Anushka-Rakshit Shetty Marriage: ರಕ್ಷಿತ್ ಶೆಟ್ಟಿ ಜೊತೆ ಅನುಷ್ಕಾ ಶೆಟ್ಟಿ ಮದುವೆ: ಏನಿದು ಗಾಸಿಪ್?
ಕನ್ನಡದ ಕುವರಿಯಾಗಿದ್ದರೂ ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಯ ಸಿನಿಮಾಗಳಲ್ಲಿ ಮಿಂಚುತ್ತಿರುವ ನಟಿ ಅನುಷ್ಕಾ ಶೆಟ್ಟಿ ಆಗ್ಗಾಗೆ ಸುದ್ದಿಯಲ್ಲಿರುತ್ತಾರೆ. ಈಗಾಗಲೇ 42 ವರ್ಷ ದಾಟಿರುವ ನಟಿ ಅನುಷ್ಕಾ ಶೆಟ್ಟಿ ಅವರ ಮದುವೆ ಬಗ್ಗೆ ಪದೇ ಪದೇ ಸುದ್ದಿ ಹರಿದಾಡುತ್ತಲೆ ಇರುತ್ತದೆ. ಸದ್ಯ ಮತ್ತೊಂದು ವಿಷಯ ಸಕತ್ ಟ್ರೆಂಡಿಂಗ್‌ನಲ್ಲಿದೆ.
ಹೌದು... ಬಾಹುಬಲಿ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡ ನಟಿ ಅನುಷ್ಕಾ ಶೆಟ್ಟಿ ಮದುವೆ ವಿಷಯ ಸಕತ್ ಟ್ರೆಂಡಿಂಗ್‌ನಲ್ಲಿದೆ. ಕನ್ನಡದ ದೊಡ್ಡ ನಿರ್ಮಾಪಕನೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರಂತೆ. ಈಗಾಗಲೇ ಎರಡೂ ಕುಟುಂಬಗಳು ಮದುವೆಗೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಇದು ಕನ್ನಡಿಗರಲ್ಲಿ ಸಂತಸ ಮೂಡಿಸಿದ್ದು, ಯಾರು ಆ ನಿರ್ಮಾಪಕ ಎಂಬ ಗುಸು ಗುಸು ಆರಂಭವಾಗಿದೆ.

ರಕ್ಷಿತ್ ಶೆಟ್ಟಿ ಜೊತೆ ಅನುಷ್ಕಾ ಶೆಟ್ಟಿ ಮದುವೆ?
ನಟಿ ಅನುಷ್ಕಾ ಶೆಟ್ಟಿ ಮದುವೆ ವಿಷಯ ಸುದ್ದಿಯಾಗುತ್ತಿದ್ದಂತೆ ವರನ ಬಗ್ಗೆಯೂ ಕುತೂಹಲ ಮೂಡಿದೆ. ಕನ್ನಡದ ಆ ನಿರ್ಮಾಪಕರಿಗೆ 42 ವರ್ಷ ಎನ್ನಲಾಗಿದೆ. ಹೀಗಾಗಿ ಕನ್ನಡದಲ್ಲಿ ಇರುವ ನಟ, ನಿರ್ಮಾಪಕರ ವಯಸ್ಸನ್ನು ಹಿಡಿದು ಇವರೇ ಅವರಿಗೆ ಜೋಡಿನಾ ಎಂದು ಚರ್ಚೆ ನಡೆಸಲಾಗುತ್ತಿದೆ. ಅದರಲ್ಲಿ ಹೆಚ್ಚು ಕೇಳಿ ಬರುತ್ತಿರುವ ಹೆಸರು ನಟ, ನಿರ್ಮಾಪಕ ರಕ್ಷಿತ್ ಶೆಟ್ಟಿ ಹೆಸರು.
