Yash And Radhika Pandit: ದಿಢೀರನೆ ಕೋರ್ಟ್ ಮೆಟ್ಟಿಲೇರಿದ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್
ಸ್ಯಾಂಡಲ್‌ವುಡ್‌ನ ಹಲವು ಮಂದಿ ತಮ್ಮ ವೈವಾಹಿಕ ಜೀವನದ ಕುರಿತು ಕೋರ್ಟ್ ಮೆಟ್ಟಿಲೇರಿರುವ ಸಂಗತಿಗಳು ಹೆಚ್ಚಾಗಿದೆ. ಇದೀಗ ಸ್ಯಾಂಡಲ್‌ವುಡ್‌ನ ಮೋಸ್ಟ್ ಬ್ಯೂಟಿಫುಲ್ ಕಪಲ್ ಯಶ್ ಮತ್ತು ರಾಧಿಕಾ ಪಂಡಿತ್ ಕೋರ್ಟ್ ಮೆಟ್ಟಿಲೇರಿದ್ದಾರೆ. ಯಶ್ ಮತ್ತು ರಾಧಿಕಾ ಪಂಡಿತ್ ಕೋರ್ಟ್ ಮೆಟ್ಟಿಲೇರಿದ್ದಾರೆ. ನಿನ್ನೆವರೆಗೂ ಎಲ್ಲಾ ಚೆನ್ನಾಗೇ ಇತ್ತಲ್ಲ.. ಇವತ್ತೇನಾಯ್ತು ಅನ್ನೋರಿಗೆ ಇಲ್ಲಿದೆ ಉತ್ತರ.
ಅಂದಹಾಗೆ, ಈ ಕೋರ್ಟ್ ಕೇಸ್ ನಿಜ ಜೀವನಕ್ಕೆ ಸಂಬಂಧಿಸಿದ್ದಲ್ಲ. ನಟಿ ರಾಧಿಕಾ ಪಂಡಿತ್ ಅವರು ಒಂದು ವಿಷಯಕ್ಕೆ ಕೋರ್ಟ್ ಕಟಕಟೆಯಲ್ಲಿ ನಿಂತಿದ್ದಾರೆ. ಅವರ ಪತಿ ಯಶ್ ಜೋರು ಜೋರಾಗಿ ವಾದ ಮಾಡಿದ್ದಾರೆ. ಅಂದಹಾಗೆ, ಈ ಕೋರ್ಟ್ ಕೇಸ್ ನಿಜ ಜೀವನಕ್ಕೆ ಸಂಬಂಧಿಸಿದ್ದಲ್ಲ. ಇದು ಅವರಿಬ್ಬರೂ ಜೊತೆಯಾಗಿ ನಟಿಸಿರುವ ಜಾಹೀರಾತಿನ ದೃಶ್ಯ.

ಸೆಲೆಬ್ರಿಟಿಗಳು ಕೋರ್ಟಿಗೆ ಹೋಗೋದು ಇತ್ತೀಚೆಗೆ ಸಾಮಾನ್ಯ ಅಂತಾಗಿದೆ. ಆದರೆ ಯಶ್, ರಾಧಿಕಾ ಕೋರ್ಟ್ ಮೆಟ್ಟಿಲೇರಿದ್ದಕ್ಕೆ ಕಾರಣ ಬೇರೆ ಇದೆ. ಇದು ನೀವೆಲ್ಲ ಅಂದುಕೊಂಡಿರುವ ಹಾಗೆ ರಿಯಲ್ ಲೈಫ್ ಕಥೆ ಅಲ್ಲ. ಬದಲಾಗಿ ಜಾಹೀರಾತು. ಇದೀಗ ಮತ್ತೆ ಯಶ್ ಹಾಗೂ ರಾಧಿಕಾ ಪಂಡಿತ್ ಇಬ್ಬರೂ ಒಂದೇ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ. ಪತ್ನಿ ರಾಧಿಕಾ ಪಂಡಿತ್ ಪರವಾಗಿ ಸ್ವತ: ನಟ ಯಶ್ ವಾದಕ್ಕೆ ಮಾಡಿರುವುದನ್ನ ಈ ದೃಶ್ಯದಲ್ಲಿ ಕಾಣಿಸಿಕೊಂಡಿದ್ದಾರೆ. ಇದು ಸಿನಿಮಾದ ದೃಶ್ಯವೇನೂ ಅಲ್ಲ. ಇದೂ ಕೂಡ ಜಾಹೀರಾತಿನ ಒಂದು ತುಣುಕು.
