Ramya: ಧರ್ಮಸ್ಥಳ ಕೇಸ್‌ ಬಗ್ಗೆ ನಾವು ಸತ್ಯ ತಿಳಿದುಕೊಳ್ಳಬೇಕು: ಧ್ವನಿ ಎತ್ತಿದ ನಟಿ ರಮ್ಯಾ

ಧರ್ಮಸ್ಥಳದಲ್ಲಿ ಅಸಹಜ ಸಾವುಗಳ ಪ್ರಕರಣವು ಸಂಚಲನ ಸೃಷ್ಟಿಸುತ್ತಿದೆ. ವ್ಯಕ್ತಿಯೊಬ್ಬರು ಈ ಹಿಂದೆ ಹಲವಾರು ಹೆಣ್ಣುಮಕ್ಕಳ, ಮಹಿಳೆಯರ ಶವ ಹೂತಿರುವುದಾಗಿ ಹೇಳಿಕೆ ನೀಡಿ, ಅವುಗಳನ್ನು ಹೊರತೆಗೆಯಲು ಅವಕಾಶ ಕೋರಿದ್ದಾರೆ. ಹೀಗಾಗಿ ಇದರ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ಈ ಕೇಸ್‌ ಬಗ್ಗೆ ತನಿಖೆ ಕೋರಿ ಸೋಷಿಯಲ್‌ ಮೀಡಿಯಾಗಳಲ್ಲಿ ಜನ ಆಗ್ರಹಿಸುತ್ತಿದ್ದಾರೆ. ಕೇಸ್‌ ಬಗ್ಗೆ ನಟಿ ಮೋಹಕತಾರೆ ರಮ್ಯಾ ಧ್ವನಿ ಎತ್ತಿದ್ದಾರೆ.

ಈ ಬಗ್ಗೆ ರಮ್ಯಾ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಧರ್ಮಸ್ಥಳದಲ್ಲಿ ಸಾಮೂಹಿಕ ಅಂತ್ಯಕ್ರಿಯೆ ಮತ್ತು ಮಹಿಳೆಯರು ಕಾಣೆಯಾದ ಘಟನೆಗಳ ಬಗ್ಗೆ ಕೇಳಿ ನನಗೆ ತುಂಬಾ ಆಘಾತವಾಗಿದೆ ಎಂದು ರಮ್ಯಾ ಹೇಳಿದ್ದಾರೆ. ಧರ್ಮಸ್ಥಳ ಒಂದು ಪೂಜಾ ಸ್ಥಳವಾಗಿದ್ದು, ಕರ್ನಾಟಕದ ಜನರು ಇದನ್ನು ಹೆಚ್ಚಾಗಿ ಪೂಜಿಸುತ್ತಾರೆ. ಹಾಗಾಗಿ ಈ ಬಗ್ಗೆ ನ್ಯಾಯಯುತ ತನಿಖೆ ನಡೆಯುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ಸತ್ಯವನ್ನು ತಿಳಿದುಕೊಳ್ಳಬೇಕು ಎಂದು ನಟಿ ರಮ್ಯಾ ಆಗ್ರಹಿಸಿದ್ದಾರೆ.

actress-ramya-demands-truth-behind-dharmasthala-case

ಸಿಎಂ ಸಿದ್ದರಾಮಯ್ಯ ಅವರು ಕೂಡ ಈ ಕೇಸ್‌ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯ ವರದಿ ಬಂದ ನಂತರ ಚರ್ಚಿಸಿ ಎಸ್‌ಐಟಿ ರಚನೆ ಬಗ್ಗೆ ನಿರ್ಧರಿಸಲಾಗುವುದು. ತನಿಖೆ ವಿಷಯದಲ್ಲಿ ಯಾರ ಒತ್ತಡವೂ ನಡೆಯಲ್ಲ. ಕಾನೂನು ರೀತಿಯಲ್ಲೇ ಕ್ರಮ ಆಗಲಿದೆ ಎಂದು ಹೇಳಿದ್ದಾರೆ.

ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳು, ಮಹಿಳೆಯರ ಶವ ಹೂತಿರುವ ಬಗ್ಗೆ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿರುವುದು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಮಹಿಳಾ ಆಯೋಗ ಕೂಡ ಈ ಕೇಸ್‌ ಅನ್ನು ಗಂಭೀರವಾಗಿ ಪರಿಗಣಿಸಿದೆ. ಈ ಪ್ರಕರಣ ತನಿಖೆಗೆ ಎಸ್‌ಐಟಿ ರಚಿಸುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಒತ್ತಾಯಿಸಿದೆ.

ಮಾಧ್ಯಮಗಳಲ್ಲಿ ಪ್ರಸಾರವಾದಂತೆ ಮನುಷ್ಯರ ತಲೆಬುರುಡೆ ಸಿಕ್ಕಿರುವ ಬಗ್ಗೆ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಕುಟುಂಬದವರ ಹೇಳಿಕೆಯನ್ನು ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿದೆ. ಅನೇಕ ಕುಟುಂಬಗಳು ಕೇಸ್‌ ದಾಖಲಿಸಲು ಧರ್ಮಸ್ಥಳ ಠಾಣೆಗೆ ಹೋದಾಗ ಸಿಬ್ಬಂದಿ ಸೂಕ್ತವಾಗಿ ಸ್ಪಂದಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಧರ್ಮಸ್ಥಳದ ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಿಂದ ಎಷ್ಟು ಮಂದಿ ನಾಪತ್ತೆಯಾಗಿದ್ದಾರೆ? ಅವರಲ್ಲಿ ಎಷ್ಟು ಜನರ ಪತ್ತೆ ಮಾಡಲಾಗಿದೆ? ಪತ್ತೆ ಮಾಡಲಾಗದ ಪ್ರಕರಣಗಳೆಷ್ಟು? ಅಸ್ವಾಭಾವಿಕವಾದ ಸಾವು, ಕೊಲೆ ಪ್ರಕರಣಗಳಲ್ಲಿ ಕೈಗೊಂಡ ಕ್ರಮ ಮತ್ತು ಅತ್ಯಾಚಾರ ಪ್ರಕರಣಗಳ ವಿವರವನ್ನು ಮಹಿಳಾ ಆಯೋಗಕ್ಕೆ ಕಳುಹಿಸುವಂತೆ ಸೂಚಿಸಿದೆ.

ಯುಟ್ಯೂಬರ್‌ ಸಮೀರ್‌ ವಿರುದ್ಧ ಕೇಸ್‌

ಈ ಹಿಂದೆ ಸೌಜನ್ಯ ಕೇಸ್‌ ಬಗ್ಗೆ ವಿಡಿಯೋ ಮಾಡಿದ್ದ ಯುಟ್ಯೂಬರ್‌ ಸಮೀರ್‌ ಎಂಡಿ ಈಗ ಈ ಅಸಹಜ ಸಾವುಗಳು, ಅಂತ್ಯಕ್ರಿಯೆ ಬಗ್ಗೆಯೂ ವಿಡಿಯೋ ಹಂಚಿಕೊಂಡಿದ್ದರು. ಆದರೆ ಸಾಕ್ಷಿದಾರರ ಕುರಿತು ಸುಳ್ಳು ಮಾಹಿತಿಯುಳ್ಳ ವಿಡಿಯೋವನ್ನು ಸಮೀರ್‌ ಹಂಚಿಕೊಂಡು, ಸಾರ್ವಜನಿಕರನ್ನು ಉದ್ರೇಕಗೊಳ್ಳುವಂತೆ ಮಾಡಿದ್ದಾರೆ ಎಂದು ಆರೋಪಿಸಿ ಧರ್ಮಸ್ಥಳ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+