Actor Darshan Thoogudeepa: ಜೈಲಿನಿಂದ ಹೊರಬಂದ ನಟ ದರ್ಶನ್‌.!-ಬೆಂಗಳೂರಿಗೆ ತೆರಳುವ ಮಾರ್ಗಗಳ ವಿವರ ಇಲ್ಲಿದೆ

Darshan Thoogudeepa: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್‌ಗೆ ಇಂದು (ಅಕ್ಟೋಬರ್ 30) ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದೀಗ ದರ್ಶನ್ ಜೈಲಿನಿಂದ ಹೊರಗಡೆ ಬಂದಿದ್ದು, ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ. ಹಾಗಾದರೆ ಪ್ರಯಾಣದ ಮಾರ್ಗಗಳ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲಿನಲ್ಲೇ ರೌಡಿ ಶೀಟರ್‌ ಜೊತೆ ಕುಳಿತು ರೌಂಡ್‌ ಟೇಬಲ್‌ ಪಾರ್ಟಿ ಮಾಡಿದ್ದು, ಈ ಪೋಟೋಗಳು ಭಾರೀ ವೈರಲ್‌ ಆಗಿದ್ದವು. ಇದರ ಬೆನ್ನಲ್ಲೇ ವಿಐಪಿ ಸೆಲ್‌ನಿಂದಲೇ ರೌಡಿ ಶೀಟರ್‌ಗಳ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡಿರುವ ವಿಡಿಯೋಗಳು ಸಹ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದ್ದವು. ಇದಕ್ಕೆ ವ್ಯಾಪಕ ಆಕ್ರೋಶಗಳು ಭುಗಿಲೆದ್ದಿದ್ದವು.

Actor Darshan Released from Ballari Jail and travel to Bengaluru Know routes details

ಬಳಿಕ ಎಚ್ಚೆತ್ತ ಸರ್ಕಾರ ಪರಪ್ಪನ ಅಗ್ರಹಾರದ 9 ಜನ ಜೈಲಿ ಸಿಬ್ಬಂದಿಯನ್ನು ಅಮಾನತುಗೊಳಿಸಿತ್ತು. ಅಲ್ಲದೆ, ಬಳಿಕ ಕೋರ್ಟ್‌ ಆದೇಶದ ಮೇರೆಗೆ ಪೊಲೀಸರು ನಟ ದರ್ಶನ್‌ನನ್ನು ಬಳ್ಳಾರೀ ಜೈಲಿಗೆ ಶಿಫ್ಟ್‌ ಮಾಡಿದ್ದರು. ಇನ್ನು ಕಳೆದ 63 ದಿನಗಳಿಂದ ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್‌​ಗೆ ಬೆನ್ನು ನೋವು ಕಾಣಿಸಿಕೊಂಡಿದ್ದು, ಈ ಹಿನ್ನೆಲೆ ಚಿಕಿತ್ಸೆಗಾಗಿ ದರ್ಶನ್​ ಪರ ವಕೀಲರು ಕೋರ್ಟ್‌​ಗೆ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಇನ್ನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವೈದ್ಯರ ವರದಿ ಆಧರಿಸಿ​ 6 ವಾರಗಳ ಮಧ್ಯಂತರ ಜಾಮೀನು ನೀಡಿದೆ.

ಬಳ್ಳಾರಿ ಜೈಲಿನಲ್ಲಿ ಜಾಮೀನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ನಟ ದರ್ಶನ್ ಅವರು ಒಟ್ಟು 131 ದಿನಗಳ ನಂತರ ಜೈಲಿನಿಂದ ಹೊರಗೆ ಬಂದಿದ್ದಾರೆ. ಜೈಲಿನಿಂದ ಹೊರಗೆ ಬರುವಾಗ ಕುಂಟುತ್ತಾ ಬಂದಿದ್ದು, ಇದರಿಂದ ಅವರಿಗೆ ಬೆನ್ನು ನೋವು ತೀವ್ರವಾಗಿ ಕಾಣಿಸಿಕೊಂಡಿ ಎಂದು ತಿಳಿದುಬಂದಿದೆ. ಇನ್ನು ನಟ ದರ್ಶನ್, ಜೈಲಿನ ಹೊರಗೆ ಕಾಯುತ್ತಿದ್ದ ಪತ್ನಿ ವಿಜಯಲಕ್ಷ್ಮೀ ಅವರ ಕಾರಿನಲ್ಲಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದು, ಇನ್ನೂ ಕೆಲವೇ ಕ್ಷಣಗಳಲ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ.

ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎನ್ನುವ ಕಾರಣಕ್ಕೆ ರೇಣುಕಾಸ್ವಾಮಿಯನ್ನು ನಟ ದರ್ಶನ್‌ & ಗ್ಯಾಂಗ್‌ ಭೀಕರವಾಗಿ ಹಲ್ಲೆ ಮಾಡಿ ಕೊಲೆಗೈದಿತ್ತು ಎನ್ನುವುದು ಪೊಲೀಸರ ದಾಖಲೆಗಳಲ್ಲಿ ಉಲ್ಲೇಖವಾಗಿದೆ. ಇನ್ನು ಕೊಲೆ ಪ್ರಕರಣ ಸಂಬಂಧ ಕಳೆದ ಜೂನ್ 11ರಂದು ದರ್ಶನ್‌ನನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಕೋರ್ಟ್‌ ಆದೇಶದ ಮೇರೆಗೆ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+