Duniya Vijay: ಫ್ಯಾನ್ಸ್‌ಗೆ ಶಾಕ್ ಕೊಟ್ಟ ದುನಿಯಾ ವಿಜಯ್: ಸೋಶಿಯಲ್ ಮೀಡಿಯಾದಲ್ಲಿ ವಿಜಿ ಏನಂದ್ರು?
ನಟ ದುನಿಯಾ ವಿಜಯ್ ಅವರು ಕನ್ನಡದ ಜನಪ್ರಿಯ ಮಾಸ್ ಹೀರೋಗಳಲ್ಲಿ ಒಬ್ಬರು. ನಟ ದುನಿಯಾ ವಿಜಯ್ ಅವರು ತಮ್ಮ ಅಭಿಮಾನಿ ಬೇಸರದ ಸುದ್ದಿಯನ್ನ ನೀಡಿದ್ದಾರೆ. ದುನಿಯಾ ವಿಜಯ್ ಅವರು ತಮ್ಮ ಅಭಿಮಾನಿಗಳಿಗಾಗಿ ಪತ್ರವೊಂದು ಬರೆದು ಮನವಿ ಮಾಡಿಕೊಂಡಿದ್ದಾರೆ.
ದೊಡ್ಡ ಸಂಖ್ಯೆಯ ಅಭಿಮಾನಿ ಬಳಗವನ್ನ ಹೊಂದಿರುವ ಇವರು ಕಳೆದ ಕೆಲ ವರ್ಷಗಳಲ್ಲಿ ನಿರ್ದೇಶಕರಾಗಿಯೂ ದುನಿಯಾ ವಿಜಯ್ ಯಶಸ್ಸು ಗಳಿಸಿದ್ದಾರೆ. ಸಾಮಾಜಿಕ ಕಾರ್ಯದಲ್ಲಿಯೂ ತೊಡಗಿಕೊಂಡಿರುವ ದುನಿಯಾ ವಿಜಯ್, ಕಳೆದ ಕೆಲ ವರ್ಷದಿಂದ ತಮ್ಮ ಹುಟ್ಟುಹಬ್ಬವನ್ನು ಹುಟ್ಟೂರಿನಲ್ಲಿ ತಂದೆ-ತಾಯಿಯ ಸಮಾಧಿ ಬಳಿ ಆಚರಿಸಿಕೊಳ್ಳುತ್ತಾರೆ. ಆದರೆ ಈ ಬಾರಿ ಅವರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಅಭಿಮಾನಿಗಳಿಗೆ ಬೇಸರ ವಿಷಯವನ್ನ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದನ್ನು ದುನಿಯಾ ವಿಜಯ್ ಬರೆದಿದ್ದಾರೆ. 'ನನ್ನ ಪ್ರೀತಿಯ ಅಭಿಮಾನಿಗಳೇ, ಪ್ರತಿ ವರ್ಷವೂ ನನ್ನ ಹುಟ್ಟು ಹಬ್ಬವನ್ನು ನಿಮ್ಮ ಮನೆಯ, ಊರಿನ ಹಬ್ಬವನ್ನಾಗಿ ನೀವುಗಳು ಅಂದರೆ ನನ್ನ ಅಭಿಮಾನಿಗಳು ಆಚರಣೆ ಮಾಡ್ತಾ ಇದ್ರಿ. ಈ ಬಾರಿಯೂ ನಿಮ್ಮ ಜತೆ ನಾನು ಹುಟ್ಟು ಹಬ್ಬವನ್ನು ಆಚರಿಸಬೇಕು ಎಂಬ ಆಸೆ ಇತ್ತು ಆದರೆ ಕೆಲಸ ಎಂಬ ಜವಬ್ದಾರಿ ನನ್ನ ಬೆನ್ನೆರಿದೆ. ತಾವೆಲ್ಲರೂ ನಾನು ಮಾಡುವ ಕೆಲಸಕ್ಕೆ ನನ್ನ ಜತೆ ನಿಂತು ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ್ದೀರ.
ಪ್ರತಿ ಬಾರಿಯಂತೆ ಈ ಬಾರಿ ನಾನು ಹುಟ್ಟುಹಬ್ಬದ ದಿನ ನನ್ನ ತಾಯಿ, ತಂದೆ ಸಮಾಧಿ ಬಳಿ ಸಿಗುವುದಿಲ್ಲ.ಅಂದು ಜಡೇಶ್ ಕೆ ಹಂಪಿ ನಿರ್ದೇಶನ ಮಾಡುತ್ತಿರುವ VK29 ಚಿತ್ರೀಕರಣದಲ್ಲಿರುತ್ತೇನೆ. ನಿಮ್ಮ ಪ್ರೀತಿ ಅಭಿಮಾನದ ನಿರೀಕ್ಷೆಯಂತೆ ಅಂದೇ VK 29 ಚಿತ್ರದ ಫಸ್ಟ್ ಲುಕ್ ನಿಮಗಾಗಿ ಬಿಡುಗಡೆ ಮಾಡ್ತಿದ್ದೇವೆ. ವಿಶೇಷ ಮನವಿ: ಶನಿವಾರ ಭಾನುವಾರ ನಾನೂ ಊರಲ್ಲಿ ಇರುವುದಿಲ್ಲ.. ದಯವಿಟ್ಟು ಯಾರೂ ಕೂಡ ಮನೆ ಬಳಿ ಬಂದು ಕಾಯಬೇಡಿ' ಎಂದಿದ್ದಾರೆ ವಿಜಯ್.
ದುನಿಯಾ ವಿಜಯ್ ಪೋಸ್ಟ್
ನನ್ನ ಪ್ರೀತಿಯ ಅಭಿಮಾನಿಗಳೇ.... ಪ್ರತಿ ವರ್ಷವೂ ನನ್ನ ಹುಟ್ಟು ಹಬ್ಬವನ್ನು ನಿಮ್ಮ ಮನೆಯ ,ಊರಿನ ಹಬ್ಬವನ್ನಾಗಿ ನೀವುಗಳು ಅಂದರೆ ನನ್ನ ಅಭಿಮಾನಿಗಳು ಆಚರಣೆ ಮಾಡ್ತಾ ಇದ್ರಿ. ಈ ಬಾರಿಯೂ ನಿಮ್ಮ ಜತೆ ನಾನು ಹುಟ್ಟು ಹಬ್ಬವನ್ನು ಆಚರಿಸಬೇಕು ಎಂಬ ಆಸೆ ಇತ್ತು ಆದರೆ ಕೆಲಸ ಎಂಬ ಜವಬ್ದಾರಿ ನನ್ನ ಬೆನ್ನೆರಿದೆ.
ತಾವೆಲ್ಲರೂ ನಾನು ಮಾಡುವ ಕೆಲಸಕ್ಕೆ ನನ್ನ ಜತೆ ನಿಂತು ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ್ದೀರ. ಪ್ರತಿ ಬಾರಿಯಂತೆ ಈ ಬಾರಿ ನಾನು ಹುಟ್ಟುಹಬ್ಬದ ದಿನ ನನ್ನ ತಾಯಿ, ತಂದೆ ಸಮಾಧಿ ಬಳಿ ಸಿಗುವುದಿಲ್ಲ.ಅಂದು ಜಡೇಶ್ ಕೆ ಹಂಪಿ ನಿರ್ದೇಶನ ಮಾಡುತ್ತಿರುವ VK29 ಚಿತ್ರೀಕರಣದಲ್ಲಿರುತ್ತೇನೆ. ನಿಮ್ಮ ಪ್ರೀತಿ ಅಭಿಮಾನದ ನಿರೀಕ್ಷೆಯಂತೆ ಅಂದೇ VK 29 ಚಿತ್ರದ ಫಸ್ಟ್ ಲುಕ್ ನಿಮಗಾಗಿ ಬಿಡುಗಡೆ ಮಾಡ್ತಿದ್ದೇವೆ. ವಿಶೇಷ ಮನವಿ: ಶನಿವಾರ ಭಾನುವಾರ ನಾನೂ ಊರಲ್ಲಿ ಇರುವುದಿಲ್ಲ.. ದಯವಿಟ್ಟು ಯಾರೂ ಕೂಡ ಮನೆ ಬಳಿ ಬಂದು ಕಾಯಬೇಡಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.












Click it and Unblock the Notifications