Actor Darshan Bail: ಸೋಮವಾರ ನಟ ದರ್ಶನ್‌ ಜಾಮೀನು ಭವಿಷ್ಯ-ಆದೇಶ ಕಾಯ್ದಿರಿಸಿದ ಕೋರ್ಟ್‌.!

Actor Darshan: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ & ಗ್ಯಾಂಗ್‌ ಜೈಲು ಸೇರಿದೆ. ಇನ್ನು ಇಂದು (ಅಕ್ಟೋಬರ್ 10) ಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ವಿಚಾರಣೆ ನಡೆದಿದ್ದು, ತೀರ್ಪನ್ನು ಸೋಮವಾರ (ಅಕ್ಟೋಬರ್ 14)ಕ್ಕೆ ಕಾಯ್ದಿರಿಸಿ ಜಡ್ಜ್‌ ಜೈಶಂಕರ್ ಆದೇಶ ಹೊರಡಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ನನ್ನು ಹೊರತರಲಯ ಪತ್ನಿ ವಿಜಯಲಕ್ಷ್ಮಿ ಹಾಗೂ ಕುಟುಂಬಸ್ಥರು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇನ್ನು ಇಂದು ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ದರ್ಶನ್‌ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದ್ದು, ಇದಕ್ಕೆ ಠಕ್ಕರ್‌ ಕೊಡುವ ರೀತಿಯಲ್ಲಿ ಸರ್ಕಾರಿ ಪರ ವಕೀಲ ಎಸ್‌ಪಿಪಿ ಪ್ರಸನ್ನ ಕುಮಾರ್‌ ವಾದ ಮಂಡಿಸಿದರು.

Actor Darshan s Bail Verdict on October 14

ಇನ್ನು ವಾದ-ಪ್ರತಿವಾದ ಆಲಿಸಿದ ಜಡ್ಜ್ ಜೈಶಂಕರ್ ನಟ ದರ್ಶನ್‌ ಜಾಮೀನು ತೀರ್ಪನ್ನು ಸೋಮವಾರ ಅಂದರೆ ಅಕ್ಟೋಬರ್ 14ಕ್ಕೆ ಆದೇಶ ಕಾಯ್ದಿರಿಸಿದೆ . ಈಗಾಗಲೇ ನಟ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಯಾಗುತ್ತಲೇ ಬಂದಿತ್ತು. ಇದೀಗ ಇಂದು ಕೊನೆಗೂ ಕೋರ್ಟ್‌ ತೀರ್ಪನ್ನು ಕಾಯ್ದಿರಿಸಿದ್ದು, ಸೋಮವಾರ ದರ್ಶನ್‌ಗೆ ಜಾಮೀನು ಸಿಗಲಿದೆಯಾ ಅಥವಾ ಜೈಲಿನಲ್ಲೇ ಫಿಕ್ಸ್‌ ಆಗಲಿದ್ದಾರೆ ಎಂದು ಕಾದುನೋಡಬೇಕಿದೆ.

ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ನಟ ದರ್ಶನ್‌ & ಗ್ಯಾಂಗ್‌ ರೇಣುಕಾಸ್ವಾಮಿಯನ್ನು ಭೀಕರವಾಗಿ ಹಲ್ಲೆ ಮಾಡಿ ಹತ್ಯೆಗೈದಿದ್ದರು ಎಂದು ಪೊಲೀಸ್‌ ದಾಖಲೆಗಳಲ್ಲಿ ಉಲ್ಲೇಖವಾಗಿದೆ.

ವಾದ-ಪ್ರತಿವಾದ ಹೀಗಿತ್ತು: ನಟ ದರ್ಶನ್ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿ ಜಾಮೀನು ನೀಡಬೆಕೆಂದು ಕೇಳಿಕೊಂಡರು. ಆದರೆ, ಎಸ್‌ಪಿಪಿ ಪ್ರಸನ್ನ ಕುಮಾರ್ ಅವರೂ ಕೂಡ ಸಮರ್ಥವಾಗಿ ಪ್ರತಿವಾದ ಮಂಡಿಸಿ, ದರ್ಶನ್ ಜಾಮೀನಿಗೆ ಹೇಗೆ ಅನರ್ಹ ಎಂದು ಪ್ರಶ್ನೆ ಮಾಡಿದರು. ನಾಗೇಶ್ ಅವರು ದರ್ಶನ್ ಅವರ ಸಾಮಾಜಿಕ ಚಟುವಟಿಕೆಗಳನ್ನು ಪ್ರಸ್ತಾಪಿಸಿದರೆ, ಪ್ರಸನ್ನ ಕುಮಾರ್‌ ಅವರು, ದರ್ಶನ್ ಅವರ ಕ್ರೌರ್ಯದ ಮುಖವನ್ನು ಎಳೆಎಳೆಯಾಗಿ ಬಿಚ್ಚಿಟ್ಟರು.

ದರ್ಶನ್ ಪರ ವಕೀಲರ ವಾದ ಏನು?: ದರ್ಶನ್ ಸಿಮ್ ಹೇಮಂತ್ ಹೆಸರಿನಲ್ಲಿತ್ತು. ಹಾಗಾದರೆ ದರ್ಶನ್ ಫೋಟೋ ಹೇಗೆ ಬಂತು? ದರ್ಶನ್ ಪೋಟೋ ತೆಗೆದುಕೊಂಡು ಎಡಿಟ್ ಮಾಡಿ ತೋರಿಸಲಾಗಿದೆ. ರೇಣುಕಾಸ್ವಾಮಿ ದೇಹದ ಮೇಲೆ 1 ಸೆಂಟಿ ಮೀಟರ್ ಗಾಯ ಇತ್ತು. ದೇಹದ ಮೇಲೆ 39 ಗಾಯಗಳಿದ್ದವು ಎಂದು ವೈದ್ಯರು ಹೇಳಿದ್ದಾರೆ. ತಲೆಗೆ ಬಲವಾಗಿ ಹೊಡೆದರೆ ರಕ್ತ ಧಾರಕಾರವಾಗಿ ಸುರಿಯಲ್ಲ, ಚಿಮ್ಮುತ್ತದೆ ಎಂದು ಸಿವಿ ನಾಗೇಶ್ ವಾದ ಮಂಡಿಸಿದ್ದಾರೆ.

ಶೆಡ್ ಕೆಲಸಗಾರ ಕಿಶೋರ್ ಹೇಳಿಕೆ ದಾಖಲಿಸಲು ತಡ ಮಾಡಿದ್ಯಾಕೆ? ಸ್ಟೋನಿಬ್ರೂಕ್ ಪಬ್ ಸ್ಥಳವನ್ನು ಅಪರಾಧ ಜಾಗವಾಗಿ ತೋರಿಸಿದ್ದಾರೆ. ಇದೇನಾ ಸ್ಕಾಟ್‌ಲ್ಯಾಂಡ್ ಯಾರ್ಡ್ ಪೊಲೀಸ್ ಮಾದರಿಯ ತನಿಖೆ ಎಂದು ದರ್ಶನ್ ಪರ ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದರು.

ಎಸ್‌ಪಿಪಿ ಪ್ರಸನ್ನಕುಮಾರ್ ವಾದ: ತನಿಖಾಧಿಕಾರಿ ಯಾವುದೇ ಸಾಕ್ಷಿಗಳನ್ನ ಸೃಷ್ಟಿ ಮಾಡಿಲ್ಲ. ಕೇವಲ ಐಪಿ ಅಡ್ರೆಸ್‌ನಿಂದ ಈ ವರದಿ ಸಿದ್ಧಪಡಿಸಿಲ್ಲ. ಜಿಪಿಎಸ್ ಲ್ಯಾಂಗಿಟ್ಯೂಡ್ ಲಾಟಿಟ್ಯೂಡ್ ಆಧರಿಸಿ ವರದಿ ಸಿದ್ಧವಾಗಿದೆ. ದರ್ಶನ್ ಸಿಮ್ ಹೇಮಂತ್‌ಗೆ ಸೇರಿದ್ದು ಅಂತಾ ಸಿ.ವಿ.ನಾಗೇಶ್ ಹೇಳುತ್ತಾರೆ. 'ಮಿಸ್ ಯೂ ಹೆಂಡ್ತಿ, ಯೂ ಆರ್ ಮೋಸ್ಟ್ ಇಂಪಾರ್ಟೆಂಟ್ ಇನ್ ಮೈ ಲೈಫ್ ಸುಬ್ಬಿ' ಎನ್ನುವಂತಹ ಮೆಸೇಜ್‌ಗಳನ್ನು ಹೇಮಂತ್ ಮಾಡಿದ್ದಾ? ದರ್ಶನ್ ಮಾಡಿದ್ದಾ? ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದಕ್ಕೆ ರೇಣುಕಾಸ್ವಾಮಿ ಕೊಲೆಯಾಗಿದೆ. ಸಂಚು ರೂಪಿಸಿ ಕೊಲೆ ಮಾಡಿದ ಹಿನ್ನೆಲೆ ದರ್ಶನ್ ಬಂಧನವಾಗಿದೆ ಎಂದು ವಾದ ಮಂಡನೆ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+