Pavithra Gowda: ನನಗೆ ಮಗಳಿದ್ದಾಳೆ, ಜಾಮೀನು ರದ್ದು ಮಾಡಬೇಡಿ : ಸುಪ್ರೀಂಗೆ ವಿಶೇಷ ಮನವಿ ಮಾಡಿದ ಪವಿತ್ರಾ ಗೌಡ
ಬೆಂಗಳೂರು, ಆಗಸ್ಟ್ 06: ಚಿತ್ರದುರ್ಗ ಮೂಲ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಹಾಗೂ ದರ್ಶನ್ ಗೆಳತಿ ಪವಿತ್ರಾ ಗೌಡ ಅವರು ಬರೋಬ್ಬರಿ ಆರು ತಿಂಗಳ ಬಳಿಕ ಪರಪ್ಪನ ಅಗ್ರಹಾರದಿಂದ ಜಾಮೀನಿನ ಮೇಲೆ ಹೊರಗೆ ಬಂದಿದ್ದಾರೆ. ಆರು ತಿಂಗಳು ಜೈಲಿನಲ್ಲಿ ವಿಲವಿಲ ಎಂದಿದ್ದ ಪವಿತ್ರಗೌಡ ಹಾಗೂ ದರ್ಶನ್ ಸದ್ಯ ಕುಟುಂಬಸ್ಥರ ಜೊತೆಗೆ ಕಾಲ ಕಳೆಯುತ್ತಿದ್ದಾರೆ. ಇದೀರ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ತೂಗುದೀಪ ಮತ್ತು ಪವಿತ್ರಾ ಗೌಡ ಜಾಮೀನು ರದ್ದಾಗುವ ಭೀತಿ ಎದುರಾಗಿದೆ.
ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ರದ್ದು ಮಾಡುವಂತೆ ಕೋರಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೊನೆಗೂ ಕುತೂಹಲಕಾರಿ ಘಟ್ಟ ತಲುಪಿದೆ. ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನಿನ ಬಗ್ಗೆ ಸುಪ್ರೀಂಕೋರ್ಟ್ ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿದ್ದು, ಆರೋಪಿಗಳ ಜಾಮೀನು ರದ್ದಾಗುವ ಸಾಧ್ಯತೆ ದಟ್ಟವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಪ್ರಮುಖ ಆರೋಪಿಗಳಾದ ದರ್ಶನ್ ಮತ್ತು ಪವಿತ್ರಾ ಗೌಡ ಅವರ ಪರ ವಕೀಲರು ಆರೋಪಿಗಳ ಜಾಮೀನು ಯಾವ ಕಾರಣಕ್ಕೆ ರದ್ದಾಗಬಾರದೆಂದು ಕಾರಣಗಳನ್ನು ಲಿಖಿತ ರೂಪದಲ್ಲಿ ಸುಪ್ರೀಂಕೋರ್ಟ್ಗೆ ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟಿ ಪವಿತ್ರಾ ಗೌಡ ಅವರು ಪ್ರಕರಣದ ಮೊದಲ ಆರೋಪಿ ಆಗಿದ್ದು, ನಟ ದರ್ಶನ್ ಎರಡೇ ಆರೋಪಿಯಾಗಿದ್ದಾರೆ. ಪವಿತ್ರಾ ಗೌಡ ಅವರು ರೇಣುಕಾ ಸ್ವಾಮಿ ಅಪಹರಣ ಮತ್ತು ಕೊಲೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು ಎಂದು ರಾಜ್ಯ ಸರ್ಕಾರದ ಪರ ವಕೀಲರು ಸುಪ್ರೀಂಕೋರ್ಟ್ನಲ್ಲಿ ವಾದ ಮಂಡಿಸಿದ್ದಾರೆ. ಪವಿತ್ರಾ ಗೌಡ ಪರ ವಕೀಲರು ಸುಪ್ರೀಂಕೋರ್ಟ್ಗೆ ನೀಡಿರುವ ಕಾರಣಗಳಲ್ಲಿ, ಪ್ರಮುಖವಾಗಿ, ಪವಿತ್ರಾ ಗೌಡ, ಮೃತ ರೇಣುಕಾಸ್ವಾಮಿಯಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದರು. ಘಟನೆ ನಡೆದ ದಿನ ಇತರೆ ಆರೋಪಿಗಳೊಟ್ಟಿಗೆ ಪವಿತ್ರಾ ಗೌಡ ಅವರಿಗೆ ಯಾವುದೇ ಸಂವಹನ ನಡೆದಿಲ್ಲ, ಪವಿತ್ರಾ ಗೌಡ, ರೇಣುಕಾ ಸ್ವಾಮಿಯ ಅಪಹರಣ ಮತ್ತು ಕೊಲೆಯ ಸಂಚಿನಲ್ಲಿ ಭಾಗಿ ಆಗಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂದು ತಿಳಿಸಿದ್ದಾರೆ.
ನಾನು ಒಬ್ಬಂಟಿ ಪೋಷಕಳಾಗಿದ್ದು, ನನಗೆ 10ನೇ ತರಗತಿಯಲ್ಲಿ ಓದುತ್ತಿರುವ ಮಗಳನ್ನು ನೋಡಿಕೊಳ್ಳಬೇಕಿದೆ. ಮಗಳು ಒಂಟಿಯಾಗುತ್ತಾಳೆ ಜೊತೆಗೆ ವಯಸ್ಸಾದ ಪೋಷಕರು ಇದ್ದು, ಅವರಿಗೆ ನಾನೇ ಆಧಾರವಾಗಿದ್ದೇನೆ. ನನಗೆ ಯಾವುದೇ ಕ್ರಿಮಿನಲ್ ಹಿನ್ನಲೆ ಇಲ್ಲ, ನನ್ನ ಬಂಧನಕ್ಕೆ ಕಾರಣಗಳನ್ನು ಪೊಲೀಸರು ಲಿಖಿತವಾಗಿ ನೀಡಲಾಗಿಲ್ಲ , ಮಹಿಳೆಯಾಗಿರುವುದರಿಂದ ಜಾಮೀನು ರದ್ದು ಮಾಡುವುದು ಕಠಿಣ ಕ್ರಮವಾಗಲಿದೆ ಎಂದು ಸುಪ್ರೀಂಕೋರ್ಟ್ಗೆ ನಟಿ ಪವಿತ್ರಾ ಗೌಡ ವಿಶೇಷ ಮನವಿ ಮಾಡಿದ್ದಾರೆ.












Click it and Unblock the Notifications