Actor Darshan: ನಟ ದರ್ಶನ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಹೈಕೋರ್ಟ್‌

Actor Darshan: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಮಧ್ಯಂತ ಜಾಮೀನನ್ನು ವಿಸ್ತರಣೆಯಾಗಿದೆ. ಇಂದು (ಡಿಸೆಂಬರ್ 9) ಹೈಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ವಾದ-ಪ್ರತಿ ವಾದಗಳನ್ನು ಆಲಿಸಿದ ಕೋರ್ಟ್‌ ಮಧ್ಯಂತರ ಜಾಮೀನು ವಿಸ್ತರಣೆ ಮಾಡುವ ನಟ ದರ್ಶನ್‌ಗೆ ತಾತ್ಕಾಲಿಕ ರಿಲೀಫ್‌ ನೀಡಿದೆ. ಹಾಗಾದರೆ ಎಲ್ಲಿಯವರೆಗೂ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಇಂದು (ಡಿಸೆಂಬರ್ 09) ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ತನಿಖಾಧಿಕಾರಿಗಳ ಪರ ಎಸ್‌ಪಿಪಿ ಪ್ರಸನ್ನ ಕುಮಾರ್‌ ವಾದ ಮಂಡನೆ ಮಾಡಿದ್ದು, ನಟ ದರ್ಶನ್‌ ಪರ ಹಿರಿಯ ವಕೀಲ ಸಿ.ವಿ.ನಾಗೇಶ್‌ ಅವರು ವಾದ ಮಂಡನೆ ಮಾಡಿದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್‌ ನ್ಯಾಯಮೂರ್ತಿಗಳಾದ ವಿಶ್ವಜಿತ್ ಶೆಟ್ಟಿ ಅವರು ನಟ ದರ್ಶನ್‌ ಮಧ್ಯಂತ ಜಾಮೀನನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದ್ದಾರೆ.

Actor Darshan s Interim Bail Extended

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಬೆನ್ನು ನೋವು ಹಿನ್ನೆಲೆ ಹೈಕೋರ್ಟ್‌ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಇನ್ನು ಡಿಸೆಂಬರ್ 11ಕ್ಕೆ ಮಧ್ಯಂತರ ಜಾಮೀನು ಅವಧಿ ಮುಕ್ತಾಯವಾಗಲಿತ್ತು. ಇದರ ನಡುವೆಯೇ ಡಿಸೆಂಬರ್ 11ಕ್ಕೆ ನಟ ದರ್ಶನ್‌ಗೆ ಸರ್ಜರಿ ಇದೆ ಎಂದು ಸಿ.ವಿ.ನಾಗೇಶ್‌ ವಾದ ಮಂಡನೆ ಮಾಡಿದ್ದರಿಂದ ಕೋರ್ಟ್‌ ಮಧ್ಯಂತರ ಜಾಮೀನನ್ನು ವಿಸ್ತರಣೆ ಮಾಡಿದೆ.

ದರ್ಶನ್ ಪರ ವಕೀಲ ಸಿ.ವಿ. ನಾಗೇಶ್ ಅವರು ವಾದ ಮಂಡಿಸಿದ್ದು, ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಮಾಡುವಂತೆ ಮನವಿ ಮಾಡಿದರು. ಈವರೆಗೂ ದರ್ಶನ್ ಯಾಕೆ ಸರ್ಜರಿ ಮಾಡಿಸಿಲ್ಲವೆಂದ ಪ್ರಶ್ನೆಗೆ ಈ ಮೊದಲು ನಡೆದ ವಿಚಾರಣೆಯಲ್ಲಿ ಸಿ.ವಿ. ನಾಗೇಶ್ ಅವರು ಕಾರಣ ನೀಡಿದ್ದರು. ನಟನಿಗೆ ರಕ್ತದೊತ್ತಡ ವ್ಯತ್ಯಾಸ ಆಗುತ್ತಿರುವುದರಿಂದ ಶಸ್ತ್ರ ಚಿಕಿತ್ಸೆ ಇನ್ನೂ ನಡೆಸಿಲ್ಲ ಎಂದು ಹೇಳಿದ್ದರು.

ಬಳ್ಳಾರಿ ಜೈಲಿನಲ್ಲಿದ್ದಾಗ ದರ್ಶನ್‌ಗೆ ಬೆನ್ನು ನೋವು ಕಾಣಿಸಿಕೊಂಡ ಹಿನ್ನೆಲೆ ಅಲ್ಲಿಯೇ ಅವರಿಗೆ ವೈದ್ಯರು ಕೆಲವು ಪರೀಕ್ಷೆಗಳನ್ನ ಮಾಡಿ, ಶಸ್ತ್ರ ಚಿಕಿತ್ಸೆಗೆ ಸಲಹೆ ನೀಡಿದ್ದರು. ಎಲ್ಲಾ ವರದಿಗಳನ್ನು ಆಧರಿಸಿ ದರ್ಶನ್​ಗೆ ಮಧ್ಯಂತರ ಜಾಮೀನು ನೀಡಲಾಗಿತ್ತು. ಜಾಮೀನು ಅವಧಿ ಡಿಸೆಂಬರ್​ 11ಕ್ಕೆ ಅಂತ್ಯವಾಗುವ ಹಿನ್ನೆಲೆ ವಿಸ್ತರಣೆಗಾಗಿ ಮನವಿ ಮಾಡಲಾಗಿತ್ತು. ಇದೀಗ ಜಾಮೀನು ಅವಧಿ ವಿಸ್ತರಣೆ ಆಗಿದ್ದು, ದರ್ಶನ್‌ಗೆ ತಾತ್ಕಾಲಿಕ ರಿಲೀಫ್‌ ಸಿಕ್ಕಂತಾಗಿದೆ.

ಡಿಸೆಂಬರ್​ 11ಕ್ಕೆ ದರ್ಶನ್ ಅವರ ಶಸ್ತ್ರ ಚಿಕಿತ್ಸೆಗೆ ದಿನಾಂಕ ನಿಗದಿ ಆಗಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿದೆ. ಆದ್ದರಿಂದ ಅವರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ರೆಗ್ಯುಲರ್​ ಬೇಲ್ ವಿಚಾರಣೆಯ ವಾದ-ಪ್ರತಿವಾದ ಮುಗಿದಿದ್ದು, ಆದೇಶವನ್ನು ಹೈಕೋರ್ಟ್​ ಕಾಯ್ದಿರಿಸಿದೆ. ಆದೇಶ ಬರುವವರೆಗೂ ದರ್ಶನ್ ಮಧ್ಯಂತರ ಜಾಮೀನು ಅವಧಿ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾರೆ ಎನ್ನುವ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ನಟ ದರ್ಶನ್‌ & ಗ್ಯಾಂಗ್‌ ಬರ್ಬರವಾಗಿ ಹತ್ಯೆ ಮಾಡಿತ್ತು ಎನ್ನುವುದು ಪೊಲೀಸ್‌ ಮೂಲಗಳಲ್ಲಿ ಉಲ್ಲೇಖವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+