Ramya: ವಿಜಯಲಕ್ಷ್ಮಿ ನನಗೆ ಒಳ್ಳೆಯ ಸ್ನೇಹಿತೆ..ನನಗೆ ಬಕೆಟ್ ಹಿಡಿಯೋದಕ್ಕೆ ಬರೋದಿಲ್ಲ: ನಟಿ ರಮ್ಯಾ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಗೆ ಒಂದಲ್ಲ ಒಂದು ಸಂಕಷ್ಟಗಳು ಎದುರಾಗುತ್ತಿವೆ. ರೇಣುಕಾಸ್ವಾಮಿ ಹತ್ಯೆ ಕೇಸ್‌ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಈ ಕೇಸ್‌ನ ವಿಚಾರಣೆ. ಹೈಕೋರ್ಟ್‌ ನೀಡಿದ್ದ ಜಾಮೀನಿನ ಬಗ್ಗೆ ಸುಪ್ರೀಂ ಕೋರ್ಟ್ ಅಸಮಧಾನವನ್ನು ಹೊರ ಹಾಕಿತ್ತು. ಇದರ ಬೆನ್ನಲ್ಲೇ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅದನ್ನು ಬೆಂಬಲಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲಿಂದ ದರ್ಶನ್ ಫ್ಯಾನ್ಸ್ ನಟಿ ರಮ್ಯಾರನ್ನು ಅಶ್ಲೀಲ ಪದಗಳಿಂದ ಟೀಕಿಸುತ್ತಿದ್ದಾರೆ. ದರ್ಶನ್‌ ಫ್ಯಾನ್ಸ್‌ ವಿರುದ್ಧ ನಟಿ ರಮ್ಯಾ ಗರಂ ಆಗಿದ್ದು, ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್‌ ವಿಚಾರವಾಗಿ ನಟಿ ರಮ್ಯಾ ಧ್ವನಿ ಎತ್ತಿದ್ದಕ್ಕೆ ದರ್ಶನ್ ಅಭಿಮಾನಿಗಳು ಅಶ್ಲೀಲ ಪದಗಳಿಂದ ಅವರನ್ನು ನಿಂದಿಸುತ್ತಿರುವುದರಿಂದ ರಮ್ಯಾ ರೊಚ್ಚಿಗೆದ್ದಿದ್ದಾರೆ. ಅಂತಹವರ ವಿರುದ್ಧ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು ಸಮರ ಸಾರುವುದಕ್ಕೆ ಮುಂದಾಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕೆಟ್ಟದಾಗಿ ಕಮೆಂಟ್ ಮಾಡುತ್ತಿರುವ ದರ್ಶನ್ ಅಭಿಮಾನಿಗಳ ವಿರುದ್ಧ ದೂರು ನೀಡುವುದಕ್ಕೆ ಮೋಹಕ ತಾರೆ ರಮ್ಯಾ ನಿರ್ಧರಿಸಿದ್ದು, ಇಂತಹವರಿಗೆ ತಕ್ಕ ಪಾಠ ಕಲಿಸಲೇಬೇಕು ಎಂದು ಗುಡುಗಿದ್ದಾರೆ.

Actress Ramya Discusses Her Friendship With Darshan Wife Vijayalakshmi

ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಅಭಿಪ್ರಾಯವನ್ನು ಆಧರಿಸಿ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಅವರು ಒಂದು ಪೋಸ್ಟ್ ಮಾಡಿದ್ದರು. ಅದರಲ್ಲಿ ಸುಪ್ರೀಂ ಕೋರ್ಟ್ ಜನ ಸಾಮಾನ್ಯರ ನಂಬಿಕೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುವ ಭರವಸೆ ಎದ್ದು ಕಾಣುತ್ತಿದೆ ಎಂದು ಪೋಸ್ಟ್ ಹಾಕಿದ್ದರು. ಆ ಪೋಸ್ಟ್‌ ನೋಡಿ ರೊಚ್ಚಿಗೆದ್ದಿರುವ ನಟ ದರ್ಶನ್ ಫ್ಯಾನ್ಸ್‌ ನಟಿ ರಮ್ಯಾಗೆ ಅಶ್ಲೀಲ ಕಮೆಂಟ್‌ಗಳನ್ನು ಮಾಡುವುದಕ್ಕೆ ಶುರು ಮಾಡಿದ್ದರು. ಈ ಕಾರಣಕ್ಕೆ ರಮ್ಯಾ ರೊಚ್ಚಿಗೆದ್ದಿದ್ದಾರೆ.

