2 ನೋಟಿಸ್‌ಗಳಿಗೂ ರಿಯಾಕ್ಟ್ ಮಾಡದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ!
Darshan: ಕರ್ನಾಟಕದಲ್ಲಿ ಗಣ್ಯರಿಗೆ ಹಾಗೂ ನಟಿಯರಿಗೆ ಕೆಲವರು ಅವರ ಸೋಷಿಯಲ್ ಮೀಡಿಯಾದಲ್ಲಿ ಕೆಟ್ಟ ಮತ್ತು ಅಸಹ್ಯವಾದ ಕಮೆಂಟ್‌ಗಳನ್ನು ಮಾಡುತ್ತಿದ್ದು ಇದು ಭಾರೀ ಚರ್ಚೆಗೆ ಕಾರಣವಾಗಿದೆ. ನಟಿ ರಮ್ಯಾ ಅವರಿಗೆ ಅಸಭ್ಯವಾಗಿ ಕಮೆಂಟ್ ಮಾಡಿದ ಆರೋಪದ ಮೇಲೆ ಹಲವರನ್ನು ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ. ಆದರೆ ಇದಾದ ಮೇಲೂ ಕೆಲವು ಕಿಡಿಗೇಡಿಗಳು ಅಸಭ್ಯವಾಗಿ ಕಮೆಂಟ್ ಮಾಡುವುದನ್ನು ನಿಲ್ಲಿಸಿಲ್ಲ. ಇದೀಗ ಈ ವಿಚಾರವನ್ನು ಕರ್ನಾಟಕ ಪೊಲೀಸರು ಸಹ ಗಂಭೀರವಾಗಿ ಪರಿಗಣಿಸಿದ್ದಾರೆ. ಇನ್ನು ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಹ ಕೆಲವು ಕೆಡಿಗೇಡಿಗಳು ಅಸಭ್ಯವಾಗಿ ಕಮೆಂಟ್ ಮಾಡಿದ್ದಾರೆ.
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಕೆಟ್ಟದಾಗಿ ಕಮೆಂಟ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆದಿದೆ. ಅಲ್ಲದೇ ಅಶ್ಲೀಲ ಕಮೆಂಟ್ಗಳಿಗೆ ಸಂಬಂಧಿಸಿದಂತೆ ವಿವರಣೆ ಕೊಡುವಂತೆ ಪೊಲೀಸರು ವಿಜಯಲಕ್ಷ್ಮಿ ಅವರಿಗೆ ಈಗಾಗಲೇ ಎರಡು ಬಾರಿ ನೋಟಿಸ್ ಕೊಟ್ಟಿದ್ದಾರೆ. ಆದರೆ ವಿಜಯಲಕ್ಷ್ಮಿ ಅವರು ಈ ಎರಡೂ ನೋಟಿಸ್‌ಗಳಿಗೂ ಪ್ರತಿಕ್ರಿಯೆ ಕೊಟ್ಟಿಲ್ಲ ಎಂದು ಹೇಳಲಾಗಿದೆ. ಇನ್ನು ಈ ಘಟನೆ ಬಗ್ಗೆ ಹೇಳಿಕೆ ದಾಖಲಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಚೆನ್ನಮ್ಮನಕರೆ ಅಚ್ಚುಕಟ್ಟು ಪೊಲೀಸರಿಂದ ನೋಟಿಸ್ ನೀಡಲಾಗಿದೆ. ಆದರೆ ಇದಕ್ಕೆ ವಿಜಯಲಕ್ಷ್ಮಿ ಅವರಿಂದ ಇಲ್ಲಿಯ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಲಾಗಿದೆ.

ವಿಜಯಲಕ್ಷ್ಮಿ ದರ್ಶನ್ ಬಗ್ಗೆ ಕೆಟ್ಟ ಕಮೆಂಟ್‌ಗಳನ್ನು ಮಾಡಲಾಗುತ್ತಿದೆ. ಈ ಸಂಬಂಧ ಕ್ರಮ ವಹಿಸಬೇಕು ಎಂದು ಆಗ್ರಹಿಸಿ, ಮಹಿಳಾ ಆಯೋಗಕ್ಕೆ ದೂರು ಕೊಡಲಾಗಿತ್ತು. ಮಹಿಳಾ ಆಯೋಗ ಸಹ ಈ ವಿಷಯದಲ್ಲಿ ತುರ್ತು ಸುಮೋಟೊ ಪ್ರಕರಣ ದಾಖಲಿಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೆ, ಈ ಸಂಬಂಧ ಎರಡು ನೋಟಿಸ್‌ಗಳಿಗೂ ವಿಜಯಲಕ್ಷ್ಮಿ ಅವರಿಂದ ಯಾವುದೇ ಬರಲಿಲ್ಲ ಎಂದು ಹೇಳಲಾಗಿದ್ದು. ಇದೀಗ ಮೂರನೇ ಬಾರಿ ನೋಟಿಸ್ ಕೊಡುವುದಕ್ಕೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
ದರ್ಶನ್ ಅಭಿಮಾನಿಗಳ ಆಕ್ರೋಶ: ಇನ್ನು ನಟ ದರ್ಶನ್ ಅವರ ಪತ್ನಿಗೆ ಕೆಲವರು ಕೆಟ್ಟದಾಗಿ ಕಮೆಂಟ್ ಮಾಡುತ್ತಿರುವುದಕ್ಕೆ ದರ್ಶನ್ ಅವರ ಅಭಿಮಾನಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಲವರು ದರ್ಶನ್ ಅವರನ್ನು ಗುರಿಯಾಗಿಸಿಕೊಂಡು ವಿಜಯ ಲಕ್ಷ್ಮಿ ಅವರಿಗೆ ಕಮೆಂಟ್ ಮಾಡುತ್ತಿದ್ದಾರೆ. ಈ ರೀತಿ ಕಮೆಂಟ್ ಮಾಡುತ್ತಿರುವವರಿಗೆ ಕಠಿಣ ಕಾನೂನು ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ದರ್ಶನ್ ಅವರ ಅಭಿಮಾನಿಗಳು ಆಗ್ರಹಿಸಿದ್ದಾರೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ ಲಕ್ಷ್ಮಿ ಅವರು ರಿಯಾಕ್ಟ್ ಮಾಡಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.
ಇನ್ನು ಒಂದೊಮ್ಮೆ ಮೂರನೇ ನೋಟಿಸ್‌ಗೆ ಸಹ ವಿಜಯ ಲಕ್ಷ್ಮಿ ಅವರು ಯಾವುದೇ ಪ್ರತಿಕ್ರಿಯೆಯನ್ನು ಕೊಡದಿದ್ದರೆ ಕೇಸ್ ಕ್ಲೋಸ್ ಆಗುವ ಸಾಧ್ಯತೆ ಇದೆ, ಮುಂದುವರಿದು ಪೊಲೀಸರು ನ್ಯಾಯಾಲಯಕ್ಕೆ ಸಿ ರಿಪೋರ್ಟ್ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.












Click it and Unblock the Notifications