ಈಗಾಗಲೇ ನಟ ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹಲವು ಸಿನಿಮಾಗಳನ್ನ ಒಟ್ಟಿಗೆ ನಟಿಸಿದ್ದಾರೆ. ಇದೀಗ ಜಾಹೀರಾತಿನಲ್ಲಿ ಒಟ್ಟಿಗೆ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಖುಷಿಗೆ ಕಾರಣವಾಗಿದೆ. ಯಶ್ ಮತ್ತು ರಾಧಿಕಾ ಪಂಡಿತ್ ಜಾಹೀರಾತೊಂದರಲ್ಲಿ ಕಾಣಿಸಿಕೊಂಡಿದ್ದು, ಆ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅದರಲ್ಲಿ ಯಶ್ ವಕೀಲರ ಡ್ರೆಸ್‌ನಲ್ಲಿ ಕಾಣಿಸಿಕೊಂಡಿದ್ದರು.
ಇದೀಗ ಆ ಜಾಹೀರಾತನ್ನು ಗಂಡ ಹೆಂಡತಿ ಇಬ್ಬರೂ ಹಂಚಿಕೊಂಡಿದ್ದಾರೆ. ಇದರಲ್ಲಿ ನಟಿ ರಾಧಿಕಾ ಪಂಡಿತ್ ಅವರು ಒಂದು ವಿಷಯಕ್ಕೆ ಕೋರ್ಟ್ ಕಟಕಟೆಯಲ್ಲಿ ನಿಂತಿದ್ದಾರೆ. ಅವರ ಪತಿ ಯಶ್ ಜೋರು ಜೋರಾಗಿ ವಾದ ಮಾಡಿದ್ದಾರೆ. ಇದರಲ್ಲಿ ರಾಧಿಕಾ ಪಂಡಿತ್ ಮೋಸಕ್ಕೆ ಒಳಗಾದ ಗ್ರಾಹಕಿಯ ಪಾತ್ರ ಮಾಡಿದ್ದಾರೆ. ಅವರಿಗೆ ನ್ಯಾಯ ಕೊಡಿಸಲು ಬಂದ ಲಾಯರ್ ಪಾತ್ರದಲ್ಲಿ ಯಶ್ ಕಾಣಿಸಿಕೊಂಡಿದ್ದಾರೆ.
ಕಂಪನಿಯ ನಿಜವಾದ ಅಡುಗೆ ಎಣ್ಣೆ ಯಾವುದು ಎಂಬುದನ್ನು ಸಾಬೀತು ಮಾಡಲು ಯಶ್ ಫುಲ್ ಜೋಶ್‌ನಲ್ಲಿ ವಾದ ಮಾಡಿದ್ದಾರೆ. ಇದೀಗ ನಟ ಯಶ್ ಹಾಗೂ ರಾಧಿಕಾ ಅವರ ಈ ಜಾಹೀರಾತು ಸಖತ್ ವೈರಲ್ ಆಗಿದೆ.
ಸದ್ಯ ರಾಕಿಂಗ್ ಸ್ಟಾರ್ ಯಶ್ ಅವರು ಟಾಕ್ಸಿಕ್ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ಆದ ಬಳಿಕ ಮೆಗಾ ಬಜೆಟ್ ಸಿನಿಮಾಗಳ ಕಡೆಗೆ ಹೆಚ್ಚು ಒಲವು ತೋರಿದ್ದಾರೆ. ಇನ್ನೊಂದು ಕಡೆ ರಾಧಿಕಾ ಪಂಡಿತ್ ಮದುವೆ ಬಳಿಕ ಸಿನಿಮಾಗಳಲ್ಲಿ ನಟಿಸುತ್ತಿಲ್ಲ. ಸದ್ಯ ಮಕ್ಕಳ ಕಾಲ ಕಳೆಯುತ್ತಿದ್ದು, ಕೆಲ ಜಾಹೀರಾತಗಳಲ್ಲಿ ರಾಧಿಕಾ ಅವರು ಕಾಣಿಸಿಕೊಂಡಿದ್ದಾರೆ.












Click it and Unblock the Notifications