ಈಗಾಗಲೇ ನಟಿ ರಶ್ಮಿಕಾ ಮಂದಣ್ಣ ಜೊತೆಗೆ ನಿಶ್ಚಿತಾರ್ಥ ಮುರಿದುಬಿದ್ದಿದ್ದು, ಮದುವೆ ಬಗ್ಗೆ ಮೌನವಾಗಿದ್ದಾರೆ. ಇಂತಹ ಸನ್ನಿವೇಶದಲ್ಲಿ ನಟ ರಕ್ಷಿತ್ ಶೆಟ್ಟಿ ಹೆಸರು ನಟಿ ಅನುಷ್ಕಾ ಶೆಟ್ಟಿ ಜೊತೆಗೆ ತಳುಕು ಹಾಕಿಕೊಂಡಿದೆ. ಇಬ್ಬರ ವಯಸ್ಸು ಕೂಡ ಮ್ಯಾಚ್ ಆಗುತ್ತಿದ್ದು, ಜನ ಇವರೇ ಆ ನಿರ್ಮಾಪಕ ಎಂದು ನೆಟ್ಟಿಗರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಪ್ರಭಾಸ್ ಜೊತೆ ಅನುಷ್ಕಾ ಶೆಟ್ಟಿ ಹೆಸರು
ನಟ ರಕ್ಷಿತ್ ಶೆಟ್ಟಿ ಜೊತೆಗೆ ಕಾಟೇರಾ ಖ್ಯಾತಿಯ ನಿರ್ದೇಶಕ ತರುಣ್ ಸುಧೀರ್ ಹೆಸರು ಕೂಡ ಕೇಳಿಬರುತ್ತಿದೆ. ಇನ್ನು, ನಟಿ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಇಬ್ಬರು ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂದು ವದಂತಿಯುತ್ತು. ಪ್ಯಾನ್ ಇಂಡಿಯಾ ಸಿನಿಮಾ 'ಬಾಹುಬಲಿ' ಸಮಯದಲ್ಲಿ ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂಬ ಊಹಾಪೋಹ ಹರಿದಾಡುತ್ತಿತ್ತು. ಹಲವು ವರ್ಷಗಳ ಕಾಲ ಇಬ್ಬರ ವಿಷಯ ಬಿಸಿ ಬಿಸಿ ಸುದ್ದಿಯಾಗಿತ್ತು. ಆದರೆ, ಇಬ್ಬರು ತಾವಿಬ್ಬರು ಸ್ನೇಹಿತರು ಎಂದು ಹೇಳಿಕೊಂಡಿದ್ದಾರೆ.
'ಆದಷ್ಟು ಬೇಗ ಅನುಷ್ಕಾ ಮದುವೆ': ವೇಣು ಸ್ವಾಮಿ
ಇನ್ನು ಎರಡು ವರ್ಷಗಳ ಹಿಂದೆಯೇ ಖ್ಯಾತ ಜ್ಯೋತಿಷಿ ವೇಣು ಸ್ವಾಮಿ 'ಆದಷ್ಟು ಬೇಗ ಅನುಷ್ಕಾ ಅವರು ಮದುವೆಯಾಗಲಿದ್ದಾರೆ' ಎಂದು ಭವಿಷ್ಯ ನುಡಿದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ನಟಿ ಅನುಷ್ಕಾ ಶೆಟ್ಟಿ, ನನಗೆ ಇನ್ನೂ ಕೆಲವು ವರ್ಷಗಳು ಮದುವೆಯಾಗುವ ಯೋಚನೆ ಇಲ್ಲ, ನಾನು ಚಿತ್ರಗಳಲ್ಲಿ ಬ್ಯುಸಿ ಆಗಿದ್ದೇನೆ. ಚಿತ್ರರಂಗಕ್ಕೆ ಸಂಬಂಧಪಡದ ವ್ಯಕ್ತಿಯನ್ನು ಮದುವೆ ಆಗುತ್ತೇನೆ ಎಂದಿದ್ದರು.
'ಬಾಹುಬಲಿ' ಸಿನಿಮಾ ನಂತರ ನಟಿ ಅನುಷ್ಕಾ ಶೆಟ್ಟಿ ಅಂತಹ ಹಿಟ್ ಸಿನಿಮಾ ನೀಡಿಲ್ಲ. ಜೊತೆಗೆ ಸಿನಿಮಾಗಳ ಸಂಖ್ಯೆ ಕೂಡ ಕಡಿಮೆಯಾಗಿದೆ. ಇತ್ತೀಚೆಗೆ ಬಂದ ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸದ್ಯ ಅವರ ಮದುವೆ ವಿಷಯ ಹೆಚ್ಚು ಸದ್ದು ಮಾಡುತ್ತಿದ್ದು, ಅಧಿಕೃತ ಹೇಳಿಕೆ ಹೊರಬರಬೇಕಿದೆ.












Click it and Unblock the Notifications