ನಟ ದರ್ಶನ್‌ ಅಭಿನಯದ ಡೆವಿಲ್ ಸಿನಿಮಾ ಚಿತ್ರಿಕರಣ ಆರಂಭ: ಎಲ್ಲೆಲ್ಲಿ ಶೂಟ್‌? ಇಲ್ಲಿದೆ ಅಪ್ಡೇಟ್

Actor Darshan Film Shooting: ನಟ ದರ್ಶನ್‌ ಅವರು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಕಾರಣ ಡೆವಿಲ್‌ ಸಿನಿಮಾ ಚಿತ್ರಿಕರಣ ನಿಂತುಹೋಗಿತ್ತು. ಇದೀಗ ದರ್ಶನ್‌ ಜಾಮೀನಿನ ಮೇಲೆ ಹೊರಗಡೆ ಬಂದಿದ್ದು, ಚಿತ್ರದ ಶೂಟಿಂಗ್ ಯಾವಾಗ ಎನ್ನುವ ಬಿಗ್ ಅಪ್ಡೇಟ್‌ವೊಂದು ಲಭ್ಯವಾಗಿದೆ. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ನಟ ದರ್ಶನ್‌ ಜೈಲಿನಿಂದ ಬಿಡುಗಡೆಯಾದರೂ ಸಹ ಅವರ ಬೆನ್ನು ನೋವು ಮಾತ್ರ ಇನ್ನು ಕಾಡುತ್ತಿದೆ. ಈ ಹಿನ್ನೆಲೆ ಚಿತ್ರಿಕರಣ ಆರಂಭ ಆಗುತ್ತದೆಯೋ ಅಥವಾ ನಿಂತುಹೋಗುತ್ತದೆಯೋ ಎನ್ನುವ ಆತಂಕದಲ್ಲಿ ಅಭಿಮಾನಿಗಳಲ್ಲಿ ಇತ್ತು. ಆದರೆ ಇದೀಗ ಶೂಟಿಂಗ್‌ ಆರಂಭವಾಗಲಿದೆ ಎನ್ನುವ ಮಾತಿ ಲಭ್ಯವಾಗಿದ್ದು, ಇದರಿಂದ ಅಭಿಮಾನಿಗಳ ಮುಖದಲ್ಲಿ ಮಂದಹಾಸ ಮೂಡಿದಂತಾಗಿದೆ.

Actor Darshan s Devil Movie Shoot start Places names

ನಿಂತುಹೋಗಿದ್ದ ಡೆವಿಲ್ ಸಿನಿಮಾದ ಚಿತ್ರೀಕರಣ ಇದೀಗ ಮತ್ತೆ ಆರಂಭ ಆಗಿದೆ. ದರ್ಆನ್ ಆರೋಗ್ಯದ ಸಮಸ್ಯೆಯಿಂದಾಗಿ ಆಕ್ಷನ್ ದೃಶ್ಯಗಳನ್ನು ಶೂಟ್ ಮಾಡದೆ, ಮಾತಿನ ದೃಶ್ಯಗಳ ಚಿತ್ರೀಕರಣ ನಡೆಯಲಿದೆ. ಬೆಂಗಳೂರು, ಮೈಸೂರು, ಹೈದರಾಬಾದ್ ಮತ್ತು ರಾಜಸ್ಥಾನದಲ್ಲಿ ಶೂಟಿಂಗ್‌ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದರಿಂದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ನಟ ದರ್ಶನ್‌ ಅವರು ಜೈಲು ಸೇರದಿದ್ದರೆ, ಡೆವಿಲ್ ಸಿನಿಮಾವು 2024ರಲ್ಲೇ ತೆರೆ ಮೇಲೆ ಬರುತ್ತಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಸೇರಿದ ಹಿನ್ನೆಲೆ ಒಂದು ಹಂತದ ಶೂಟಿಂಗ್ ಪೂರ್ಣಗೊಳಿಸಿ ತಂಡ ಸುಮ್ಮನಾಗಿಬಿಟ್ಟಿತ್ತು. ಆದ್ದರಿಂದ ಸಿನಿಮಾ ಶೂಟಿಂಗ್ ಸಂಪೂರ್ಣವಾಗಿ ನಿಂತುಹೋಗಿಬಿಟ್ಟಿತ್ತು. ಇದೀಗ ಪ್ರಕಾಶ್ ವೀರ್ ನಿರ್ದೇಶನದ ಈ ಸಿನಿಮಾದ ಶೂಟಿಂಗ್​ ಮತ್ತೆ ಆರಂಭ ಆಗಿದೆ ಎಂದು ತಿಳಿದುಬಂದಿದೆ.

