Ramya Divya Spandana: ಕನ್ನಡಿಗರಿಗೆ ವಿಶೇಷ ಸಂದೇಶ ಹಂಚಿಕೊಂಡ ನಟಿ ರಮ್ಯಾ!
Ramya Divya Spandana: ನಟಿ ರಮ್ಯಾ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ವಿಶೇಷ ಸಂದೇಶ ಹಂಚಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಅವರು ಮಾಡಿದ್ದ ಪೋಸ್ಟ್ ವಿವಾದಕ್ಕೆ ಕಾರಣವಾಗಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗಲಿದೆ ಎನ್ನುವ ಆಶಾಭಾವನೆ ಮೂಡಿದೆ. ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಸಿಗಲಿದೆ ಎಂದು ನಟಿ ರಮ್ಯಾ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಈ ಟ್ವೀಟ್‌ಗೆ ದರ್ಶನ್ ಅವರ ಅಭಿಮಾನಿಗಳು ಎನ್ನಲಾದ ಕೆಲವರು ಅಶ್ಲೀಲ ಕಮೆಂಟ್‌ಗಳನ್ನು ಮಾಡಿದ್ದರು.
ಇದು ಕರ್ನಾಟಕದಲ್ಲಿ ಭಾರೀ ವಿವಾದ ಹಾಗೂ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೇ ನಟ ದರ್ಶನ್ ಪರ - ವಿರೋಧ ಅಭಿಪ್ರಾಯಗಳು ವ್ಯಕ್ತವಾದವು. ಕೊನೆಗೆ ನಟಿ ರಮ್ಯಾ ಅವರು ಪೊಲೀಸರ ಮೊರೆ ಹೋಗಿದ್ದರು. ನಟ ದರ್ಶನ್ ಅವರ ಅಭಿಮಾನಿಗಳು ಎನ್ನಲಾದ ಹಲವರ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು ತನಿಖೆಗೆ ಮುಂದಾಗಿದ್ದಾರೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾ ಅವರು ಮತ್ತೊಂದು ವಿಶೇಷ ಪೋಸ್ಟ್ ಹಂಚಿಕೊಂಡಿದ್ದಾರೆ.

ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು, ನಾನು ಸದಾ ಚಿರಋಣಿ ಎಂದು ಬರೆದುಕೊಂಡಿರುವ ಅವರು ಈ ವಿಚಾರದಲ್ಲಿ ಬೆಂಬಲ ನೀಡಿದ ಕನ್ನಡಿಗರು ಹಾಗೂ ಅಭಿಮಾನಿಗಳ ಪೋಸ್ಟ್‌ನ ಸ್ಕ್ರೀನ್ ಶಾಟ್ ಅನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಮುಂದುವರಿದು ದ್ವೇಷ ಮತ್ತು ಹತಾಶೆಯಿಂದ ತುಂಬಿರುವ ಜಗತ್ತಿನಲ್ಲಿ, ಪ್ರೀತಿ ಮತ್ತು ಕರುಣೆಯೇ ಜಗತ್ತನ್ನು ಉತ್ತಮ ಸ್ಥಳವನ್ನಾಗಿ ಮಾಡುತ್ತದೆ - ಆದ್ದರಿಂದ ನನಗೆ ಸ್ವಲ್ಪ ಪ್ರೀತಿಯನ್ನು ತೋರಿಸಲು ಸಮಯ ತೆಗೆದುಕೊಂಡಿದ್ದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಧನ್ಯವಾದಗಳು! ♥️ ಎಂದು ಪೋಸ್ಟ್ ಮಾಡಿದ್ದಾರೆ.
ಇನ್ನೂ ಹತ್ತು ವರ್ಷ ಬಿಟ್ಟು ಬಂದರೂ ರಮ್ಯನೇ ಸ್ಯಾಂಡಲ್ ವುಡ್ ಕ್ವೀನು...💚 ಎಂದು ಅವರ ಅಭಿಮಾನಿಗಳು ಹೇಳಿದ್ದಾರೆ. ಹೆಣ್ಣು ಮಕ್ಕಳ ಪರವಾಗಿ ನಿಂತ ನಿಮಗೂ ಧನ್ಯವಾದಗಳು ❤️ Lots of love 🫶 ಹೇಮಂತ್ ಎನ್ನುವವರು, ಅವರು ಯಾರೂ ನಿಮ್ಮ ಮೇಲಿರುವ ಪ್ರೀತಿಯಿಂದ ನಿಮ್ಮ ಬೆಂಬಲಕ್ಕೆ ನಿಂತಿಲ್ಲ. ದರ್ಶನ್ ಮೇಲಿರುವ ದ್ವೇಷದಿಂದ ನಿಮ್ಮ ಜೊತೆ ನಿಂತಿದ್ದಾರೆ ಅಷ್ಟೇ ಎಲ್ಲರಿಗೂ ಒಳ್ಳೆಯದಾಗಲಿ🙏 ಕೆಟ್ಟ ಕಮೆಂಟ್ ಹಾಕಿದವರಿಗೆ ಶಿಕ್ಷೆಯಾಗಲಿ ಎಂದು ಹೇಳಿದ್ದಾರೆ.
ಅಥರ್ವ ಎನ್ನುವವರು ಮೇಡಂ ಸತ್ಯದ ಪರ, ನ್ಯಾಯದ ಪರ ನೀವಿದ್ದಿರಾ ನಿಮ್ಮ ನಿಷ್ಕಲ್ಮಷ ಹೃದಯದ ನ್ಯಾಯಯುತವಾದ ಕೆಲಸದ ಪರ ದೇವರು ಹಾಗೂ ನಿಮ್ಮ ಜೊತೆ ನಾವಿದ್ದೇವೆ ನೀವು ಏನು ಕೊಲೆ ಮಾಡಿಲ್ಲ ತಲೆ ಕೆಡಿಸಿಕೊಳ್ಳಬೇಡಿ. ಸದಾ ನಿಮ್ಮ ಜೊತೆ ನಾವಿರುತ್ತೇವೆ ಒಳ್ಳೆಯದಾಗಲಿ ಎಂದಿದ್ದಾರೆ.












Click it and Unblock the Notifications