Actress Ramya: ಮತ್ತೆ ದರ್ಶನ್, ಯಡಿಯೂರಪ್ಪ, ಪ್ರಜ್ವಲ್, ಸೂರಜ್ ರೇವಣ್ಣ ವಿರುದ್ಧ ಸಿಡಿದೆದ್ದ ಮೋಹಕತಾರೆ ರಮ್ಯಾ
ಬೆಂಗಳೂರು, ಜೂನ್. 22: ರಾಜ್ಯದಲ್ಲಿ ಕಳೆದ ಎರಡು ತಿಂಗಳಿನಿಂದ ಒಂದಲ್ಲ ಒಂದು ವಿಷಯ ಸದ್ದು ಮಾಡುತ್ತಲೆ ಇದೆ. ಒಬ್ಬರಾದ ಮೇಲೆ ಒಬ್ಬರ ಮೇಲೆ ಗಂಭೀರ ಪ್ರಕರಣಗಳು ದಾಖಲಾಗುತ್ತಿವೆ. ಇದಕ್ಕೆ ಪ್ರತಿಕ್ರಿಯಿಸುವವರ ಸಂಖ್ಯೆ ತೀರಾ ಚಿಕ್ಕದಿದೆ. ಆದರೂ, ಎಲ್ಲಾ ಘಟನೆಗಳಿಗೂ ಮೊದಲು ಸ್ಪಂದಿಸುವುದು ಮೋಕಹ ತಾರೆ ರಮ್ಯಾ.
ಹೌದು.... ಅದು ಲೈಂಗಿಕ ದೌರ್ಜನ್ಯ ಪ್ರಕರಣವಿರಲಿ, ಕೊಲೆ ಆರೋಪಗಳಿರಲಿ.. ದೊಡ್ಡ ನಟ, ದೊಡ್ಡ ರಾಜಕಾರಣಿ ಯಾರೇ ಆಗಿರಲಿ. ಎಲ್ಲರ ವಿರುದ್ಧ ಗಟ್ಟಿಯಾಗಿ ದನಿ ಎತ್ತುತ್ತಿರುವುದು ನಟಿ ರಮ್ಯಾ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ, ಕೊಲೆ ಆರೋಪಗಳನ್ನು ಎದುರಿಸುತ್ತಿರುವ ನಟ ದರ್ಶನ್, ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಈಗ ಅಸಹಜ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಆರೋಪದ ಕೇಸ್ ಹಾಕಿಸಿಕೊಂಡಿರುವ ಎಂಎಲ್‌ಸಿ ಸೂರಜ್ ರೇವಣ್ಣ ಎಲ್ಲರ ವಿರುದ್ಧ ನಟಿ, ಮಾಜಿ ಸಂಸದೆ ರಮ್ಯಾ ಕಿಡಿ ಕಾರಿದ್ದಾರೆ.

ನಾಲ್ವರು ಆರೋಪಿಗಳ ವಿರುದ್ಧ ರಮ್ಯಾ ಕೆಂಡಾಮಂಡಲ
ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ನಟಿ ರಮ್ಯಾ, "ಕಾನೂನನ್ನು ಉಲ್ಲಂಘಿಸಿ ಸುದ್ದಿಯಲ್ಲಿರುವವರು ಶ್ರೀಮಂತರು ಮತ್ತು ಶಕ್ತಿಶಾಲಿಗಳು. ಆದರೆ, ಅವರ ಹಿಂಸಾತ್ಮಕ ಕ್ರಿಯೆಗಳಿಂದ ಅಂತ್ಯ ಕಾಣುವವರು ಬಡವರು, ಮಹಿಳೆಯರು ಮತ್ತು ಮಕ್ಕಳು. ಕರ್ನಾಟಕದ ಜನಸಾಮಾನ್ಯರು" ಎಂದು ಬರೆದಿದ್ದಾರೆ.
"ಈ ಅಪರಾಧ ಪ್ರಕರಣಗಳನ್ನು ಹೊರಗೆ ತಂದ ಪೊಲೀಸರಿಗೆ ಮತ್ತು ಮಾಧ್ಯಮಗಳಿಗೆ ಹ್ಯಾಟ್ಸ್ ಆಫ್. ವಿಚಾರಣೆಯನ್ನು ತ್ವರಿತಗೊಳಿಸಿದಾಗ ಮತ್ತು ಪ್ರಕರಣಗಳನ್ನು ಅವುಗಳ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಾಗ ಮಾತ್ರ ನಿಜವಾಗಿಯೂ ನ್ಯಾಯ ಸಿಗುತ್ತದೆ. ಪ್ರಕರಣಗಳಲ್ಲಿ ನ್ಯಾಯವು ಮೇಲುಗೈ ಸಾಧಿಸದಿದ್ದರೆ, ಸಾರ್ವಜನಿಕರಿಗೆ ನಾವು ಯಾವ ಸಂದೇಶವನ್ನು ನೀಡುತ್ತೇವೆ?" ಎಂದು ಪ್ರಶ್ನಿಸಿದ್ದಾರೆ.
The ones breaking the law who have been in the news are the rich and powerful and the ones at the receiving end of their violent actions are the poor, women & children. The common people of Karnataka. Hats off to the police and media for bringing these crimes out. Justice will…
— Ramya/Divya Spandana (@divyaspandana) June 22, 2024
ಈ ಪೋಸ್ಟ್‌ಗೆ ನಟಿ ರಮ್ಯಾ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ನಟ ದರ್ಶನ್ ತೂಗುದೀಪ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಎಂಎಲ್‌ಸಿ ಸೂರಜ್ ರೇವಣ್ಣ ಅವರ ಹೆಸರನ್ನು ಹ್ಯಾಶ್ ಟ್ಯಾಗ್ ಮೂಲಕ ಉಲ್ಲೇಖಿಸಿದ್ದಾರೆ. ನಾಲ್ವರನ್ನು ಉಲ್ಲೇಖಿಸುವ ಮೂಲಕ ಈ ಪ್ರಕರಣಗಳನ್ನು ಬೇಗ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಒತ್ತಾಯಿಸಿದ್ದಾರೆ.

ರಮ್ಯಾ ಕೆಂಡ ಕಾರಿದ ನಾಲ್ಕು ಪ್ರಕರಣಗಳು
ನಟ ದರ್ಶನ್ ವಿರುದ್ಧ ಕೊಲೆ ಆರೋಪವಿದ್ದು, ಅವರನ್ನು ಸೇರಿಸಿ ಒಟ್ಟು ಹತ್ತೊಂಬ್ಬತ್ತು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟಿ ಪವಿತ್ರಾ ಗೌಡಾಗೆ ಅಶ್ಲಿಲ ಮೆಸೇಜ್ ಮಾಡಿದ್ದ ಎಂದು ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಕೊಲೆ ಮಾಡಿರುವ ಆರೋಪ ಇವರೆಲ್ಲರ ಮೇಲಿದೆ.
ಇನ್ನು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಹಾಯಕ್ಕಾಗಿ ಮಾಜಿ ಮುಖ್ಯಮಂತ್ರಿಯ ಮನೆಗೆ ತೆರಳಿದಾಗ ಅವರು ತನ್ನ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನವೆಸಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ತಾಯಿ ಮಾರ್ಚ್ ತಿಂಗಳಲ್ಲಿ ಎಫ್ಐಆರ್ ದಾಖಲಿಸಿದ್ದರು. ಬಳಿಕ ಅವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಇತ್ತೀಚೆಗೆ ನ್ಯಾಯಾಲಯ ಬಿಎಸ್‌ವೈಗೆ ಜಾಮೀನು ನೀಡಿದೆ.
ಇತ್ತ, ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಅವರು ಜೈಲು ಪಾಲಾಗಿದ್ದಾರೆ. ಇದರ ನಡುವೆಯೇ ಅವರ ಸಹೋದರ ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧವೂ ಗಂಭೀರ ಆರೋಪ ಕೇಳಿ ಬಂದಿದೆ. ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಅವರ ಮೇಲಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications