Dhananjay: ಡಾಲಿ ಧನಂಜಯ್ ಮದುವೆ ಡೇಟ್ ಫಿಕ್ಸ್; ಯಾವಾಗ,ಎಲ್ಲಿ?
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕವನ ಓದುತ್ತಾ ಡಾಲಿ ಧನಂಜಯ್ ತಮ್ಮ ಮನದರಸಿಯ ಪರಿಚಯ ಮಾಡಿಸಿದ್ದಾರೆ. ವಿಶೇಷವಾದ ವಿಡಿಯೋ ಹಂಚಿಕೊಂಡಿರುವ ಡಾಲಿ ಧನಂಜಯ್ ಅವರು, ತಮ್ಮ ಭಾವಿ ಪತ್ನಿಯ ಜೊತೆ ಚೆಂದದ ಫೋಟೋಶೂಟ್ ಕೂಡ ಮಾಡಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಡಾಲಿ ಧನಂಜಯ್ ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ ಎಂದು ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ. ಮದುವೆಗೆ ಕರಿತೀನಿ, ಎಲ್ಲ ಬಂದು ಊಟ ಮಾಡಿಕೊಂಡು ಹೋಗ್ಬೇಕು ಎಂದು ಹೇಳಿದ್ದಾರೆ. ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿಯ ಶುಭಾಶಯಗಳು ಕೋರಿ ನಾನು ಧನ್ಯ ಎಂಬ ವಿಡಿಯೋವನ್ನ ಡಾಲಿ ಧನಂಜಯ್ ಅವರು ಹಾಕಿಕೊಂಡಿದ್ದಾರೆ.

ಡಾಲಿ ಧನಂಜಯ್ ಅವರು ಹೋದ ಕಡೆ ಎಲ್ಲಾ ಮದುವೆ ಯಾವಾಗ? ಎಂದು ಕೇಳಿದ್ದರು. ಡಾಲಿ ಇನ್ನೂ ಮದ್ವೆಯಾಗಿಲ್ಲ ಯಾಕೆ? ಎನ್ನುವ ಪ್ರಶ್ನೆಯೂ ಉದ್ಭವಿಸಿತ್ತು. ಮದುವೆಯ ಚಿಂತೆಯನ್ನು ಮಾಡುತ್ತಿರುವ ಅನೇಕರು ಈ ಹಿಂದೆ ಡಾಲಿ ಧನಂಜಯ್ ಮತ್ತು ಅಮೃತಾ ಐಯ್ಯಂಗಾರ್ ನಡುವೆ ಪ್ರೇಮಾಂಕುರವಾಗಿದೆ ಎಂದು ಪುಕಾರು ಹಬ್ಬಿಸಿದ್ದರು. ಇದಕ್ಕೆ ಪೂರಕವಾಗಿ ಗಣೇಶ್ ನಡೆಸಿಕೊಡ್ತಿದ್ದ ಗೋಲ್ಡನ್ ಗ್ಯಾಂಗ್ ಕಾರ್ಯಕ್ರಮದಲ್ಲಿ ಡಾಲಿ ಧನಂಜಯ್, ಅಮೃತಾ ಐಯ್ಯಂಗಾರ್ ಅವರ ಮುಂದೆ ಪ್ರೇಮ ನಿವೇದನೆ ಮಾಡಿಕೊಂಡಿದ್ದರು.
ಪ್ರೀತಿಯ ಕರುನಾಡಿಗೆ,
— Dhananjaya (@Dhananjayaka) November 1, 2024
ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ.
ಮದುವೆಗೆ ಕರಿತೀನಿ,… pic.twitter.com/0M4CL0cQDL
''ಮಂಡಿಯೂರಿ ಬೇಡುವೆನು.. ಹೃದಯ ಕಾಲಡಿ ಇಡುವೆನು.. ತೆಗೆದು ಬಚ್ಚಿಟ್ಕೋ, ಇಲ್ಲ ತುಳಿದು ಕಾಲ್ ತೊಳೆದುಕೋ, ಬೇಡ ಈ ಮೌನ, ಮಾಡು ತೀರ್ಮಾನ'' ಎಂದೆಲ್ಲ ಕವಿತೆಯನ್ನು ಹೇಳಿದ್ದರು. ನಟ ಡಾಲಿ ಧನಂಜಯ್ ನೀಡಿದ್ದ ಗುಲಾಬಿ ಹೂ ಪಡೆದು ನಟಿ ಅಮೃತಾ ಐಯ್ಯಂಗಾರ್ ನಾಚಿ ನೀರಾಗಿದ್ದರು. ಇದೀಗ ಡಾಲಿ ಧನಂಜಯ್ ಮತ್ತು ಡಾ ಧನ್ಯತಾ ಅವರು ಮದುವೆಯಾಗುತ್ತಿದ್ದಾರೆ.
