Vijayalakshmi Darshan: ದಿನ ದಿನಕ್ಕೂ ಜನಪ್ರಿಯತೆ ಪಡೆಯುತ್ತಿದ್ದಾರೆ ವಿಜಯಲಕ್ಷ್ಮಿ ದರ್ಶನ್: ಹೇಗೆ ತಿಳಿಯಿರಿ
ಬೆಂಗಳೂರು, ಜೂನ್. 27: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳಾಗಿದ್ದಾರೆ. ಪವಿತ್ರಾ ಗೌಡ ಅವರಿಗೆ ಜನ ಸಕತ್ ಶಾಪ ಹಾಕುತಿದ್ದಾರೆ. ಇದರ ಜೊತೆಗೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಹೆಚ್ಚು ಪ್ರೀತಿ ಮತ್ತು ಖ್ಯಾತಿ ಸಿಗುತ್ತಿದೆ.
ನಟ ದರ್ಶನ್ ಬಂಧನದ ಜೊತೆಗೆ ಪವಿತ್ರಾ ಗೌಡ ಅವರನ್ನು ಬಂಧಿಸಲಾಗಿದೆ. ಎರಡು ದಿನ ಯಾವುದೇ ಪ್ರತಿಕ್ರಿಯೆ ನೀಡಿದ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಿಧಾನವಾಗಿ ಗಂಡನ ಮೇಲಿನ ಕೋಪವನ್ನು ಹತೋಟಿಗೆ ತಂದುಕೊಂಡರು. ಡಿಆಕ್ಟಿವೆಟ್ ಮಾಡಿದ್ದ ಇನ್‌ಸ್ಟಾಗ್ರಾಮ್ ಖಾತೆಯನ್ನು ಮತ್ತೆ ಆಕ್ಟಿವ್ ಮಾಡಿಕೊಂಡರು. ಗಂಡನನ್ನು ಜೈಲಿನ ಕಂಬಿಗಳ ಹಿಂದಿನಿಂದ ಹೊರತರಲು ಕಾನೂನಿನ ಸಮರಕ್ಕೆ ಮುಂದಾದರು. ಇದು ಅವರನ್ನು ಜನ ಪ್ರೀತಿಸುವಂತೆ ಮಾಡಿದೆ.

ಜನಪ್ರಿಯತೆಯಲ್ಲಿ ಮುಳುಗುತ್ತಿದ್ದಾರೆ ವಿಜಯಲಕ್ಷ್ಮಿ
ನಟ ದರ್ಶನ್ ಈ ಹಿಂದೆ ವಿಜಯಲಕ್ಷ್ಮಿ ಅವರ ಮೇಲೆ ಹಲ್ಲೆ ಮಾಡಿ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಸೇರಿದ್ದರು. ಆಗಲೂ ಕೂಡ ಕೋಪ ಮರೆತು ಗಂಡನನ್ನು ಜೈಲಿನಿಂದ ಬಿಡುಗಡೆ ಮಾಡಿಸಿಕೊಂಡು ಬಂದಿದ್ದರು. ಈಗ ಮತ್ತೆ ಗಂಡನನ್ನು ಜೈಲಿನಿಂದ ಬಿಡಿಸಲು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಇದು ದರ್ಶನ್ ಅವರ ಕೋಟ್ಯಾಂತರ ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗಿದೆ. ಅತ್ತಿಗೆಯಿಂದ ಈಗ ಅವರನ್ನು ದೇವತೆ ಎಂದು ಹೇಳುತ್ತಿದ್ದಾರೆ.
ದರ್ಶನ್ ಬಂಧನದ ಮೊದಲು ವಿಜಯಲಕ್ಷ್ಮಿ ಅವರ ಇನ್‌ಸ್ಟಾಗ್ರಾಮ್ ಅಕೌಂಟ್ ಫಾಲೋ ಮಾಡುವವರ ಸಂಖ್ಯೆ 171 ಸಾವಿರವಿತ್ತು. ಆದರೆ ದರ್ಶನ್ ಪ್ರಕರಣದ ಬಳಿಕ ವಿಜಯಲಕ್ಷ್ಮಿ ಇನ್‌ಸ್ಟಾಗ್ರಾಮ್ ಪ್ರೋಫೈಲ್ ಡಿ ಆಕ್ಟಿವೆಟ್ ಮಾಡುವ ಮುನ್ನ ಈ ಸಂಖ್ಯೆ 188 ಸಾವಿರಕ್ಕೆ ಏರಿಕೆಯಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ಅವರ ಅಕೌಂಟ್ ಆಕ್ಟಿವ್ ಆಯಿತು. ಆಗ ಎರಡು ಲಕ್ಷ ಫಾಲೋವರ್ಸ್ ಅದರು. ಈಗ ಆ ಸಂಖ್ಯೆ ಗಂಟೆ ಗಂಟೆಗೂ ಹೆಚ್ಚಾಗುತ್ತಿದ್ದು, 219ಕ್ಕೆ ಏರಿಕೆಯಾಗಿದೆ.

ವಿಜಯಲಕ್ಷ್ಮಿ ಅವರು ದರ್ಶನ್ ಚಾಲೆಂಜಿಂಗ್ ಸ್ಟಾರ್ ಆಗುವ ಮುಂಚೆಯಿಂದಲೂ ಅವರ ಜೊತೆಗಿದ್ದವರು. ಗಂಡನನ್ನು ಕಣ್ಣಲ್ಲಿ ಕಣ್ಣಿಟ್ಟು ಕಾಪಾಡುತ್ತಾ ತಾನು ಕೆಲಸಕ್ಕೆ ಹೋಗಿ ತಮ್ಮ ಸಂಸಾರ ತೂಗಿಸಿದವರು. ಹೀಗಾಗಿಯೇ ಅವರ ಬಗ್ಗೆ ಇಂದಿಗೂ ಚಿತ್ರರಂಗದಲ್ಲಿ ಮತ್ತು ಅಭಿಮಾನಿಗಳಲ್ಲಿ ವಿಶೇಷ ಸ್ಥಾನ ಪಡೆದಿದ್ದಾರೆ. ಇಷ್ಟು ದಿನ ಅತ್ತಿಗೆ ಅತ್ತಿಗೆ ಎನ್ನುತ್ತಿದ್ದ ಅಭಿಮಾನಿಗಳು ಈಗ ದೇವತೆ ದೇವತೆ ಎನ್ನುತ್ತಿದ್ದಾರೆ.
ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ!
ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಅವರನ್ನು ತನ್ನ ಮಗನ ಜೊತೆಗೆ ಹೋಗಿ ಭೇಟಿಯಾಗಿರುವ ಅವರು ಕಾನೂನು ಸಮರ ನಡೆಸಿ ಗಂಡನನ್ನು ಕಂಬಿಹಿಂದೆಯಿಂದ ಹೊರ ತರುವುದಾಗಿ ಹೇಳಿದ್ದಾರೆ. ದರ್ಶನ್ ಅವರು ತಮ್ಮ ಸೆಲಬ್ರಿಟಿಗಳಿಗೆ ಕೊಟ್ಟಿರುವ ವಿಶೇಷ ಸಂದೇಶವನ್ನು ಕೂಡ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳಿಗೆ ಹಂಚಿಕೊಂಡಿದ್ದಾರೆ.
"ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ "ಸೆಲೆಬ್ರಿಟಿಗಳನ್ನು" ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ,ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ. ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ" ಎಂದು ತಿಳಿಸಿದ್ದಾರೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications