Actor Darshan Bail: ಡಿಸೆಂಬರ್ 13ರಂದು ಜಾಮೀನು ಭವಿಷ್ಯ ನಿರ್ಧಾರ; ದರ್ಶನ್‌ಗೆ ಬೇಲಾ ಅಥವಾ ಜೈಲಾ?

Actor Darshan: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಸೇರಿ 7 ಆರೋಪಿಗಳ ಜಾಮೀನು ಭವಿಷ್ಯ ಡಿಸೆಂಬರ್ 13ರಂದು ನಿರ್ಧಾರವಾಗಲಿದೆ. ಹಾಗಾದರೆ ನಾಳೆ ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಸೇರಿದಂತೆ ಯಾರೆಲ್ಲ ಜಾಮೀನು ಆದೇಶ ಹೊರಬೀಳಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಗೌಡ, ನಾಗರಾಜ್, ಲಕ್ಷ್ಮಣ್, ಅನುಕುಮಾರ್, ಜಗದೀಶ್, ಪ್ರದೋಷ್ ಜಾಮೀನು ಆದೇಶ ನಾಳೆ (ಡಿಸೆಂಬರ್ 13) ಹೊರಬೀಳಲಿದೆ. ಇನ್ನು ಬೆನ್ನುನೋವಿನ ಹಿನ್ನೆಲೆ ಮಧ್ಯಂತರ ಜಾಮೀನಿನ ಮೇಲೆ ದರ್ಶನ್ ಹೊರಗಡೆ ಇದ್ದಾದ್ದಾದ್ದು, ಸರ್ಜರಿಗೆಂದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

Actor Darshan s Bail Order to Be Decision by High Court on December 13

ಆದರೆ ಇದುವರೆಗೂ ಯಾವುದೇ ಆಪರೇಷನ್‌ ಆಗಿಲ್ಲ ಎಂದು ಹೇಳಲಾಗುತ್ತಿದೆ. ಇದೇ ವೇಳೆ, ಜಾಮೀನು ಅವಧಿ ವಿಸ್ತರಿಸುವಂತೆ ಆರೋಪಿ ದರ್ಶನ್ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಇನ್ನು ಬೆಂಗಳೂರಿನ ಕೇಂದ್ರಗೃಹ ಪರಪ್ಪನ ಅಗ್ರಹಾರ ಜೈಲಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗುತ್ತಿದ್ದಂತೆ ದರ್ಶನ್‌​ಗೆ ಬೆನ್ನು ನೋವು ಹೆಚ್ಚಾಗಿತ್ತು. ಜೈಲಿನಲ್ಲೇ ಚಿಕಿತ್ಸೆ ಪಡೆದರೂ ಕೂಡ ನೋವು ಕಡಿಮೆ ಆಗಿರಲಿಲ್ಲ.

ಬಳಿಕ ಹೆಚ್ಚಿನ ಚಿಕಿತ್ಸೆ ಜೊತೆಗೆ ಸರ್ಜರಿ​ ಅಗತ್ಯ ಇದೆ ಎಂದು ವೈದ್ಯರು ವರದಿ ನೀಡಿದ್ದರು. ಈ ಹಿನ್ನೆಲೆ ಹೈಕೋರ್ಟ್ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಈಗಾಗಲೇ ಮಧ್ಯಂತರ ಜಾಮೀನು ಅವಧಿ ಡಿಸೆಂಬರ್ 11ಕ್ಕೆ ಮುಕ್ತಾಯವಾಗುತ್ತಿತ್ತು. ಆದರೆ ನಟ ದರ್ಶನ್‌ಗೆ ಅಂದೇ ಸರ್ಜರಿ ಇದೆ ಎಂದು ದರ್ಶನ್‌ ಪರ ವಕೀಲ ಸಿವಿ ನಾಗೇಶ್‌ ವಾದ ಮಂಡನೆ ಮಾಡಿದ್ದರು. ಬಳಿಕ ಕೋಟರ್‌ ಜಾಮೀನು ಆದೇಶವನ್ನು ಕಾಯ್ದಿರಿಸಿತ್ತು.

ಆದರೆ ಇನ್ನೂ ಕೂಡ ಸರ್ಜರಿ ಮಾಡಿಲ್ಲ. ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ತೀರ್ಪು ಸಹ ಹೈಕೋರ್ಟ್‌ನಲ್ಲು ನಾಳೆ ಹೊರಬರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇದೀಗ ನಟ ದರ್ಶನ್‌ಗೆ ಜಾಮೀನು ಸಿಗುತ್ತಾ ಅಥವಾ ಮಧ್ಯಂತರ ಜಾಮೀನು ಅವಧಿ ಮುಂದುವರಿಕೆಯಾಗುತ್ತಾ ಎಂದು ಕಾದುನೋಡಬೇಕಿದೆ.

ಡಿಸೆಂಬರ್​ 11ರಂದು ನಟ ದರ್ಶನ್‌ಗೆ ಸರ್ಜರಿ ಮಾಡಲಾಗುತ್ತದೆ ಎಂದು ವಕೀಲರು ಕೋರ್ಟ್‌ಗೆ ತಿಳಿಸಿದ್ದರು. ಆದ್ರೆ ನಿನ್ನೆ ದರ್ಶನ್‌​ಗೆ ಆಪರೇಷನ್ ಮಾಡಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಸರ್ಜರಿ ಮಾಡಿಸಿಕೊಳ್ಳದಿದ್ದರೆ, ದರ್ಶನ್‌​ಗೆ ಸ್ಟ್ರೋಕ್ ಆಗುವ ಸಾಧ್ಯತೆಯಿದೆ ಅಂತಲೂ ವಕೀಲರು ಹೇಳಿದ್ದರು. ಆದ್ರೆ ದರ್ಶನ್ ಆಸ್ಪತ್ರೆ ಸೇರಿ ಈಗಾಗಲೇ ತಿಂಗಳೇ ಕಳೆದು ಹೋಯಿತು, ಸರ್ಜರಿ ಮಾಡಿಲ್ಲ ಯಾಕೆ ಎನ್ನುವುದೇ ಇದೀಗ ಕುತೂಹಲಕ್ಕೆ ಕಾರಣವಾಗಿದೆ.

ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎನ್ನುವ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ನಟ ದರ್ಶನ್‌ & ಗ್ಯಾಂಗ್‌ ಭೀಕರವಾಗಿ ಹಲ್ಲೆಗೈದು ಹತ್ಯೆ ಮಾಡಿದೆ ಎಂದು ಪೊಲೀಸ್‌ ಮೂಲಗಳಲ್ಲಿ ಉಲ್ಲೇಖವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+