ಚಿತ್ರದುರ್ಗ ಮೂಲದ ವೈದ್ಯೆಯೊಂದಿಗೆ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾಲಿ ಧನಂಜಯ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಪ್ರಸೂತಿ ತಜ್ಞರಾಗಿರುವ ಡಾ. ಧನ್ಯತಾ ವೈದ್ಯಕೀಯ ಪದವಿಯಲ್ಲಿ ರ್ಯಾಂಕ್ ಪಡೆದಿದ್ದಾರೆ ಇಂಜಿನಿಯರಿಂಗ್ ಪದವಿಯಲ್ಲಿ ರ್ಯಾಂಕ್ ಪಡೆದ ಡಾಲಿ ಧನಂಝಯ್ ಕೂಡ ಪ್ರತಿಭಾವಂತರಾಗಿದ್ದಾರೆ.
ಡಾಲಿ ಧನಂಜಯ್ ಮತ್ತು ಡಾ ಧನ್ಯತಾ ಇಬ್ಬರದ್ದು ಅನೇಕ ವರ್ಷಗಳ ಪರಿಚಯ. ಚಿತ್ರದುರ್ಗದ ಮೂಲದ ಧನ್ಯತಾ ಓದಿದ್ದೆಲ್ಲ ಮೈಸೂರಿನಲ್ಲಿ. ಇನ್ನೂ ಅರಸೀಕೆರೆ ಹುಡುಗ ಧನಂಜಯ್ ಕೂಡ ತಮ್ಮ ವಿದ್ಯಾಭ್ಯಾಸ ಮಾಡಿದ್ದು ಮೈಸೂರಿನಲ್ಲಿಯೇ. ಹೀಗೆ ಮೈಸೂರಿನ ಜೊತೆ ವಿಶೇಷ ನಂಟು ಹೊಂದಿರುವ ಇಬ್ಬರು ಸ್ನೇಹಿತರಾಗಿದ್ದಾರೆ. ಆ ನಂತರ ಪ್ರೀತಿಯಲ್ಲಿ ಬಿದ್ದಿದ್ದಾರೆ. ಈಗ ಗುರು ಹಿರಿಯರ ಸಮ್ಮುಖದಲ್ಲಿ ಮದುವೆಯ ಬಂಧನಕ್ಕೊಳಗಾಗಲು ಇಬ್ಬರು ಮುಂದಾಗಿದ್ದಾರೆ.
ಡಾಲಿ ಧನಂಜಯ್ ಮತ್ತು ಡಾ ಧನ್ಯತಾ ಮದುವೆ ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ನಡೆಯಲಿದೆ ಎನ್ನುವ ಸುದ್ದಿ ಇದೆ. ಅದೇ ದಿನ ಆರತಕ್ಷತೆ ಸಮಾರಂಭ ಕೂಡ ನಡೆಯಲಿದೆ ಎನ್ನುವ ಮಾತು ಕೇಳಿ ಬರುತ್ತಿದೆ. ಇನ್ನೂ ರಾಜಕೀಯದ ಗಣ್ಯರು ಮತ್ತು ಚಿತ್ರರಂಗ ಅನೇಕರು ಮದುವೆಯಲ್ಲಿ ಭಾಗಿಯಾಗಲಿದ್ದಾರೆ. ಸದ್ಯಕ್ಕೆ ತಮ್ಮ ಕೈ ಹಿಡಿಯಲಿರುವ ಹುಡುಗಿಯನ್ನು ಡಾಲಿ ಧನಂಜಯ್ ಪರಿಚಯಿಸಿದ್ದಾರೆ.
ಪ್ರೀತಿಯ ಕರುನಾಡಿಗೆ,
ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್ಲೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ.
ಮದುವೆಗೆ ಕರಿತೀನಿ, ಎಲ್ಲ ಬಂದು ಊಟ ಮಾಡಿಕೊಂಡು ಹೋಗ್ಬೇಕು.
ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿಯ ಶುಭಾಶಯಗಳು
ನಾನು ಧನ್ಯ ❤️
ಇಂತಿ ನಿಮ್ಮವ
ಧನಂಜಯ












Click it and Unblock the Notifications