Yash Birthday: 3 ವರ್ಷಗಳಿಂದ ಕೈಗೆ ಸಿಗದ ಯಶ್, ಈ ಬಾರಿ ಫ್ಯಾನ್ಸ್ ಜೊತೆ ಹುಟ್ಟುಹಬ್ಬ ಆಚರಣೆ?
ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ ಇದೇ ಜನವರಿ 8ಕ್ಕೆ ಇದೆ. ಕಳೆದ ಮೂರು ವರ್ಷಗಳಿಂದಲೂ ಯಶ್ ಅವರು ತಮ್ಮ ಹುಟ್ಟುಹಬ್ಬದ ದಿನ ಅಭಿಮಾನಿಗಳ ಮುಂದೆ ಪ್ರತ್ಯಕ್ಷವಾಗಲಿಲ್ಲ. ಕೆಲಸದ ನಿಮಿತ್ತ ಹುಟ್ಟುಹಬ್ಬದ ದಿನ ನಿಮ್ಮೊಂದಿಗೆ ಇರುವುದಿಲ್ಲ, ದಯವಿಟ್ಟು ಸಹಕರಿಸಿ ಎಂದು ಪೋಸ್ಟ್ ಹಂಚಿಕೊಂಡಿದ್ದರು. ಇದರಿಂದ ಅಭಿಮಾನಿಗಳಿಗೆ ಯಶ್ ಅವರ ದರ್ಶನ ಭಾಗ್ಯ ಸಿಕ್ಕಿರಲಿಲ್ಲ. ಈಗ ಟಾಕ್ಸಿಕ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಈ ಹುಟ್ಟುಹಬ್ಬಕ್ಕಾದರೂ ಯಶ್ ನಮ್ಮೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ ಅಭಿಮಾನಿಗಳು.
ನಟ ಯಶ್ ಕಳೆದ ಎರಡು ವರ್ಷಗಳಿಂದ ಯಾವುದೇ ಭರ್ಜರಿ ಸಂಭ್ರಮವಿಲ್ಲದೆ, ಅಭಿಮಾನಿಗಳಿಂದ ದೂರವಾಗಿಯೇ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಸಾರ್ವಜನಿಕ ಕಾರ್ಯಕ್ರಮಗಳಿಗೂ ಅವರು ಬ್ರೇಕ್ ಹಾಕಿದ್ದರಿಂದ, ಅಭಿಮಾನಿಗಳಿಗೆ ನೇರವಾಗಿ ಅವರನ್ನು ನೋಡುವ ಅವಕಾಶವೇ ಇರಲಿಲ್ಲ.

ಅಭಿಮಾನಿಗಳಿಗೆ ದರ್ಶನ ಭಾಗ್ಯ?
ಇದೀಗ ಡಿಸೆಂಬರ್ 8ರಂದು ಯಶ್ ಅವರ ಹುಟ್ಟುಹಬ್ಬ ಇರುವ ಹಿನ್ನೆಲೆಯಲ್ಲಿ, ಈ ಬಾರಿ ಅವರು ಅಭಿಮಾನಿಗಳ ಮುಂದೆ ಕಾಣಿಸಿಕೊಳ್ಳಲಿದ್ದಾರಾ? ಎಂಬ ಪ್ರಶ್ನೆ ಅಭಿಮಾನಿಗಳು ಮುಂದಿಟ್ಟಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದ್ದು, ಸಣ್ಣ ಕಾರ್ಯಕ್ರಮವಾದರೂ ನಡೆಯಬಹುದು ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಈ ಕುರಿತಂತೆ ಯಶ್ ತಂಡದಿಂದ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
ಯಶ್ ಈಗ ಕೇವಲ ಸ್ಯಾಂಡಲ್‌ವುಡ್ ನಟ ಮಾತ್ರವಲ್ಲ, ಕೆಜಿಎಫ್ ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಎಲ್ಲೆಡೆ ಈಗ ಯಶ್ ಅವರಿಗೆ ಅಭಿಮಾನಿ ಬಳಗವಿದೆ. ಆದರೆ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬದ ದಿನ ಅವರನ್ನು ನೋಡಬೇಕು, ಶುಭಾಶಯಗಳನ್ನು ತಿಳಿಸಬೇಕು ಎನ್ನುವುದು ಪ್ರತಿ ಅಭಿಮಾನಿಯ ಆಸೆ. ಆದರೆ ಯಶ್ ಸತತವಾಗಿ ಮೂರು ವರ್ಷಗಳಿಂದ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಆಚರಿಸುತ್ತಿಲ್ಲ.

ಆದಷ್ಟು ಬೇಗ ಭೇಟಿ ಆಗ್ತೀನಿ ಎಂದಿದ್ದ ಯಶ್
ಕಳೆದ ಬಾರಿಯೂ ತಮ್ಮ ಹುಟ್ಟುಹಬ್ಬಕ್ಕೂ ಮುನ್ನ ಯಶ್ ಈ ರೀತಿ ಅಭಿಮಾನಿಗಳಿಗೆ ಪತ್ರ ಬರೆದಿದ್ದರು. ನಿಮ್ಮ ಅಭಿಮಾನದ ಅಪ್ಪುಗೆ ಮತ್ತೊಂದು ವರ್ಷವನ್ನು ಸಾರ್ಥಕಗೊಳಿಸಿದೆ. ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿರಲಿ ಎಂಬುದು ನನ್ನ ಪ್ರೀತಿಯ ಮನವಿ. ಹಾಗೂ ಪ್ಲೆಕ್ಸ್, ಬ್ಯಾನರ್‌ಗಳ ಯಾವುದೇ ಆಡಂಬರ ಮಾಡದೆ, ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೆ ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆ ಪಡುವ ಕೆಲಸ ನಿಮ್ಮಿಂದ ಆಗಲಿ. ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ. ಆದಷ್ಟು ಬೇಗ ನಿಮ್ಮನ್ನೆಲ್ಲಾ ಭೇಟಿ ಆಗುತ್ತೇನೆ ಎಂದಿದ್ದರು.
ಈಗ ಮಾರ್ಚ್‌ನಲ್ಲಿ ಯಶ್ ಅವರ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ಇತ್ತೀಚೆಗೆ ಈ ಸಿನಿಮಾದ ಹಲವರ ಪಾತ್ರ ಪರಿಚಯವೂ ಆಗಿದೆ. ಯಶ್ ಹುಟ್ಟುಹಬ್ಬಕ್ಕೆ ಸಹಜವಾಗಿ ಟಾಕ್ಸಿಕ್ ಹಾಗೂ ರಾಮಾಯಣ ಸಿನಿಮಾಗಳಿಂದ ಏನಾದರೂ ಸರ್‌ಪ್ರೈಸ್ ಸಿಗಲಿದೆ. ಯಶ್ ಅವರು ಟಾಕ್ಸಿಕ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದ ಕಾರಣ ಅಭಿಮಾನಿಗಳ ಸಂಭ್ರಮಕ್ಕೆ ಬ್ರೇಕ್ ಹಾಕಿದ್ದರು. ಈ ಬಾರಿಯಾದರೂ ಯಶ್ ಬೆಂಗಳೂರಿನಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕು ಎಂಬ ಆಸೆ ಬಿಚ್ಚಿಟ್ಟಿದ್ದಾರೆ ಅವರ ಅಭಿಮಾನಿಗಳು.












Click it and Unblock the Notifications