Vijayalakshmi Darshan: ಮಾಲ್ಡೀವ್ಸ್ ನಲ್ಲಿ ದರ್ಶನ್ ಪತ್ನಿ.. ಆ ಮೂವರ ಬಗ್ಗೆ ಬರೆದುಕೊಂಡ ವಿಜಯಲಕ್ಷ್ಮೀ..!
ರೇಣುಕಾಸ್ವಾಮಿ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ ನಟ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಅವರಿಗೆ ಮತ್ತೆ ಡವ ಡವ ಶುರುವಾಗಿದೆ. ದರ್ಶನ್ ಜಾಮೀನು ರದ್ದಾಗುತ್ತಾ? ಮತ್ತೆ ದಾಸ ಹಾಗೂ ಪವಿತ್ರಾ ಗೌಡ ಜೈಲು ಸೇರ್ತಾರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದ್ದು, ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ನಟ ದರ್ಶನ್ ಬೇಲ್ ಭವಿಷ್ಯ ಇನ್ನೂ ಸುಪ್ರಿಂ ಕೋರ್ಟ್ ಕಟಕಟೆಯಲ್ಲಿದೆ. ಇತ್ತ ವಿಜಯಲಕ್ಷ್ಮಿ ಜೊತೆಗೆ ನಟ ದರ್ಶನ್ ಅವರು ಟೆಂಪಲ್ ರನ್ ನಡೆಸಿದ್ದಾರೆ. ಇದರ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಹೊಸ ಪೋಸ್ಟ್ ಶೇರ್ ಮಾಡಿಕೊಂಡಿದ್ದಾರೆ.
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ಆಕ್ಟೀವ್ ಆಗಿದ್ದಾರೆ. ಆಗಾಗ ದರ್ಶನ್ ಹಾಗೂ ಮಗ ವಿನೀಶ್ ಜೊತೆಗೆ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಇದೀಗ ವಿಜಯಲಕ್ಷ್ಮಿ ದರ್ಶನ್ ತಮ್ಮ ಮಾಲ್ಡೀವ್ಸ್ ಪ್ರವಾಸದ ಫೋಟೋಗಳನ್ನು ಪೋಸ್ಟ್ ಮಾಡಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರು ಮಾಲ್ಡೀವ್ಸ್ ಪ್ರವಾಸದಲ್ಲಿ ಏಕಾಂಗಿಯಾಗಿ ಕಾಣಿಸಿಕೊಂಡಿದ್ದಾರೆ. ವಿಜಯಲಕ್ಷ್ಮಿ ಅವರು ಸಮುದ್ರ ತೀರದಲ್ಲಿ ನಿಂತು ಶಾಂತವಾಗಿ ಫೋಟೋವನ್ನ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಫೋಟೋಗೆ ನಾನು, ಸೂರ್ಯ ಮತ್ತು ಸಮುದ್ರ ಎಂದು ಇಂಗ್ಲಿಷ್ನಲ್ಲಿ ಬರೆದುಕೊಂಡಿದ್ದಾರೆ.

ಅಷ್ಟೇ ಅಲ್ಲದೇ ವಿಜಯಲಕ್ಷ್ಮಿ ಅವರ ಮುದ್ದಿನ ನಾಯಿ ಮರಿ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಂಡು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಇನ್ನೂ ಮಾಲ್ಡೀವ್ಸ್ ಪ್ರವಾಸದ ಫೋಟೋ ಶೇರ್ ಮಾಡಿಕೊಂಡ ವಿಜಯಲಕ್ಷ್ಮಿ ತಿಳಿ ನೀಲಿ ಬಣ್ಣದ ಶರ್ಟ್ ಹಾಗೂ ಬ್ಲ್ಯಾಕ್ ಲೂಸ್ ಪ್ಯಾಂಟ್ ಹಾಕಿಕೊಂಡಿದ್ದಾರೆ. ಈ ಮಧ್ಯೆ ಪತ್ನಿ ವಿಜಯಲಕ್ಷ್ಮಿ ಜೊತೆಗೆ ಕೆಲ ದಿನಗಳ ಹಿಂದೆಯಷ್ಟೇ ನಟ ದರ್ಶನ್ ಅವರು ಕಾಮಾಕ್ಯ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅವರು ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದ ಬಳಿಕ ವಿಜಯಲಕ್ಷ್ಮಿ ಅವರು ಟೆಂಪಲ್ ರನ್ ಶುರು ಮಾಡಿದ್ದರು. ತನ್ನ ಗಂಡನ ಸಂಕಷ್ಟದಿಂದ ಪಾರು ಮಾಡುವಂತೆ ಹಲವು ದೇವಾಲಯಗಳಿಗೆ ಮೊರೆ ಹೋಗಿ, ವಿಶೇಷ ಪೂಜೆಗಳನ್ನು ಸಹ ಮಾಡಿಸಿದ್ದರು.












Click it and Unblock the Notifications