Darshan thoogudeepa: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ, ನಟ ದರ್ಶನ್‌ಗೆ ಢವಢವ!

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ್ದ ನಟ ದರ್ಶನ್‌ ತೂಗುದೀಪ ಅವರು ಚಿಕಿತ್ಸೆ ಕಾರಣಕ್ಕಾಗಿ ಜಾಮೀನು ಪಡೆದು ಹೊರಬಂದಿದ್ದಾರೆ. ಮತ್ತೊಂದೆಡೆ ಇದೇ ಕೇಸ್‌ನಲ್ಲಿ ಪೊಲೀಸರು ಹೆಚ್ಚುವರಿ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ಎಫ್‌ಎಸ್‌ಎಲ್‌ ವರದಿ ಸಲ್ಲಿಸಿ, ಜಾಮೀನು ರದ್ದು ಮಾಡುವಂತೆ ಕೋರುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್‌ ಅವರೂ ಹೇಳಿದ್ದಾರೆ. ಇದರ ಬೆನ್ನಲ್ಲೇ ಕೇಸ್‌ ಮತ್ತೊಂದು ತಿರುವು ಪಡೆದುಕೊಂಡಿದೆ.

ಒಂದೆಡೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಷ್ಟು ಸಾಕ್ಷಿಗಳನ್ನು ಸಂಗ್ರಹಿಸುತ್ತಿರುವ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಇತ್ತೀಚೆಗೆ ಚಾರ್ಜ್​ಶೀಟ್ ಸಲ್ಲಿಸಿದ ಬಳಿಕವೂ ಪೊಲೀಸರು ಮತ್ತಷ್ಟು ಮಾಹಿತಿ ಸಂಗ್ರಹಕ್ಕೆ ಫೀಲ್ಡಿಗಿಳಿದಿದ್ದಾರೆ. ಈ ಹಿಂದೆ ಈ ಕೇಸ್‌ ಸಂಬಂಧ ಭಾರಿ ಹಣ ವರ್ಗಾವಣೆಯಾಗಿದೆ ಎಂದೂ ಹೇಳಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ವರದಿಯಾಗಿದೆ.

Actor Darshan Thoogudeepa Is In Great Danger In The Renukaswamy Murder Case

ಕೊಲೆ ಕೇಸ್‌ ಸಂಬಂಧ ಇದರ ಆರೋಪಿಗಳ ಹಣಕಾಸಿನ ಮೂಲದ ಬಗ್ಗೆಯೂ ಪೊಲೀಸರು ಮಾಹಿತಿ ಸಂಗ್ರಹಕ್ಕೆ ಮುಂದಾಗಿದ್ದಾರೆ. ಇದರಿಂದಲೂ ಈ ಕೇಸ್‌ ತನಿಖೆಗೆ ಮತ್ತಷ್ಟು ಸಾಕ್ಷಿಗಳು ಲಭ್ಯವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದು ಜಾಮೀನು ಪಡೆದು ಬಂದಿರುವ ನಟ ದರ್ಶನ್ ಅವರಿಗೂ ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ರೇಣುಕಾಸ್ವಾಮಿ ಕೊಲೆ ನಡೆದ ಸಂದರ್ಭದಲ್ಲಿ ಆರೋಪಿಗಳು ಹಣದ ವ್ಯವಹಾರ ನಡೆಸಿರುವ ಮಾಹಿತಿ ಇದ್ದು, ಕೊಲೆಗೆ ಸಂಬಂಧಿಸಿ ಇದು ಮಹತ್ವದ ಸಾಕ್ಷಿಯಾಗಬಹುದು ಎಂದು ಹೇಳಲಾಗುತ್ತಿದೆ. ಆರೋಪಿಗಳ ನಡುವೆ ಭಾರಿ ಪ್ರಮಾಣದ ಹಣ ಟ್ರಾನ್ಸ್‌ಫರ್‌ ಆಗಿದೆ ಎನ್ನಲಾಗಿದ್ದು, ಪೊಲೀಸರು ಇದರ ಬೆನ್ನತ್ತಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌ ಆರೋಪಿಗಳು ಬೆಂಗಳೂರಿನ ವಿವಿಧ ಬ್ಯಾಂಕ್​ನಲ್ಲಿ ಖಾತೆಗಳನ್ನು ಹೊಂದಿದ್ದಾರೆ. ಕೊಲೆ ನಡೆದ ಸಮಯದಲ್ಲಿ ಇವರ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವ ಸಾಧ್ಯತೆಯೂ ಇದ್ದು, ಇದರ ಮಾಹಿತಿ ಸಂಗ್ರಹಿಸಲು ಪೊಲೀಸರು ಮುಂದಾಗಿದ್ದಾರಂತೆ.

Actor Darshan Thoogudeepa Is In Great Danger In The Renukaswamy Murder Case

ಈಗಾಗಲೇ ಪೊಲೀಸರು ಹಲವು ಆರೋಪಿಗಳ ಬ್ಯಾಂಕ್‌ ಮಾಹಿತಿ ಕಲೆ ಹಾಕಿದ್ದು, ನಟ ದರ್ಶನ್‌ ಅವರು ಈ ಕೊಲೆ ಕೇಸ್‌ ಮುಚ್ಚಿ ಹಾಕಲು ಭಾರಿ ಪ್ರಮಾಣದ ಹಣದ ಆಮಿಷವೊಡ್ಡಿದ್ದಾರೆ ಎನ್ನುವ ಆರೋಪವಿದೆ. ಅಲ್ಲದೆ ಈ ಸಂಬಂಧ ಹಣದ ವ್ಯವಹಾರ ನಡೆದಿರುವ ಮಾಹಿತಿಯೂ ಇದ್ದು, ಆನ್‌ಲೈನ್‌ ಮೂಲಕ ಹಣ ವರ್ಗಾವಣೆಯಾಗಿದೆ ಎಂದು ಹೇಳಲಾಗುತ್ತಿದೆ.

ಹಾಗಾಗಿ ಹಲವು ಆರೋಪಿಗಳ ಬ್ಯಾಂಕ್‌ ಖಾತೆಗಳ ಮಾಹಿತಿ ಸಂಗ್ರಹಿಸಿ, ಹಣ ವರ್ಗಾವಣೆ ಆಗಿದೆಯೇ, ಇಲ್ಲವೇ? ಅಥವಾ ಆಗಿದ್ದರೆ ಅದರ ಮೂಲ ಏನು? ಎಂಬುದರ ಬಗ್ಗೆಯೂ ಪೊಲೀಸರು ಮಹತ್ವದ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎನ್ನಲಾಗಿದೆ. ಹಾಗಾಗಿ ಆರೋಪಿಗಳು ಖಾತೆ ಹೊಂದಿರುವ ಬ್ಯಾಂಕ್‌ಗಳಿಗೆ ಭೇಟಿ ನೀಡಿ, ಹಣ ವರ್ಗಾವಣೆಯ ಮಾಹಿತಿ ನೀಡುವಂತೆ ಪೊಲೀಸರು ಕೋರಿದ್ದಾರೆ.

ಒಂದು ವೇಳೆ ಭಾರಿ ಮೊತ್ತದ ಹಣ ವರ್ಗಾವಣೆಯಾಗಿದ್ದರೆ ದರ್ಶನ್‌ಗೆ ಮತ್ತೊಂದು ಸಂಕಷ್ಟ ಎದುರಾಗುವುದು ಪಕ್ಕಾ ಎನ್ನಲಾಗಿದೆ. ಮತ್ತೊಂದೆಡೆ ಆಪರೇಷನ್‌ಗಾಗಿ ಜಾಮೀನು ನೀಡಿದ್ದು, ಇನ್ನು ಆ ಪ್ರಕ್ರಿಯೆ ನಡೆದಿಲ್ಲ ಎಂಬ ಆರೋಪವೂ ಕೇಳಿಬಂದಿದ್ದು, ದರ್ಶನ್‌ ಅವರ ಜಾಮೀನಿಗೂ ಕಂಟಕ ಎದುರಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+