಟಣಗೆರೆ ಶೆಡ್‌ಗೆ ದರ್ಶನ್‌ನನ್ನು ಮನೆಯಿಂದ ಪಟಾಲಂ ಗ್ಯಾಂಗ್ ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಕೊರೆದೊಯ್ದಿದ್ದು, ಶೆಡ್‌ನಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ ಬಳಿಕ ಮನೆಗೆ ಅದೇ ಕಾರಿನಲ್ಲಿ ದರ್ಶನ್‌ನನ್ನು ಮನೆಗೆ ಬಿಟ್ಟುಬಂದಿದ್ದಾರೆ ಎನ್ನುವ ಸ್ಫೋಟಕ ಮಾಹಿತಿಯೊಂದು ಲಭ್ಯವಾಗಿದೆ. ಬಳಿಕ ಪೊಲೀಸ್ ತನಿಖೆ ಮಟ್ಟಕ್ಕೂ ಈ ಪ್ರಕರಣದ ಬಂದಿದ್ದು, ಇದೀಗ ಕೊನೆಗೆ ದರ್ಶನ್‌ಗೆ ಉರುಳು ಬಿಗಿಯಾಗುತ್ತಲೇ ಇದೆ.
ಚಾರ್ಜ್ ಶೀಟ್‌ನಲ್ಲಿ ಏನಿದೆ?: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರರಣದಲ್ಲಿ ಪೊಲೀಸರು ಸುಮಾರು 3,991 ಪುಟಗಳ ಚಾರ್ಜ್‌ಶೀಟ್ ಅನ್ನು ಇಂದು (ಸೆಪ್ಟೆಂಬರ್ 4) ಬೆಳಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಸಲ್ಲಿಸಿದ್ದಾರೆ.
ಈ ಪ್ರಕರಣದಲ್ಲಿ ನಟ ದರ್ಶನ್ ಎ2 ಆರೋಪಿ ಆಗಿದ್ದರೆ, ಪವಿತ್ರಾ ಗೌಡ ಎ1 ಆರೋಪಿ ಆಗಿದ್ದರು. ಇದನ್ನು ಚಾರ್ಜ್ ಶೀಟ್‌ನಲ್ಲಿ ದರ್ಶನ್ ಎ1 ಹಗೂ ಪವಿತ್ರಾ ಎ2 ಬದಲಾವಣೆ ಆಗಬಹುದು ಎಂದು ಅಂದಾಜಿತ್ತು. ಆದರೆ, ಯಾವುದೇ ಬದಲಾವಣೆ ಆಗಿಲ್ಲ. ಎಸಿಪಿ ಚಂದನ್ ಕುಮಾರ್ ಹಾಗೂ ತನಿಖಾ ತಂಡ ದರ್ಶನ್‌ನನ್ನು ಎರಡನೇ ಆರೋಪಿಯಾಗಿ ಉಲ್ಲೇಖ ಮಾಡಿದ್ದು, ಪವಿತ್ರಾ ಅವರು ಎ1 ಆರೋಪಿಯಾಗಿಯೇ ಮುಂದುವರೆದಿದ್ದಾರೆ.
* ನಟ ದರ್ಶನ್ ಸೇರಿ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. * 3 ಪ್ರತ್ಯಕ್ಷ ಸಾಕ್ಷಿಗಳು ಇವೆ. * ಎಫ್ಎಸ್ಎಲ್ ಮಾತ್ತು ಸಿಎಫ್ಎಸ್ಎಲ್ನಿಂದ 8 ವರದಿಗಳು ಇವೆ. * ಒಟ್ಟು 200ಕ್ಕೂ ಅಧಿಕಾ ಸಾಕ್ಷಿಗಳು ಇವೆ. * ಕಿಡ್ನಾಪ್, ಹಲ್ಲೆ, ಕೊಲೆ ಬಳಿಕ ಮುಚ್ಚಿಹಾಕಲು 30 ಲಕ್ಷ ರೂಪಾಯಿ ನೀಡಿದ್ದು ದರ್ಶನ್ ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. * ದರ್ಶನ್ ಬಟ್ಟೆ ಮತ್ತು ಶೂನಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಇರುವುದು ಪತ್ತೆಯಾಗಿದ್ದು, ಇದರಿಂದ ದರ್ಶನ್ ಹಲ್ಲೆ ಮಾಡಿರುವ ಬಗ್ಗೆ ಮತ್ತು ಕೊಲೆಯಲ್ಲಿ ಭಾಗಿಯಾದ ಬಗ್ಗೆ ಮಾಹಿತಿ ದೊರೆದಂತಾಗಿದೆ. * ಹಲ್ಲೆ ನಡೆಯುವ ಸ್ಥಳದಲ್ಲಿ ಪವಿತ್ರಾ ಗೌಡ & ದರ್ಶನ್ ಹಾಜರಿದ್ದು, ಈ ವೇಳೆ ಪವಿತ್ರಾ ಗೌಡ ರೇಣುಕಾಸ್ವಾಮಿ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ಕೃತ್ಯ ನಡೆದ ಸಮಯದಲ್ಲಿ ಇವರಿಬ್ಬರ ಮೊಬೈಲ್ ಲೋಕೇಶನ್ ಕೂಡ ಲಭ್ಯವಾಗಿದೆ.
ಮತ್ತೊಂದೆಡೆ ಪ್ರಕರಣಟ ತನಿಖೆ ಎನ್ನೂ ಪೂರ್ಣ ಆಗಿಲ್ಲ. ಆದ್ದರಿಂದ ಸಿಆರ್ಪಿಸಿ 173(8) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದ್ದು, ಈ ಬಗ್ಗೆ ವಿಶೇಷ ಕೋರ್ಟ್‌ಗೆ ಪೊಲೀಸರು ಮನವಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications