Ranya Rao: ₹102 ಕೋಟಿ ದಂಡ ಕಟ್ಟಿ: ಜೈಲಿನಲ್ಲಿರೋ ನಟಿ ರನ್ಯಾ ರಾವ್‌ಗೆ ಬಿಗ್ ಶಾಕ್
ಅಕ್ರಮ ಚಿನ್ನ ಸಾಗಾಟ ಕೇಸ್‌ನಲ್ಲಿ ಜೈಲಿನಲ್ಲಿರುವ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಅವರಿಗೆ ದೊಡ್ಡ ಸಂಕಷ್ಟ ಎದುರಾಗಿದೆ. ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಚಿನ್ನ ಸ್ಮಗ್ಲಿಂಗ್ ಕೇಸ್‌ನಲ್ಲಿ ರನ್ಯಾ ಸಿಕ್ಕಿಬಿದ್ದಿದ್ದರು. ಸದ್ಯ ಜೈಲುವಾಸದಲ್ಲಿರುವ ಅವರಿಗೆ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ರನ್ಯಾ ರಾವ್ ಅವರು ಅಕ್ರಮವಾಗಿ 127.3 ಕೆಜಿ ಚಿನ್ನ ಸಾಗಾಟ ಮಾಡಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಹಾಗಾಗಿ ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ಬರೋಬ್ಬರಿ 102.55 ಕೋಟಿ ದಂಡ ಪಾವತಿಸುವಂತೆ ರನ್ಯಾ ರಾವ್ಗೆ ನೋಟಿಸ್ ನೀಡಿದ್ದಾರೆ.
ಕಿಚ್ಚ ಸುದೀಪ್ ನಟನೆಯ ಮಾಣಿಕ್ಯ ಸಿನಿಮಾದಲ್ಲಿ ರನ್ಯಾ ರಾವ್ ನಟಿಸಿದ್ದರು. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್ ಅವರನ್ನು ಅಧಿಕಾರಿಗಳು ಬಂಧಿಸಿದ್ದರು. ಮಾರ್ಚ್‌ನಲ್ಲಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು. ತನಿಖೆಯಲ್ಲಿ ರನ್ಯಾ ರಾವ್ ಅಕ್ರಮವಾಗಿ 127.3 ಕೆ.ಜಿ ಚಿನ್ನ ಸಾಗಾಟ ಮಾಡಿರುವುದು ದೃಢಪಟ್ಟಿದೆ. ಈ ಹಿನ್ನೆಲೆ 102.55 ಕೋಟಿ ದಂಡ ಪಾವತಿಸುವಂತೆ ಡಿಆರ್‌ಐ ನೋಟಿಸ್ ನೀಡಿದೆ.

ಈ ಪ್ರಕರಣದಲ್ಲಿ ಕಳ್ಳಸಾಗಣೆ ವಸ್ತುಗಳನ್ನು 6 ತಿಂಗಳಲ್ಲಿ ಡಿಆರ್ಐ ಅಧಿಕಾರಿಗಳು ವಸೂಲಿ ಮಾಡಬೇಕಿದ್ದು, ಜೈಲಿಗೆ ತೆರಳಿ ರನ್ಯಾ ರಾವ್ ಸೇರಿದಂತೆ ನಾಲ್ವರು ಆರೋಪಿಗಳಿಗೆ ನೋಟಿಸ್ ನೀಡಿದ್ದಾರೆ. ಒಂದು ವೇಳೆ ದಂಡ ಪಾವತಿ ಮಾಡದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಿದ್ದಾರೆ. ಇಂದು ಹೈಕೋರ್ಟ್ನಲ್ಲಿ ಕಾಫಿಪೋಸಾ ಅರ್ಜಿಯ ವಿಚಾರಣೆ ಕೂಡ ನಡೆದಿದ್ದು, ಸೆಪ್ಟೆಂಬರ್ 11ಕ್ಕೆ ಮುಂದೂಡಲಾಗಿದೆ. ಹೀಗಾಗಿ ಡಿಆರ್‌ಐ ಅಧಿಕಾರಿಗಳು ತ್ವರಿತವಾಗಿ ತನಿಖೆ ನಡೆಸಿ ಆ ವಸ್ತುಗಳನ್ನು ರಿಕವರಿ ಮಾಡಿಕೊಳ್ಳಲಿದ್ದಾರೆ.
ಚಿನ್ನದ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರಿಗೆ ಕಾಫಿಫೋಸಾ ಅಡಿಯಲ್ಲಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಜಾಮೀನು ಪಡೆಯುವ ಅವಕಾಶವೇ ಇಲ್ಲದಂತಾಗಿದೆ. ರನ್ಯಾ ವಿರುದ್ಧ ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳಸಾಗಣೆ ಚಟುವಟಿಕೆಗಳ ತಡೆ ಕಾಯ್ದೆಯನ್ನು (ಕಾಫಿಫೋಸಾ) ಜಾರಿ ಮಾಡಲಾಗಿದೆ. ಹೀಗಾಗಿ ರನ್ಯಾ ರಾವ್ ಅವರಿಗೆ ಅವರ ಬಂಧನದ ಸಂಪೂರ್ಣ ಅವಧಿಯಲ್ಲಿ ಜಾಮೀನು ನೀಡಲಾಗುವುದಿಲ್ಲ ಎಂದು ತೀರ್ಪು ನೀಡಲಾಗಿದೆ.

ದುಬೈನಿಂದ ಅಕ್ರಮವಾಗಿ ಚಿನ್ನ ತಂದು ಸಿಕ್ಕಿಬಿದ್ದಿದ್ದ ನಟಿ ರನ್ಯಾ ದುಬೈಗೆ 15 ದಿನಕ್ಕೊಮ್ಮೆ ಹೋಗಿ ಬಂದಿರುವುದು ಡಿಆರ್‌ಐ ಅಧಿಕಾರಿಗಳ ತನಿಖೆಯಲ್ಲಿ ಬಯಲಾಗಿತ್ತು. 15 ದಿನಗಳಲ್ಲಿ ನಾಲ್ಕು ಬಾರಿ ದುಬೈಗೆ ಹೋಗಿ ಬಂದಿದ್ದು ಬೆಳಕಿಗೆ ಬಂದಿತ್ತು. ದುಬೈನಿಂದ ಬೆಂಗಳೂರಿಗೆ ಬಂದಿಳಿದಾಗ ವಿಮಾನ ನಿಲ್ದಾಣದಲ್ಲಿ ತಪಾಸಣೆ ಇಲ್ಲದೆ ರನ್ಯಾ ಹೊರಗೆ ಸಲೀಸಾಗಿ ಬರುತ್ತಿದ್ದರು. ಇದಕ್ಕೆ ಕಾನ್ಸಟೇಬಲ್ ಕೂಡ ಸಾಥ್ ನೀಡುತ್ತಿದ್ದರು. ಏರ್‌ಪೋರ್ಟ್ ಕಾನ್ಸಟೇಬಲ್ ಆದ ಬಸವರಾಜ್ ರನ್ಯಾ ರಾವ್ ಡಿಜಿಪಿ ಮಗಳು ಎಂದು ತಪಾಸಣೆ ಇಲ್ಲದೆ ಏರ್‌ಪೋರ್ಟ್‌ನಿಂದ ಕರೆತರುತ್ತಿದ್ದರು ಎಂದು ಹೇಳಲಾಗಿತ್ತು.












Click it and Unblock the Notifications