ಈ ಕುರಿತು ನಟಿ ರಮ್ಯಾ ಅವರು ಟಿವಿ9ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿ, ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಆತ್ಮೀಯ ಸ್ನೇಹಿತೆ. ಆದರೆ, ನನಗೆ ಸತ್ಯ ಮುಖ್ಯ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಅಲ್ಲದೇ ಇಂತಹ ಅಶ್ಲೀಲ ಕಮೆಂಟ್‌ಗಳನ್ನು ಮಾಡುವವರ ವಿರುದ್ಧ ಮಹಿಳೆಯರು ಮುಂದೆ ಬರಬೇಕು ಎಂದು ಆಕ್ರೋಶ ಹೊರ ಹಾಕಿದ್ದಾರೆ. ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಗಮನಿಸಿ ಸಾಮಾನ್ಯ ಜನರಿಗೆ ನ್ಯಾಯ ಸಿಗುವ ಭರವಸೆಯಿದೆ ಎಂದು ಹೇಳಿದ್ದು, ಇದಕ್ಕೆ ಅಶ್ಲೀಲ ಪದಗಳನ್ನು ಬಳಸಿ ಕಮೆಂಟ್ ಮಾಡಿತ್ತಿದ್ದಾರೆ.

ಇದು ಅವರಿಗೆ ಕಾಮನ್ ಆಗಿದೆ. ಸುದೀಪ್, ಯಶ್‌ ಅವರಿಗೆ ಕೆಟ್ಟ ಪದಗಳಿಂದ ನಿಂದಿಸಿದ್ದಾರೆ. ಯಶ್ ಪತ್ನಿ, ಹಾಗೂ ಪುಟ್ಟ ಮಕ್ಕಳ ಬಗ್ಗೆನೂ ಕೆಟ್ಟ ಪದಗಳಲ್ಲಿ ಕಮೆಂಟ್ ಮಾಡಿದ್ದಾರೆ. ಇಂತಹ ಪ್ರವೃತ್ತಿಗೆ ಅಂತ್ಯ ಹಾಡಲೇಬೇಕಿದೆ ಎಂದು ನಟಿ ರಮ್ಯಾ ಗರಂ ಆಗಿದ್ದಾರೆ. ಇನ್ನೂ ನನಗೆ ಬಕೆಟ್ ಹಿಡಿಯೋದಕ್ಕೆ ಬರೋದಿಲ್ಲ. ನಾನು ಯಾರಿಗೂ ಹೆದರುವುದು ಇಲ್ಲ. ರಾಜಕಾರಣಿಗಳೇ ತಪ್ಪು ಮಾಡಲಿ, ನಟರೇ ತಪ್ಪು ಮಾಡಲಿ ತಪ್ಪು ಅಂದ್ಮೇಲೆ ತಪ್ಪೇ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲೇ ಬೇಕು. ಇಂತಹ ದುಷ್ಟರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ ಎಂದು ಹೇಳಿದ್ದಾರೆ.

ಇನ್ನೂ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಜೊತೆಗಿನ ಸ್ನೇಹದ ಬಗ್ಗೆನೂ ನಟಿ ರಮ್ಯಾ ಅವರು ಮಾತಾಡಿದ್ದಾರೆ. ದರ್ಶನ್ ಜೊತೆ ನಟಿಸಿದ 'ದತ್ತ' ಸಿನಿಮಾದಿಂದಲೂ ಪರಿಚಯವಿದೆ. ಇಬ್ಬರೂ ಒಳ್ಳೆಯ ಸ್ನೇಹಿತರಾಗಿದ್ದು, ಅವರ ಜೀವನದಲ್ಲಿ ಹೀಗೆಲ್ಲ ಆಗಬಾರದಿತ್ತು ಎಂದಿದ್ದಾರೆ. ಅಲ್ಲದೇ, ವಿಜಯಲಕ್ಷ್ಮಿ ಅಂದರೆ, ನನಗೆ ಬಲು ಇಷ್ಟ. ಆದರೆ, ನನಗೆ ಸತ್ಯವೇ ಮುಖ್ಯ. ನಾನು ನ್ಯಾಯದ ಪರವಾಗಿಯೇ ನಿಲ್ಲುವವಳು ಎಂದು ರಮ್ಯಾ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+