Sayaji Shinde: ಎದೆನೋವು: ಬಹುಭಾಷಾ ನಟ ಸಯ್ಯಾಜಿ ಶಿಂಧೆ ದಿಢೀರ್ ಆಸ್ಪತ್ರೆಗೆ ದಾಖಲು
ಖ್ಯಾತ ಬಹುಭಾಷಾ ನಟ ಸಯ್ಯಾಜಿ ಶಿಂಧೆ ಅವರಿಗೆ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಯ್ಯಾಜಿ ಶಿಂಧೆ ಅವರು ಆಸ್ಪತ್ರೆ ಬೆಡ್ ಮೇಲೆ ಚಿಕಿತ್ಸೆ ಪಡೆಯುತ್ತಿರುವ ಫೋಟೋ ಎಲ್ಲೆಡೆ ವೈರಲ್ ಆಗಿದ್ದು, ಅವರ ಅಭಿಮಾನಿಗಳು ಆತಂಕಗೊಂಡಿದ್ದಾರೆ.
ನಿನ್ನೆ ನಟ ಸಯ್ಯಾಜಿ ಶಿಂಧೆ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದೆ. ಎದೆನೋವನ್ನು ನಿರ್ಲಕ್ಷಿಸಿದ ಕುಟುಂಬಸ್ಥರು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಯ್ಯಾಜಿ ಶಿಂಧೆ ಅವರನ್ನು ತಪಾಸಣೆ ನಡೆದಿದ ವೈದ್ಯರು ತುರ್ತು ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ.

ಈ ವೇಳೆ ವೈದ್ಯರು ನಟನ ಹೃದಯದಲ್ಲಿ ರಕ್ತನಾಳ ಬ್ಲಾಕ್ ಆಗಿರುವುದನ್ನು ಕಂಡು ಬಂದಿದೆ ಎಂದು ತಿಳಿಸಿದ್ದಾರೆ. ಇದಾದ ಇದರಿಂದ ನಿನ್ನೆ ಮತ್ತೆ ನಟ ಸಯ್ಯಾಜಿ ಶಿಂಧೆ ಅವರ ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದ್ದು, ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿದಿದೆ.
ಸದ್ಯ ನಟ ಸಯ್ಯಾಜಿ ಶಿಂಧೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ತಮ್ಮ ಆರೋಗ್ಯದ ಬಗ್ಗೆ ಸ್ವತಃ ಸಯ್ಯಾಜಿ ಶಿಂಧೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 'ಎಲ್ಲರಿಗೂ ನಮಸ್ಕಾರ, ಸದ್ಯ ನಾನು ಆರೋಗ್ಯವಾಗಿದ್ದೇನೆ. ಚಿಂತಿಸುವ ಅಗತ್ಯ ಇಲ್ಲ. ನನನ್ನು ಪ್ರೀತಿಸುವ ನಿಮ್ಮ ಹಾರೈಕೆ ನನ್ನೊಂದಿಗಿದೆ. ಇನ್ನು ಕೆಲವೇ ದಿನಗಳಲ್ಲಿ ಮತ್ತೆ ನಿಮ್ಮನ್ನು ರಂಜಿಸಲು ಹಾಜರಾಗುತ್ತೇನೆ' ಎಂದು ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.
ಇನ್ನು ಈ ವಿಚಾರ ತಿಳಿಯುತ್ತಿದ್ದಂತೆ ನಟ ಸಯ್ಯಾಜಿ ಶಿಂಧೆ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಶೀಘ್ರ ಗುಣಮುಖರಾಗಲಿ ಎಂದು ಕಾಮೆಂಟ್ ಮಾಡುವ ಮೂಲಕ ಹಾರೈಸಿದ್ದಾರೆ. ಸದ್ಯ ನಟ ಸಯ್ಯಾಜಿ ಶಿಂಧೆ ಅವರು ಸತಾರಾದಲ್ಲಿರುವ ಪ್ರತಿಭಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇನ್ನೆರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನಟ ಸಯ್ಯಾಜಿ ಶಿಂಧೆ ಕನ್ನಡ, ಹಿಂದಿ, ತಮಿಳು, ತೆಲುಗು ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಯ್ಯಾಜಿ ಶಿಂಧೆ ಅವರು ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.












Click it and Unblock the Notifications