ಶ್ರೀ ಜೈ ಮಾತಾ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಡೆವಿಲ್ ಸಿನಿಮಾ ನಡೆಯುತ್ತಿದೆ. ಈ ಚಿತ್ರಕ್ಕೆ ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಎರಡನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಆರಂಭ ಆಗಿದೆ.

ನಟ ದರ್ಶನ್ ಅವರಿಗೆ ಬೆನ್ನು ನೋವು ಕಾಡುತ್ತಿದೆ. ಈ ನಡುವೆಯೇ ದರ್ಶನ್ ಅವರು ಎರಡನೇ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಮುಂದಿನ ವಾರದಿಂದಲೇ ಚಿತ್ರೀಕರಣದಲ್ಲಿ ಅವರು ಪಾಲ್ಗೊಳಲಿದ್ದಾರೆ. ಅವರ ಆರೋಗ್ಯವನ್ನ ಪರಿಗಣಿಸಿ ಯಾವುದೇ ಆ್ಯಕ್ಷನ್ ದೃಶ್ಯಗಳನ್ನು ಇಲ್ಲಿ ಶೂಟ್ ಮಾಡುತ್ತಿಲ್ಲ. ಕೇವಲ ಮಾತಿನ ಭಾಗದ ಚಿತ್ರೀಕರಣ ಮಾತ್ರ ನಡೆಯಲಿದೆ.

ದರ್ಶನ್‌ಗೆ ಅವರಿಗೆ ಫಿಸಿಯೋ ಥೆರೆಪಿ ಮಾಡಿಸಲಾಗುತ್ತಿದೆ. ಆದ್ದರಿಂದ ಇದೀಗ ಆ್ಯಕ್ಷನ್ ದೃಶ್ಯ ಮಾಡಬಾರದು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಸಾಹಸ ಸನ್ನಿವೇಶಗಳ ಚಿತ್ರೀಕರಣವಾಗಲಿ ಅಥವಾ ಬೇರೆ ಯಾವುದೇ ರಿಸ್ಕ್ ಇರುವ ಸನ್ನಿವೇಶಗಳ ಚಿತ್ರೀಕರಣ ಸದ್ಯ ಮಾಡುವುದಿಲ್ಲ ಎಂದು ನಿರ್ದೇಶಕ ಪ್ರಕಾಶ್ ವೀರ್ ತಿಳಿಸಿದ್ದಾರೆ.

ಇನ್ನು ಎರಡನೇ ಹಂತದ ಶೂಟ್​ ಬೆಂಗಳೂರು, ಮೈಸೂರು, ಹೈದರಾಬಾದ್ ಹಾಗೂ ರಾಜಸ್ಥಾನದಲ್ಲಿ ನಡೆಯಲಿದೆ. ದರ್ಶನ್ ಸಹ ಈ ಸ್ಥಗಳಿಹೆ ತೆರಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎನ್ನುವ ಕಾರಣಕ್ಕೆ ದರ್ಶನ್‌ ಮತ್ತು ಗ್ಯಾಂಗ್ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಅವರನ್ನು ಬೆಂಗಳೂರಿನ ಪಟ್ಟಣಗೆರೆ ಶೆಡ್‌ಗೆ ಕರೆದೊಯ್ದು ಭೀಕರವಾಗಿ ಹಲ್ಲೆ ಮಾಡಿ ಹತ್ಯೆಗೈದಿದ್ದಾರೆ ಎನ್ನುವುದು ಪೊಲೀಸ್‌ ದಾಖಲೆಗಳಲ್ಲಿ ಉಲ್ಲೇಖವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+