ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿ ನಟಿ ಜಯಮಾಲ ಆಯ್ಕೆ
Karnataka Film Chamber Of Commerce: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಹಿರಿಯ ನಟಿ ಜಯಮಾಲ ಜಯಭೇರಿ ಬಾರಿಸಿದ್ದಾರೆ. ಜಯಮಾಲ ಅವರು ಎರಡನೇ ಬಾರಿಗೆ ಫಿಲ್ಮ್ ಚೇಂಬರ್‌ನ ಅಧ್ಯಕ್ಷೆಯಾಗಿರುವುದು ಗಮನ ಸೆಳೆದಿದೆ. ಈ ಹಿಂದೆ 2008ರಿಂದ 2010ರವರೆಗೆ ಅಧ್ಯಕ್ಷೆ ಆಗಿದ್ದರು. ಇದೀಗ 2ನೇ ಬಾರಿಗೆ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದಾರೆ.
ವಾಣಿಜ್ಯ ಮಂಡಳಿಯ ಹಲವು ಸ್ಥಾನಗಳಿಗೆ ಶನಿವಾರ ಚುನಾವಣೆ ನಡೆದು ಮತ ಎಣಿಕೆಯೂ ನಡೆಯಿತು. ಅಂತಿಮವಾಗಿ ನಟಿ ಜಯಮಾಲ ಅವರು ದೊಡ್ಡ ಸಂಖ್ಯೆಯ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದರು. ಭಾಮಾ ಹರೀಶ್ ಅವರ ವಿರುದ್ಧ ಜಯಮಾಲ ಅವರು ವಿಜೇತರಾದರು.

ಮತದಾನದಲ್ಲಿ ಚಿತ್ರರಂಗದ ನಟರಾದ ಶಿವರಾಜ್ ಕುಮಾರ್, ಡಾಲಿ ಧನಂಜಯ್, ಅಶ್ವಿನಿ ಪುನೀತ್ ರಾಜ್ಕುಮಾರ್ ಸೇರಿದಂತೆ ಹಲವು ನಟ, ನಟಿಯರು, ತಂತ್ರಜ್ಞರುಗಳು ಆಗಮಿಸಿ ವಿವಿಧ ಸ್ಥಾನಗಳಿಗೆ ಚುನಾವಣೆಗೆ ನಿಂತಿದ್ದ ಸ್ಪರ್ಧಿಗಳ ಪರ ಮತ ಚಲಾಯಿಸಿದರು. ಶನಿವಾರ ವಾಣಿಜ್ಯ ಮಂಡಳಿಯ ವಿವಿಧ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಚಿತ್ರರಂಗದ ಹಲವು ಪ್ರಮುಖರು ಭಾಗವಹಿಸಿ ಮತಚಲಾಯಿಸಿದ್ದರು. ಅಂತಿಮವಾಗಿ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ತೀವ್ರ ಪೈಪೋಟಿಯಲ್ಲಿ ನಿರ್ಮಾಪಕ ಭಾ.ಮಾ. ಹರೀಶ್ ಅವರನ್ನು ಜಯಮಾಲ ಸ್ಪಷ್ಟ ಮತಗಳ ಅಂತರದಿಂದ ಸೋಲಿಸಿದರು.
ಭಾರೀ ಪೈಪೋಟಿ
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಸ್ಥಾನಕ್ಕಾಗಿ ಜಯಮಾಲ ಹಾಗೂ ನಿರ್ಮಾಪಕ ಭಾ.ಮಾ ಹರೀಶ್ ಸ್ಪರ್ಧಿಸಿದ್ದರು. ಇಬ್ಬರ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಈ ಬಾರಿಯ ಫಿಲ್ಮ್ ಚೇಂಬರ್ ಚುನಾವಣೆಯಲ್ಲಿ ಒಟ್ಟು 843 ಮತಗಳು ಚಲಾವಣೆ ಆಗಿತ್ತು. ಈ ಪೈಕಿ 512 ಮತಗಳು ಜಯಮಾಲ ಪರವಾಗಿವೆ. ಈ ಮೂಲಕ ಭರ್ಜರಿ ಮತಗಳನ್ನ ಪಡೆದು ಜಯಮಾಲ ಜಯಭೇರಿ ಬಾರಿಸಿದರೆ, ನಿರ್ಮಾಪಕ ಭಾಮಾ ಹರೀಶ್ ಸೋಲು ಕಂಡರು.
ಪದಾಧಿಕಾರಿಗಳು ಯಾರು?
ಗೌರವ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸುಂದರ್ ರಾಜು (ನಿರ್ಮಾಪಕ), ಕೆ.ಮಂಜು (ವಿತರಕ), ಕಿಶೋರ್ ಗೆಲುವು ಸಾಧಿಸಿದ್ದಾರೆ. ಕಾರ್ಯದರ್ಶಿ ಸ್ಥಾನಕ್ಕೆ ನಡೆದ ಮತದಾನದಲ್ಲಿ ನಿರ್ಮಾಪಕ ಎ.ಗಣೇಶ್, ರಮೇಶ್, ಅಶೋಕ್ ಗೆದ್ದಿದ್ದಾರೆ. ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಜಯಸಿಂಹ ಮುಸುರಿ ಸಹ ಗೆಲುವು ಸಾಧಿಸಿದ್ದಾರೆ. ಕಳೆದ ಸಾಲಿನ ಚುನಾವಣೆಯಲ್ಲಿ ಎಂ.ನರಸಿಂಹಲು ಅವರು ಫಿಲ್ಮ್ ಚೇಂಬರ್‌ನ ಅಧ್ಯಕ್ಷರಾಗಿದ್ದರು. ಈ ಬಾರಿ ನಟಿ ಜಯಮಾಲ ಅಧ್ಯಕ್ಷ ಸ್ಥಾನಕ್ಕೇರಿದ್ದಾರೆ.
ಜಯಮಾಲ ಅವರ ಗೆಲುವು ಸ್ಯಾಂಡಲ್‌ವುಡ್ ವಲಯದಲ್ಲಿ ಹೊಸ ನಿರೀಕ್ಷೆ ಮೂಡಿಸಿದ್ದು, ಮುಂದಿನ ಅವಧಿಯಲ್ಲಿ ಚಿತ್ರರಂಗದ ಸಮಸ್ಯೆಗಳು ಹಾಗೂ ಅಭಿವೃದ್ಧಿಗೆ ಹೊಸ ದಿಕ್ಕು ಸಿಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications