Actress Ramya: ನಟ ದರ್ಶನ್ ಮತ್ತೆ ಜೈಲುಪಾಲು, ಅವರ ಸಹವಾಸ ಬಿಡ್ಬೇಕು: ನಟಿ ರಮ್ಯಾ ಫಸ್ಟ್ ರಿಯಾಕ್ಷನ್
ಬೆಂಗಳೂರು, ಆಗಸ್ಟ್ 15: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ಲ್ಲಿ ಈ ಹಿಂದೆ ಆರು ತಿಂಗಳು ಜೈಲಿನಲ್ಲಿ ವಿಲವಿಲ ಎನ್ನುವಂತಾಗಿದ್ದು, ಜಾಮೀನಿನ ಮೇಲೆ ಜೈಲಿನಿಂದ ದರ್ಶನ್ ಅಂಡ್ ಗ್ಯಾಂಗ್ ಬಿಡುಗಡೆಯಾಗಿದ್ದರು. ಆದರೆ, ನಿನ್ನೆ ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ದರ್ಶನ್, ಪವಿತ್ರಾ ಗೌಡ ಅಂಡ್ ಗ್ಯಾಂಗ್ ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದ್ದು, ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಬಗ್ಗೆ ಮಾಜಿ ಸಂಸದೆ ಹಾಗೂ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಸಾಫ್ಟ್ ಕಾರ್ನರ್ ತೋರಿಸಿದ್ದಾರೆ.
ಈ ಹಿಂದೆ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ನ್ಯಾಯ ಸಿಗಬೇಕು ಎಂದು ನಟಿ ರಮ್ಯಾ ಅವರು ಒಂದು ಪೋಸ್ಟ್ ಮಾಡಿದ್ದರು. ಆ ಪೋಸ್ಟ್ ಬಳಿಕ ನಟ ದರ್ಶನ್ ಫ್ಯಾನ್ಸ್ ರಮ್ಯಾ ಅವರ ವಿರುದ್ದ ಕೆಟ್ಟ ಕಾಮೆಂಟ್ ಗಳನ್ನ ಮಾಡಿದ್ರು. ಆ ಸಂದರ್ಭದಲ್ಲಿ ನಟ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡುವ ಮೂಲಕ ನಟಿ ರಮ್ಯಾ ಬಿಸಿ ಮುಟ್ಟಿಸುವಂತೆ ಮಾಡಿದ್ದರು. ಇದೀಗ ಸುಪ್ರೀಂ ಕೋರ್ಟ್ ತೀರ್ಪಿನ ಬೆನ್ನಲ್ಲೇ ನಟಿ ರಮ್ಯಾ ಅವರು ಪವಿತ್ರಾ ಗೌಡ ಹಾಗೂ ದರ್ಶನ್ ಜೈಲು ಸೇರಿರುವ ಕುರಿತು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ್ದಾರೆ.

ಈ ಕುರಿತು ಮಾಜಿ ಸಂಸದೆ ಹಾಗೂ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಮಾತನಾಡಿ, ದರ್ಶನ್ ಜೈಲಿಗೆ ಹೋಗಿದ್ದು ಬೇಸರ ತಂದಿದೆ. ಈ ಹಿಂದೆ ನಟ ದರ್ಶನ್ ಜೊತೆ ನಾನು ಸಿನಿಮಾ ಮಾಡಿದ್ದೇನೆ. ಸಿನಿಮಾ ಶೂಟಿಂಗ್ ವೇಳೆ ತಾವು ನಡೆದುಕೊಂಡು ಬಂದ ಹಾದಿ ಬಗ್ಗೆ ನನ್ನ ಬಳಿ ದರ್ಶನ್ ಅವರು ಹಂಚಿಕೊಂಡಿದ್ದರು. ದರ್ಶನ್ ಅವರ ಜೀವನವನ್ನ ಅವರೇ ಹಾಳು ಮಾಡಿಕೊಂಡ್ರು ಅನ್ಸಿತ್ತು. ನನಗೆ ಹೆಮ್ಮೆ ಅನಿಸಿತ್ತು. ಲೈಟ್ ಬಾಯ್ ಆಗಿ ಕೆಲಸ ಮಾಡಿ ಈ ಮಟ್ಟಕ್ಕೆ ಬೆಳೆದಿದ್ದಾರೆ. ಆದರೆ ಇತ್ತೀಚಿಗೆ ಅವರ ನಡವಳಿಕೆಯಿಂದ ತುಂಬಾ ಬೇಜಾರಾಗಿತ್ತು.
ಎಲ್ಲೋ ಒಂದು ಕಡೆ ಅವರು ತಮ್ಮ ಜೀವನ ಹಾಳು ಮಾಡಿಕೊಂಡರು. ಈ ಮಟ್ಟಕ್ಕೆ ಬೆಳೆದ ಮೇಲೆ ಜವಾಬ್ದಾರಿ ಇರುತ್ತದೆ. ದರ್ಶನ್ ಅವರ ಅಕ್ಕಪಕ್ಕ ಯಾರು ಒಳ್ಳೆಯವರಿಲ್ಲ ಅನಿಸುತ್ತೆ ಗೊತ್ತಿಲ್ಲ. ತಮ್ಮ ಸುತ್ತಮುತ್ತ ಒಳ್ಳೆಯವರನ್ನು ಇಟ್ಟುಕೊಂಡು ಒಳ್ಳೆಯ ದಾರಿಯಲ್ಲಿ ಕರೆದುಕೊಂಡು ಹೋಗಬಹುದಿತ್ತು. ಮೊದಲು ಅಕ್ಕಪಕ್ಕದವರ ಸಹವಾಸ ಬಿಡಬೇಕು ಎಂದು ನಟ ದರ್ಶನ್ ಗೆ ನಟಿ ರಮ್ಯಾ ಅವರು ಕಿವಿಮಾತು ಹೇಳಿದರು.
ಇನ್ನೊಂದು ಕಡೆ ಜಡ್ಜ್ಮೆಂಟ್ ಕೇಳಿದಾಗ ರಿಲೀಫ್ ಅಂತಾ ಅನಿಸಿದೆ. ಈಗ ನಾವು ಹೋಗುತ್ತಿರುವ ಸಮಾಜ ಕೆಟ್ಟ ದಾರಿಯಲ್ಲಿದೆ. ಹೆಣ್ಣುಮಕ್ಕಳ ರಕ್ಷಣೆ, ಗೌರವ ವಿಷಯದಲ್ಲಿ ಸುಪ್ರೀಂ ಕೋರ್ಟ್ ಆರ್ಡರ್ ಬಂದಾಗ ನಾನು ಮಾಡಿದ ಪೋಸ್ಟ್ಗೆ ಕೆಟ್ಟದಾಗಿ ಕಾಮೆಂಟ್ ಹಾಕುತ್ತಿದ್ದರು. ನಾವು ಸಮಾಜದ ನಿಯಮಗಳನ್ನ ಗೌರವಿಸಬೇಕು. ನಾವೇ ಕಾನೂನು ಕೈಗೆತ್ತಿಕೊಂಡರೆ ಈ ರೀತಿಯ ಕೆಟ್ಟ ಕೆಲಸಗಳು ಆಗುತ್ತವೆ. ಜಡ್ಜ್ಮೆಂಟ್‌ನಿಂದ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸುಪ್ರೀ ತೀರ್ಪಿನಿಂದ ಸಮಾಜಕ್ಕೆ ಒಂದೊಳ್ಳೆ ಮೆಸೇಜ್ ಹೋಗಿದೆ. ಯಾರೇ ಆಗಿರಲಿ ಎಲ್ಲರೂ ಸಮಾನರು. ದೊಡ್ಡವರೇ ಆಗ್ಲಿ ಚಿಕ್ಕವರೇ ಆಗ್ಲಿ ಎಲ್ಲರೂ ಕಾನೂನಿನ ಮುಂದೆ ಒಂದೇ ಎಂದು ತಿಳಿಸಿದ್ದಾರೆ.












Click it and Unblock the Notifications