Darshan Thoogudeepa: ನಟ ದರ್ಶನ್ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲು: ದಾಸನಿಗೆ ಏನಾಯ್ತು?
ಬಳ್ಳಾರಿ, ಅಕ್ಟೋಬರ್ 22: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನನ್ ಗೆ ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. 120 ದಿನಗಳ ಕಾಲ ಜೈಲು ವಾಸವನ್ನ ಅನುಭವಿಸಿರುವ ನಟ್ ದರ್ಶನ್ ತೀವ್ರ ಬೆನ್ನು ನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಈಗಾಗಲೇ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ವೈದ್ಯರು ಸೂಚನೆ ಕೊಟ್ಟಿದ್ದರು. ವೈದ್ಯರ ಸಲಹೆಯಂತೆ ಬಳ್ಳಾರಿಯಲ್ಲಿ ನಟ ದರ್ಶನ್ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಲು ಒಪ್ಪಿಕೊಂಡಿದ್ದಾರೆ. ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ. ನಟ ದರ್ಶನ್ ಬೆನ್ನು ನೋವಿನಿಂದ ಸರಿಯಾಗಿ ನಿದ್ದೆ ಮಾಡದೆ ಸೊರಗಿ ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ಜೈಲಿನಲ್ಲಿದ್ದಾಗಲೇ ನಟ ದರ್ಶನ್ ಗೆ ಬೆನ್ನು ನೋವಿನ ಸಮಸ್ಯೆ ಕಂಡು ಬಂದಿತ್ತು. ಅದರಂತೆ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿಗೆ ಭೇಟಿ ನೀಡಿ ನಟ ದರ್ಶನ್ ಅವರ ಆರೋಗ್ಯವನ್ನು ತಪಾಸಣೆ ಮಾಡಿದ್ದರು. ಈ ವೇಳೆ ವೈದ್ಯರು ಆಸ್ಪತ್ರೆಗೆ ದಾಖಲಾಗಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದರು. ಹೀಗಾಗಿ ಅನಾರೋಗ್ಯದ ಹಿನ್ನಲೆ ನಟ ದರ್ಶನ್ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ. ಜೈಲಾಧಿಕಾರಿಗಳಿಂದ ದರ್ಶನ್ ಬೆನ್ನು ನೋವಿನ ಬಗ್ಗೆ ವೈದ್ಯರು ನೀಡಿರುವ ವರದಿ ನೀಡುವಂತೆ ಹೈಕೋರ್ಟ್ ಕೇಳಿದ್ದು, ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿಕೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಇನ್ನೂ ನಟ ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ನಾಗೇಶ್, ತೀವ್ರವಾದ ಬೆನ್ನು ನೋಬಿನಿಂದ ಬಳಲುತ್ತಿರುವ ದರ್ಶನ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಬೇಕಿದೆ. ಹೀಗಾಗಿ ಜಾಮೀನು ಅರ್ಜಿ ಮಂಜೂರು ಮಾಡಬೇಕೆಂದು ಮನವಿ ಮಾಡಿದ್ದಾರೆ.
ದರ್ಶನ್ ಅವರಿಗೆ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಅದಷ್ಟು ಬೇಗ ಸರ್ಜಿಕಲ್ ಅಪರೇಶನ್ ಅವಶ್ಯಕತೆ ಇರುವದರಿಂದ ಜಾಮೀನನ್ನು ಶೀಘ್ರವಾಗಿ ನೀಡಬೇಕು ಎಂದು ಕೇಳಿಕೊಂಡಿದ್ದಾರೆ. ಈ ವೇಳೆ ನ್ಯಾಯಾಧೀಶರು, ಕೂಡಲೇ ವೈದ್ಯಕೀಯ ವರದಿಗಳ ಸಲ್ಲಿಕೆ ಮಾಡುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 28 ಕ್ಕೆ ಮುಂದೂಡಿದ್ದಾರೆ.
ಸಿವಿ ನಾಗೇಶ್ ಅವರ ಮಾತು ಆಲಿಸಿ, ಜೈಲಧಿಕಾರಿಗಳಿಂದ ದರ್ಶನ್ರ ಆರೋಗ್ಯ ಸ್ಥಿತಿಯ ವರದಿಯನ್ನು ಕೇಳಿದರು. ಬಳಿಕ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಲಾಯ್ತು.ಅಕ್ಟೋಬರ್ 28ರ ಒಳಗಾಗಿ ಬಳ್ಳಾರಿ ಜೈಲು ಅಧಿಕಾರಿಗಳು ದರ್ಶನ್ರ ಆರೋಗ್ಯ ಸ್ಥಿತಿಯ ಬಗ್ಗೆ ವರದಿಯನ್ನು ಹೈಕೋರ್ಟ್ಗೆ ನೀಡಬೇಕಿದ್ದು, ವರದಿ ಆಧರಿಸಿ ದರ್ಶನ್‌ಗೆ ಜಾಮೀನು ನೀಡಬೇಕೊ ಇಲ್ಲವೋ ಅಥವಾ ಜೈಲಿನಲ್ಲಿಯೇ ಚಿಕಿತ್ಸೆ ಮುಂದುವರೆಸಬೇಕೋ ಎಂಬ ಬಗ್ಗೆ ತಿರ್ಮಾನ ತೆಗೆದುಕೊಳ್ಳಲಾಗುವುದು.












Click it and Unblock the Notifications